ಬ್ರಾಡ್ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (ಬಿಇಸಿಐಎಲ್) 103 ಹ್ಯಾಂಡಿಮನ್ ಮತ್ತು ಸೂಪರ್ವೈಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್ಲೈನ್ ಮೂಲಕ ಜೂನ್ 30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗ್ಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.
ವಿದ್ಯಾರ್ಹತೆ: 8ನೇ ತರಗತಿ ಮತ್ತು ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ: ಹ್ಯಾಂಡಿಮನ್ ಮತ್ತು ಸೂಪರ್ವೈಸರ್ ಹುದ್ದೆಗಳಿಗೆ ಗರಿಷ್ಟ 30 ರಿಂದ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ಬಿಇಸಿಐಎಲ್ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 14,014/- ರಿಂದ 20,384/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ: ಅರ್ಜಿದಾರರು 750/-ರೂ ಮತ್ತು ಪ.ಜಾ/ಪ,ಪಂ/ಆರ್ಥಿಕವಾಗಿ ಹಿಂದುಳಿದ/ಅಂಗವಿಕಲ ಅಭ್ಯರ್ಥಿಗಳು 450/-ರೂ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಅರ್ಜಿ ಸಲ್ಲಿಕೆ: ಆಸಕ್ತ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್ಸೈಟ್
https://becil.com ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜೂನ್ 30,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ನೇಮಕಾತಿ ಬಗೆಗಿನ ಅಧಿಸೂಚನೆಗಳು::
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್