Headlines

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (ಬಿಇಸಿಐಎಲ್) 103 ಹ್ಯಾಂಡಿಮನ್ ಮತ್ತು ಸೂಪರ್‌ವೈಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

 ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (ಬಿಇಸಿಐಎಲ್) 103 ಹ್ಯಾಂಡಿಮನ್ ಮತ್ತು ಸೂಪರ್‌ವೈಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಜೂನ್ 30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗ್ಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ವಿದ್ಯಾರ್ಹತೆ: 8ನೇ ತರಗತಿ ಮತ್ತು ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ: ಹ್ಯಾಂಡಿಮನ್ ಮತ್ತು ಸೂಪರ್‌ವೈಸರ್ ಹುದ್ದೆಗಳಿಗೆ ಗರಿಷ್ಟ 30 ರಿಂದ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ಬಿಇಸಿಐಎಲ್ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 14,014/- ರಿಂದ 20,384/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ: ಅರ್ಜಿದಾರರು 750/-ರೂ ಮತ್ತು ಪ.ಜಾ/ಪ,ಪಂ/ಆರ್ಥಿಕವಾಗಿ ಹಿಂದುಳಿದ/ಅಂಗವಿಕಲ ಅಭ್ಯರ್ಥಿಗಳು 450/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ: ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://becil.com ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜೂನ್ 30,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ನೇಮಕಾತಿ ಬಗೆಗಿನ ಅಧಿಸೂಚನೆಗಳು::

About The Author

Leave a Reply

Your email address will not be published. Required fields are marked *

Exit mobile version