ಬಿಜೆಪಿ ಸರ್ಕಾರದ ಜನವಿರೋಧಿ ನೀತಿ ವಿರುದ್ದ ಜೆಡಿಎಸ್ ಪ್ರತಿಭಟನೆ::

ರಿಪ್ಪನ್ ಪೇಟೆ:: ಕರ್ನಾಟಕ ರಾಜ್ಯದಲ್ಲಿ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಜನ ವಿರೋಧಿ ನೀತಿ ಅನುಸರಿಸುತ್ತಿದೆ. ತೈಲ ಬೆಲೆ ಏರಿಕೆ ಹಾಗೂ ಜನಸಾಮಾನ್ಯರು ಉಪಯೋಗಿಸುವ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಇದರಿಂದ ಬಡವರು, ರೈತರು,ಕೂಲಿಕಾರ್ಮಿಕರು ಹೈರಾಣಾಗಿ ಹೋಗಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಪಕ್ಷದ ವತಿಯಿಂದ ಇಂದು ರಿಪ್ಪನ್ ಪೇಟೆಯಲ್ಲಿ ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದರು.
ಈ ಸಂಧರ್ಭದಲ್ಲಿ ಮಾತನಾಡಿದ ರಾಜ್ಯ ಜ್ಯಾತ್ಯಾತೀತ ಜನತಾದಳದ ಮಾಜಿ ಪ್ರಧಾನ ಕಾರ್ಯದರ್ಶಿಗಳಾದ ಆರ್ ಎ ಚಾಬುಸಾಬ್ ರವರು
ಕೋವಿಡ್ ಹಿನ್ನೆಲೆಯಲ್ಲಿ ಜನರು ಉದ್ಯೋಗವಿಲ್ಲದೇ ಜೀವನ ನಡೆಸುವುದು ತೀವ್ರ ತೊಂದರೆಯಾಗಿರುತ್ತದೆ. ರೈತ ವಿರೋಧಿ ಕೃಷಿ ಕಾಯ್ದೆಗಳಿಂದ ರೈತರು ಬೆಳೆದ ಉತ್ಪನ್ನಗಳನ್ನು  ಖರೀದಿಸುವವರು ಇಲ್ಲದೆ ಬಡ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಪಾಠ ಪ್ರವಚನಗಳಿಲ್ಲದೆ ಇಡೀ ಶಿಕ್ಷಣ ವ್ಯವಸ್ಥೆ ಹಾಳಾಗಿ ಹೋಗಿದೆ ಎಂದರು.
ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ರೈತರ ಜನಸಾಮಾನ್ಯರ ಕೂಲಿಕಾರ್ಮಿಕರ ವಿದ್ಯಾರ್ಥಿಗಳ ನೆರವಿಗೆ ಧಾವಿಸಬೇಕಾದ ರಾಜ್ಯ ಸರ್ಕಾರ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದು, ಕೇವಲ ಮೋಜು ಮಸ್ತಿಯಲ್ಲಿ ನಿರತರಾಗಿ ಕುರ್ಚಿ ಉಳಿಸಿಕೊಳ್ಳುವ ಕಾರ್ಯದಲ್ಲಿ ಇದ್ದಾರೆ ಇದರಿಂದ ಜನಸಾಮಾನ್ಯರ ಜೀವನ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದು ಇದರ ಬಗ್ಗೆ ಸರ್ಕಾರ ಕೂಡಲೇ ಗಮನ ಹರಿಸಿ ಅಗತ್ಯವಸ್ತುಗಳ ಬೆಲೆ ನಿಯಂತ್ರಣ ಗೊಳಿಸುವಂತೆ ಆಗ್ರಹಿಸಿದರು.
ಜೆಡಿಎಸ್ ಪಕ್ಷದ ವತಿಯಿಂದ ಈ  ದಿನ ರಿಪ್ಪನ್ ಪೇಟೆಯಲ್ಲಿ ಪ್ರತಿಭಟನೆ ನಡೆಸಿ ಘನತೆವೆತ್ತ ರಾಜ್ಯಪಾಲರು ಮಧ್ಯ ಪ್ರವೇಶಿಸಿ ರಾಜ್ಯ ಸರ್ಕಾರಕ್ಕೆ ಸೂಕ್ತ ಆದೇಶ ನೀಡಬೇಕೆಂದು ಕೋರಿ ಸಮಸ್ತ ಜನತೆಯ ಪರವಾಗಿ ಮನವಿ ಪತ್ರವನ್ನು ಹೊಸನಗರ ತಹಶೀಲ್ದಾರರವರ ಮೂಲಕ ರಾಜ್ಯಪಾಲರಿಗೆ ಸಲ್ಲಿಸಿದರು.
ಈ ಸಂಧರ್ಭದಲ್ಲಿ ಜಿಲ್ಲಾ ಜೆಡಿಎಸ್ ಪ್ರಧಾನ ಕಾರ್ಯದರ್ಶಿಗಳಾದ ಜಿ ಎಸ್ ವರದರಾಜ್,ಜಿಲ್ಲಾ ಜೆಡಿಎಸ್ ಮುಖಂಡರಾದ ಆರ್ ಎನ್ ಮಂಜುನಾಥ್,ಎನ್ ವರ್ತೇಶ್,ಮುಡುಬ ಧರ್ಮಪ್ಪ ಹಾಗು ಜಿಲ್ಲಾ ಯುವ ಜನತಾದಳ ಕಾರ್ಯದರ್ಶಿ ರಫ಼ಿ ರಿಪ್ಪನ್ ಪೇಟೆ ಹಾಜರಿದ್ದರು.

Leave a Reply

Your email address will not be published. Required fields are marked *