ನವದೆಹಲಿ(19-06-2021): ಮೋದಿ ಅಧಿಕಾರಕ್ಕೆ ಬಂದರೆ ಕಪ್ಪುಹಣವನ್ನು ಸ್ವಿಸ್ ಬ್ಯಾಂಕ್ ನಿಂದ ವಾಪಾಸ್ಸು ತರುತ್ತೇನೆಂದು ಹೇಳಿದ್ದರು. ಇದೀಗ ಮೋದಿಯ ಆಡಳಿತದಲ್ಲೇ ಅತಿ ಹೆಚ್ಚು ಕಪ್ಪುಹಣವನ್ನು ಸ್ವಿಸ್ ಬ್ಯಾಂಕ್ ನಲ್ಲಿ ಇರಿಸಲಾಗಿದೆ ಎನ್ನುವುದು ಅಂಕಿ-ಅಂಶಗಳಿಂದ ಬಹಿರಂಗವಾಗಿದೆ.
ಸ್ವಿಸ್ ಬ್ಯಾಂಕ್ ಗಳಲ್ಲಿ ಭಾರತೀಯ ವ್ಯಕ್ತಿಗಳು, ಸಂಸ್ಥೆಗಳು ಹಾಗೂ ಹಣಕಾಸು ಸಂಸ್ಥೆಗಳು ಇಟ್ಟಿರುವ ಹಣದ ಮೊತ್ತ ಈ ಬಾರಿ 20,700 ಕೋಟಿಗೆ ಏರಿಕೆಯಾಗಿದೆ ಎಂದು ಸ್ವಿಟ್ಜರ್ಲ್ಯಾಂಡ್ ನ ಕೇಂದ್ರ ಬ್ಯಾಂಕ್ ಬಿಡುಗಡೆ ಮಾಡಿರುವ ಅಂಕಿ-ಅಂಶಗಳಿಂದ ತಿಳಿದುಬಂದಿದೆ.
ಕಳೆದ 13 ವರ್ಷಗಳಲ್ಲೇ ಭಾರತೀಯರು ಗರಿಷ್ಠ ಮೊತ್ತವನ್ನು ಸ್ವಿಸ್ ಬ್ಯಾಂಕ್ ನಲ್ಲಿ ಠೇವಣಿ ಇಟ್ಟಿದ್ದಾರೆ. 2020ರ ವಾರ್ಷಿಕ ವರದಿಯಲ್ಲಿ ಬ್ಯಾಂಕ್ ಈ ಮಾಹಿತಿ ನೀಡಿದ್ದು, ಸೆಕ್ಯೂರೀಟಿಸ್ ಮತ್ತು ಇತರ ಹೂಡಿಕೆಯಿಂದಾಗಿ ಈ ಮೊತ್ತ ಏರಿಕೆಯಾಗಿದೆ.
ಇನ್ನು ಅನಿವಾಸಿ ಭಾರತೀಯರು ಬೇರೆ ದೇಶಗಳ ಸಂಸ್ಥೆಗಳ ಹೆಸರಿನಲ್ಲಿ ಇಟ್ಟ ಹಣವನ್ನು ಈ ಅಂಕಿ-ಅಂಶಗಳಲ್ಲಿ ಸೇರಿಸಿಲ್ಲ.
2019 ರ ಅಂತ್ಯದ ವೇಳೆಗೆ ಸ್ವಿಸ್ ಬ್ಯಾಂಕ್ ಗಳಲ್ಲಿ ಭಾರತೀಯರ ಹಣದ ಪ್ರಮಾಣದಲ್ಲಿ ಕುಸಿತವಾಗಿತ್ತು. ಆದರೆ 2020 ಅಂತ್ಯಕ್ಕೆ ಈ ಪ್ರಮಾಣ 13 ವರ್ಷಗಳಲ್ಲೇ ಗರಿಷ್ಟ ಪ್ರಮಾಣಕ್ಕೆ ಏರಿಕೆಯಾಗಿದೆ
ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ Kudumallige Society CEO Madan,…
ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…
ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…
ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…
ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…