ಸಾಗರ : ಎಸ್ಎಸ್ಎಲ್ಸಿ ಪರೀಕ್ಷೆ ಆರಂಭಗೊಂಡಿದ್ದು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿ ಶುಭ ಹಾರೈಸಿದ ಶಾಸಕರಾದ ಹರತಾಳು ಹಾಲಪ್ಪ ರವರು ಸಾಗರದ ಸರ್ಕಾರಿ ಜೂನಿಯರ್ ಕಾಲೇಜು ವಿದ್ಯಾರ್ಥಿಗಳಿಗೆ ಮಾಸ್ಕ್ ನೀಡಿ ಸ್ವಾಗತಿಸಿ ಗಮನ ಸೆಳೆದಿದ್ದಾರೆ.
ಕೋವಿಡ್ ಬಗ್ಗೆ ಪರೀಕ್ಷಾರ್ಥಿಗಳು ಅಂಜಿಕೊಳ್ಳುವ ಅಗತ್ಯವಿಲ್ಲ. ವಿದ್ಯಾರ್ಥಿಗಳು ತಮ್ಮ ಆರೋಗ್ಯ ದಲ್ಲಿ ಏರುಪೇರು ಇದ್ದರೆ ಕೂಡಲೆ ಶಾಲೆ ಮುಖ್ಯಸ್ಥರ ಗಮನಕ್ಕೆ ತನ್ನಿ ನಾವು ಸೂಕ್ತ ರೀತಿಯಲ್ಲಿ ವ್ಯವಸ್ಥೆ ಮಾಡುತ್ತೇವೆ ಸಾಗರ ಶಾಸಕ ಹರತಾಳು ಹಾಲಪ್ಪ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ್ದಾರೆ.
ವಿದ್ಯಾರ್ಥಿಗಳಿಗೆ ಸ್ಯಾನಿಟೈಜರ್ ನೀಡಿ, ಜ್ವರ ತಪಾಸನೆ ಮಾಡಿ ಕೊರೊನಾ ತಡೆ ಜಾಗ್ರತೆಯ ಕ್ರಮ ಅನುಸರಿಸಲು ಸಲಹೆ ನೀಡಿದರು.
ವರದಿ: ರಾಮನಾಥ್ ರಿಪ್ಪನ್ ಪೇಟೆ
ಪೋಸ್ಟ್ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..