ರಿಪ್ಪನ್ ಪೇಟೆ:: ರಾಜ್ಯಾದ್ಯಂತ ಕೋವಿಡ್ ಹಿನ್ನಲೆ ಲಾಕ್ ಡೌನ್ ಹೇರಿಕೆಯಿಂದ ಜನ ಜೀವನ ಅಸ್ತವ್ಯಸ್ತವಾಗಿರುವಾಗ ರಿಪ್ಪನ್ ಪೇಟೆಯ ಬರುವೆ 3 ನೇ ವಾರ್ಡಿನ ಗ್ರಾಮ ಪಂಚಾಯಿತಿಯ ಯುವ ಸದಸ್ಯರಾದ ನಿರೂಪ್ ಕುಮಾರ್ ರವರು ಜನರ ಕಷ್ಟಕ್ಕೆ ಬೆನ್ನಿಗೆ ನಿಂತು ಎಲ್ಲಾ ಗ್ರಾಮ ಪಂಚಾಯತ್ ಸದಸ್ಯರಿಗೆ ಮಾದರಿಯಾಗಿದ್ದಾರೆ..
ವೈಯಕ್ತಿಕವಾಗಿ ಹಾಗೂ ಸ್ನೇಹಿತರ ಸಹಕಾರದೊಂದಿಗೆ ಸ್ವಾಮಿ ವಿವೇಕಾನಂದ ಟ್ರಸ್ಟ್ ಮುಖಾಂತರ ತನ್ನ ವಾರ್ಡಿನ ಸುಮಾರು 300 ಕುಟುಂಬಕ್ಕೆ ದಿನಸಿ ಕಿಟ್ ಕೊಟ್ಟು ಅವರ ಕಷ್ಟಕ್ಕೆ ಬೆಂಬಲವಾಗಿ ನಿಂತು ಆ ಕುಟುಂಬಗಳಲ್ಲಿ ದೈರ್ಯ ತುಂಬುವಲ್ಲಿ ಯಶಸ್ವಿಯಾಗಿದ್ದಾರೆ.
ಇವರ ಕಾರ್ಯವೈಖರಿಯನ್ನು ಕಂಡು ರಿಪ್ಪನ್ ಪೇಟೆಯ ನಾಗರೀಕರು ಇದ್ದರೆ ನಿರೂಪ್ ಕುಮಾರ್ ರಂತಹ ಗ್ರಾಮ ಪಂಚಾಯತಿಯ ಸದಸ್ಯರು ಇರಬೇಕು ಎಂದೂ ಪ್ರಶಂಸನೀಯ ಮಾತುಗಳನ್ನಾಡುತ್ತಿರುವುದು ಸಾಮಾನ್ಯವಾಗಿದೆ.
ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಎಲ್ ವೆಂಕಟೇಶ್ ರವರ ಪುತ್ರನಾದ ನಿರೂಪ್ ಕುಮಾರ್ ಗ್ರಾಮ ಪಂಚಾಯತ್ ಸದಸ್ಯರಾಗಿ ವಾರ್ಡ್ ನ ಅಭಿವೃದ್ಧಿ ಕಾರ್ಯಗಳಲ್ಲಿ ಉಳಿದ ಸದಸ್ಯರಿಗಿಂತ ಮುಂಚೂಣಿಯಲ್ಲಿದ್ದಾರೆ.
ರಿಪ್ಪನ್ ಪೇಟೆಯ ಕೆಲ ಜಡ್ಡು ಹಿಡಿದ ರಾಜಕಾರಣಿಗಳ ನಡುವೆ ನಿರೂಪ್ ಕುಮಾರ್ ಆಶಾಕಿರಣದಂತೆ ಗೋಚರಿಸುತ್ತಿದ್ದಾರೆ…
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್