ಹುಣಸೂರು (19-06-2021): ಆಘಾತಕಾರಿ ಘಟನೆಯೊಂದು ಹುಣಸೂರು ತಾಲ್ಲೂಕಿನ ತರಿಕಲ್ಲು ಗ್ರಾಮದಲ್ಲಿ ನಡೆದಿದ್ದು, ನೀರು ತುಂಬಿದ ಬಕೆಟ್‌ಗೆ ಬಿದ್ದು ಪುಟಾಣಿ ಮಗು ಮೃತಪಟ್ಟಿದೆ.
ಸುಂದರ್‌ರಾಜ್ ಅವರ ಮಗ ಸಮರ್ಥ (2) ಮನೆ ಒಳಗಡೆ ಆಟವಾಡುತ್ತಿದ್ದ, ಮನೆಯವರು ಬೇರೆ ಕೆಲಸ ಮಾಡುತ್ತಿದ್ದರು. ಈ ವೇಳೆ ಮಗು ಬಚ್ಚಲು ಮನೆಯ ಹತ್ತಿರ ಹೋಗಿ ನೀರು ತುಂಬಿದ ಬಕೆಟ್‌ಗೆ ಆಯತಪ್ಪಿ ಬಿದ್ದು ಸಾವನ್ನಪ್ಪಿದೆ.
ಸ್ವಲ್ಪ ಸಮಯದ ಬಳಿಕ ಮಗುವನ್ನು ಮನೆಯವರು ಹುಡುಕಾಟವನ್ನು ನಡೆಸಿದ್ದಾರೆ. ಈ ವೇಳೆ ಮಗು ನೀರಿನ ಬಕೆಟ್ ಗೆ ಬಿದ್ದು ಮೃತಪಟ್ಟಿರುವುದು ದೃಢಪಟ್ಟಿದೆ. ಇತ್ತೀಚೆಗೆ ಕರಾವಳಿಯಲ್ಲಿ ಕೂಡ ಇಂತದ್ದೇ ಘಟನೆ ವರದಿಯಾಗಿತ್ತು. ಆದ್ದರಿಂದ ಪೋಷಕರು ತಮ್ಮ ಪುಟ್ಟ ಕಂದಮ್ಮಗಳ ಬಗ್ಗೆ ಎಚ್ಚರಿಕೆಯನ್ನು ವಹಿಸಬೇಕಿದೆ.
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…