Headlines

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ‌ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…

Read More

ಮಹಿಳೆ ಸ್ನಾನ ಮಾಡುವಾಗ ಇಣುಕಿ ನೋಡಿದ ಕಾಮುಕ ಬಂಧನ

ಮಹಿಳೆ ಸ್ನಾನ ಮಾಡುವಾಗ ಇಣುಕಿ ನೋಡಿದ ಕಾಮುಕ ಬಂಧನ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಮಹಿಳೆಯೊಬ್ಬರು ಸ್ನಾನ ಮಾಡುವಾಗ ಇಣುಕಿ ನೋಡಿದ ವ್ಯಕ್ತಿಯನ್ನು ಪೊಲೀಸರು ಸೋಮವಾರ ಬಂದಿಸಿದ್ದಾರೆ. ಗೌರಪುರ ನಿವಾಸಿ ಮನೋಜ್(25) ಬಂಧಿತ ಆರೋಪಿ. ಸೋಮವಾರ ಮಧ್ಯಾಹ್ನ ಮಹಿಳೆ ಸ್ನಾನ ಮಾಡುವುದನ್ನು ಇಣುಕಿ ನೋಡುತ್ತಿದ್ದಾಗ ಆಕೆಯ ಪತಿ ಗಮನಿಸಿದ್ದಾನೆ. ಕೂಡಲೇ ಮನೋಜ್ ಅಲ್ಲಿಂದ ಪರಾರಿಯಾಗಿದ್ದಾನೆ. ಹೊಸಮನೆ ಪೊಲೀಸ್ ಠಾಣೆಗೆ ಈ ಕುರಿತು ದೂರು ನೀಡಲಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಮನೋಜ್ ನನ್ನು ಬಂಧಿಸಿದ್ದಾರೆ. ಮನೋಜ್ ವಿರುದ್ಧ ಬೆಂಗಳೂರಿನಲ್ಲಿಯೂ…

Read More

ರಿಪ್ಪನ್‌ಪೇಟೆ – ಭಕ್ತವೃಂದದಿಂದ ತ್ರಿವಿಧ ದಾಸೋಹಿ ಶ್ರೀಗಳ 118 ನೇ ಜನ್ಮ ದಿನಾಚರಣೆ

ರಿಪ್ಪನ್‌ಪೇಟೆ – ಭಕ್ತವೃಂದದಿಂದ ತ್ರಿವಿಧ ದಾಸೋಹಿ ಶ್ರೀಗಳ 118 ನೇ ಜನ್ಮ ದಿನಾಚರಣೆ ರಿಪ್ಪನ್‌ಪೇಟೆ : ತ್ರಿವಿಧ ದಾಸೋಹಿ ,ಶತಾಯಿಷಿ ಕಾಯಕಯೋಗಿ ದಿವಂಗತ ಡಾ.ಶಿವಕುಮಾರ ಮಹಾಸ್ವಾಮಿಗಳ ೧೧೮ ನೇ ವರ್ಷದ ಜನ್ಮ ದಿನಾಚರಣೆಯನ್ನು ಸಂಭ್ರಮ ಸಡಗರದೊಂದಿಗೆ ಆಚರಿಸಲಾಯಿತು. ರಿಪ್ಪನ್‌ಪೇಟೆ ಭಕ್ತ ಬಳಗದವರು ಇಲ್ಲಿನ  ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಡಾ.ಶಿವಕುಮಾರ ಮಹಾಸ್ವಾಮಿಗಳ ೧೧೮ ನೇ ವರ್ಷದ ಜನ್ಮ ದಿನಾಚರಣೆಯಲ್ಲಿ ಶ್ರೀಗಳವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನುಡಿ ಸೇವೆ ಸಲ್ಲಿಸಿದರು. ಸಾಗರ ನಗರ ಸಭೆಯ ನಿವೃತ್ತ ಸಮುದಾಯ ಸಂಘಟನಾಧಿಕಾರಿ…

Read More

ಈದ್ಗಾ ಮೈದಾನಕ್ಕೆ ಬೇಲಿ – ಸ್ಥಳದಲ್ಲಿ ಬಿಗುವಿನ ವಾತಾವರಣ | ಎಸ್ ಪಿ ಮಿಥುನ್ ಕುಮಾರ್ ಮಧ್ಯಸ್ಥಿಕೆಯಿಂದ ತಿಳಿಗೊಂಡ ಪರಿಸ್ಥಿತಿ

SHIVAMOGGA | ಈದ್ಗಾ ಮೈದಾನಕ್ಕೆ ಬೇಲಿ – ಸ್ಥಳದಲ್ಲಿ ಬಿಗುವಿನ ವಾತಾವರಣ | ಎಸ್ ಪಿ ಮಿಥುನ್ ಕುಮಾರ್ ಮಧ್ಯಸ್ಥಿಕೆಯಿಂದ ತಿಳಿಗೊಂಡ ಪರಿಸ್ಥಿತಿ ಶಿವಮೊಗ್ಗ : ಜಿಲ್ಲಾಧಿಕಾರಿ ಕಚೇರಿ ಮುಂದಿನ ಮೈದಾನದ ವಿವಾದ ಮತ್ತೆ ಮುನ್ನೆಲೆಗೆ ಬಂದಿದ್ದು, ಇಲ್ಲಿನ ಈದ್ಗಾ ಮೈದಾನದಲ್ಲಿ ಹಿಂದೂ ಕಾರ್ಯಕರತರು ಹಾಗೂ ಪೊಲೀಸರು ನಡುವೆ ಮಾತಿನ ಚಕಮಕಿ ನಡೆದಿದ್ದು ಬಿಗುವಿನ ವಾತಾವರಣ ನಿರ್ಮಾಣಗೊಂಡಿದೆ. ರಂಜಾನ್‌ ಪ್ರಾರ್ಥನೆ ನಂತರ ವಿವಾದಿತ ಮೈದಾನಕ್ಕೆ ಬೇಲಿ ಹಾಕಲಾಗಿದ್ದು, ಸಾರ್ವಜನಿಕ ಸ್ಥಳದಲ್ಲಿ ಬೇಲಿ ಹಾಕಿದ್ದು ಯಾರು ಎಂದು ಬೇಲಿ…

Read More

ಬ್ಯಾಂಕ್ ದರೋಡೆ ಮಾಡಿ 17 ಕೆಜಿ ಚಿನ್ನ ಪಾಳು ಬಾವಿಯಲ್ಲಿ ಬಚ್ಚಿಟ್ಟಿದ್ದ ಖದೀಮರು – ಮಾಲು ಸಮೇತ ಆರು ಜನ ಆರೋಪಿಗಳ ಬಂಧನ

ಬ್ಯಾಂಕ್ ದರೋಡೆ ಮಾಡಿ 17 ಕೆಜಿ ಚಿನ್ನ ಪಾಳು ಬಾವಿಯಲ್ಲಿ ಬಚ್ಚಿಟ್ಟಿದ್ದ ಖದೀಮರು – ಮಾಲು ಸಮೇತ ಆರು ಜನ ಆರೋಪಿಗಳ ಬಂಧನ ನ್ಯಾಮತಿಯ ಬ್ಯಾಂಕೊಂದರಲ್ಲಿ ಕಳೆದ ಆರು ತಿಂಗಳ ಹಿಂದೆ ನಡೆದಿದ್ದ ದರೋಡೆ ಪ್ರಕರಣವನ್ನು ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದು, ಚಿನ್ನಾಭರಣ ಸಹಿತ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬಗ್ಗೆ ಪೂರ್ವ ವಲಯ ಐಜಿಪಿ ಡಾ.B.R.ರವಿಕಾಂತೇಗೌಡ ಮಾಹಿತಿ ನೀಡಿದ್ದಾರೆ. 2024ರ ಅಕ್ಟೋಬರ್ 28ರಂದು ನ್ಯಾಮತಿ ಎಸ್‍ಬಿಐ ಬ್ಯಾಂಕ್​ನಲ್ಲಿ 13 ಕೋಟಿ ರೂ. ಮೌಲ್ಯದ 17 ಕೆಜಿ…

Read More

ರಿಪ್ಪನ್ ಪೇಟೆಯಲ್ಲಿ ಸಡಗರ-ಸಂಭ್ರಮದಿಂದ ರಂಜಾನ್ ಆಚರಣೆ

ರಿಪ್ಪನ್ ಪೇಟೆಯಲ್ಲಿ ಸಡಗರ-ಸಂಭ್ರಮದಿಂದ ರಂಜಾನ್ ಆಚರಣೆ | ಪರಸ್ಪರ ಸಾಮರಸ್ಯದಿಂದ ಸಮಾಜದಲ್ಲಿ‌ ನೆಮ್ಮದಿ ಸಾಧ್ಯ – ಮುನೀರ್ ಸಖಾಫ಼ಿ ರಿಪ್ಪನ್ ಪೇಟೆ : ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಹಾಗೂ ಮೆಕ್ಕಾ ಮಸ್ಜಿದ್ ನ ಮುಸ್ಲಿಂ ಬಾಂಧವರುಗಳು ಧರ್ಮಗುರುಗಳಾದ  ಮುನೀರ್ ಸಖಾಫಿ ಮತ್ತು ಮೌಲಾನ ರಫ಼ೀದ್ ಹಜರತ್ ರವರ ನೇತೃತ್ವದಲ್ಲಿ ರಂಜಾನ್ ಹಬ್ಬವನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಿದರು. ಹೊಸನಗರ ರಸ್ತೆಯಿಂದ ಮೆರವಣಿಗೆ ಹೊರಟು ಸಾಗರ ರಸ್ತೆಯಲ್ಲಿರುವ ಈದ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಕಳೆದ…

Read More

RIPPONPETE | ಪಟ್ಟಣದಾದ್ಯಂತ ಸಂಭ್ರಮದ ಯುಗಾದಿ ಆಚರಣೆ

RIPPONPETE | ಪಟ್ಟಣದಾದ್ಯಂತ ಸಂಭ್ರಮದ ಯುಗಾದಿ ಆಚರಣೆ ರಿಪ್ಪನ್ ಪೇಟೆ : ಪಟ್ಟಣ ಸೇರಿದಂತೆ  ಎಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆ ಮಾಡಿತ್ತು, ಯುಗಾದಿ ಅಮಾವಾಸ್ಯೆ ಅಂಗವಾಗಿ ಸಾರ್ವಜನಿಕರು ಕುಟುಂಬದವರೊಂದಿಗೆ ಸ್ಥಳೀಯ ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಹಬ್ಬದ ಪ್ರಯುಕ್ತ ಮನೆಗಳಲ್ಲಿ ವಿಶೇಷ ಸಿಹಿ ಅಡುಗೆಯನ್ನೂ ತಯಾರಿಸಲಾಗುತ್ತಿದೆ.ಹಿಂದೂಗಳ ಧಾರ್ಮಿಕ ನಂಬಿಕೆ ಪ್ರಕಾರ ಯುಗಾದಿಯು ವರ್ಷದ ಮೊದಲ ಹಬ್ಬವಾಗಿದೆ. ಹೀಗಾಗಿ ಸಂಭ್ರಮದಿಂದ ಈ ಹಬ್ಬವನ್ನು ಆಚರಿಸುವುದು ವಾಡಿಕೆ. ಭಾನುವಾರ ಹಬ್ಬ ಆಚರಿಸಲು ಶನಿವಾರವೇ ವಿವಿಧ ಸಾಮಗ್ರಿಗಳ ಖರೀದಿಯಲ್ಲಿ…

Read More

ವಿದ್ಯುತ್ ಶಾರ್ಟ್‌ಸಕ್ಯೂಟ್ ; ಹೊತ್ತಿ ಉರಿದ ತೆಂಗಿನಮರ

ವಿದ್ಯುತ್ ಶಾರ್ಟ್‌ಸಕ್ಯೂಟ್ ; ಹೊತ್ತಿ ಉರಿದ ತೆಂಗಿನಮರ ಹೊಸನಗರ ; ತೆಂಗಿನಮರಕ್ಕೆ ಬೆಂಕಿ ಬಿದ್ದು ಭಾರಿ ಅನಾಹುತವೊಂದು ತಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾವಿನಕೊಪ್ಪದಲ್ಲಿ ನಡೆದಿದೆ. ಯುಗಾದಿ ಹಬ್ಬದ ಭಾನುವಾರ ಸಂಜೆ ಸುಮಾರು ಏಳು ಗಂಟೆಯ ಸಮಯದಲ್ಲಿ ಶ್ರೀನಿವಾಸ್ ಕಾಮತ್ ರವರಿಗೆ ಸೇರಿದ ತೆಂಗಿನಮರಕ್ಕೆ ವಿದ್ಯುತ್ ಶಾರ್ಟ್‌ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ತೆಂಗಿನಮರ ಸುಟ್ಟು ಕರಕಲಾಗಿದೆ. ಸ್ಥಳೀಯರು ಸೇರಿದ ಸಂದರ್ಭದಲ್ಲಿ ಅಲ್ಲಿಗೆ ಆಗಮಿಸಿದ ಹೊಸನಗರದ ಸರ್ಕಲ್ ಇನ್ಸ್‌ಪೆಕ್ಟರ್…

Read More

ಬಾಳೂರು ಗ್ರಾಪಂ ಮಾಜಿ ಅಧ್ಯಕ್ಷ ಕುಕ್ಕಳಲೆ ನಾಗರಾಜ್ ಗೌಡ ನಿಧನ

ಬಾಳೂರು ಗ್ರಾಪಂ ಮಾಜಿ ಅಧ್ಯಕ್ಷ ಕುಕ್ಕಳಲೆ ನಾಗರಾಜ್ ಗೌಡ ನಿಧನ ರಿಪ್ಪನ್ ಪೇಟೆ : ಇಲ್ಲಿನ ಬಾಳೂರು ಗ್ರಾ.ಪಂ ಮಾಜಿ ಅಧ್ಯಕ್ಷರು ಹಾಗೂ ವೀರಶೈವ ಲಿಂಗಾಯತ ಸಮಾಜದ ಹಿರಿಯ ಮುಖಂಡರಾದ ಕುಕ್ಕಳಲೆ ಕೆ.ಆರ್ ನಾಗರಾಜ ಗೌಡರವರು ಹೃದಯಾಘಾತದಿಂದ ಬೆಳಗಿನ ಜಾವ ನಿಧನರಾಗಿದ್ದಾರೆ. ಬಾಳೂರು ಗ್ರಾಪಂ ಅಧ್ಯಕ್ಷರಾಗಿ ಹಾಗೂ ವೀರಶೈವ ಸಮಾಜದ ಮುಖಂಡರಾಗಿ ವಿವಿಧ ಸಮಾಜಮುಖಿ ಕಾರ್ಯಗಳಲ್ಲಿ ಮುಂಚೂಣಿಯಲ್ಲಿ ನಾಗರಾಜ್ ಗೌಡ ರವರು ಅಲ್ಪ ಕಾಲದ ಆರೋಗ್ಯ ಸಮಸ್ಯೆಯಿಂದ ಬಳಲುತಿದ್ದರು. ಕುಕ್ಕಳಲೆ ರೇಣುಕಪ್ಪ ಗೌಡ ರವರ ಪುತ್ರರಾದ ನಾಗರಾಜ್…

Read More

ಹಿಂದುತ್ವದ ಬಗ್ಗೆ ಮಾತನಾಡಿದವರನ್ನೆಲ್ಲ ಬಿಜೆಪಿ ಮುಗಿಸುತ್ತಿದೆ : ಶಾಸಕ ಬೇಳೂರು ಗೋಪಾಲಕೃಷ್ಣ

ಹಿಂದುತ್ವದ ಬಗ್ಗೆ ಮಾತನಾಡಿದವರನ್ನೆಲ್ಲ ಬಿಜೆಪಿ ಮುಗಿಸುತ್ತಿದೆ : ಶಾಸಕ ಬೇಳೂರು ಗೋಪಾಲಕೃಷ್ಣ ಸಾಗರ:  ಹಿಂದುತ್ವದ ಬಗ್ಗೆ ಯಾರು ಮಾತನಾಡಿದ್ದಾರೋ ಅವರನ್ನೆಲ್ಲ ಬಿಜೆಪಿ ಮುಗಿಸಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ. ಮಾಧ್ಯಮಗಳೆದುರು ಮಾತನಾಡಿದ ಅವರು,  ಉತ್ತರ ಕನ್ನಡದ ಮಾಜಿ ಸಂಸದ ಅನಂತ್‌ಕುಮಾರ್ ಹೆಗಡೆ, ಶಿವಮೊಗ್ಗದ ಕೆ ಎಸ್ ಈಶ್ವರಪ್ಪ, ಮೈಸೂರಿನ ಪ್ರತಾಪ್ ಸಿಂಹನ್ನು ಈವರೆಗೆ ಮುಗಿಸಿದ್ದರು. ಈಗ ಆ ಸಾಲಿಗೆ ಶಾಸಕ ಬಸವನಗೌಡ ಪಾಟೀಲ್ ಸೇರಿದ್ದಾರೆ ಎಂದು ಹೇಳಿದ್ದಾರೆ. ಹಿಂದೂ ಹುಲಿಯನ್ನು ಬಿಜೆಪಿಯ ರಾಷ್ಟ್ರೀಯ ಮತ್ತು ರಾಜ್ಯಾಧ್ಯಕ್ಷರು…

Read More

RIPPONPETE | ಬಾರ್ ಮಾಲೀಕರ ಬಳಿ ಹಣ ಪಡೆದಿದ್ದಾರೆ ಎಂಬ ಆರೋಪದಲ್ಲಿ ಹುರುಳಿಲ್ಲ – ಗ್ರಾಪಂ ಸದಸ್ಯ ಸುಂದರೇಶ್ ಸ್ಪಷ್ಟನೆ

RIPPONPETE | ಬಾರ್ ಮಾಲೀಕರ ಬಳಿ ಹಣ ಪಡೆದಿದ್ದಾರೆ ಎಂಬ ಆರೋಪದಲ್ಲಿ ಹುರುಳಿಲ್ಲ – ಗ್ರಾಪಂ ಸದಸ್ಯ ಸುಂದರೇಶ್ ಸ್ಪಷ್ಟನೆ ರಿಪ್ಪನ್ ಪೇಟೆ : ಪಟ್ಟಣದ ಗ್ರಾಮ ಪಂಚಾಯತ್ ನಲ್ಲಿ ಇತ್ತೀಚೆಗೆ ನಡೆದ ಸಾಮಾನ್ಯ ಸಭೆಯಲ್ಲಿ ಬಾರ್ ಮಾಲೀಕರ ಬಳಿ ಸದಸ್ಯರ ಹೆಸರಿನಲ್ಲಿ ಹಣ ಪಡೆದ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಗ್ರಾಪಂ ಸದಸ್ಯ ಸುಂದರೇಶ್ ಸ್ಪಷ್ಟನೆ ನೀಡಿದರು. ಪಟ್ಟಣದ ರಾಯಲ್ ಕಂಫರ್ಟ್ ಸಭಾಂಗಣದಲ್ಲಿ ನಡೆದ ಪತ್ರೀಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿ ನನ್ನ ಏಳಿಗೆಯನ್ನು ಸಹಿಸದ ಕೆಲವರು ನಾನು ಜಾಲುಕ್ಯ…

Read More