Categories: Blog

ಆಕಳು ಖರೀದಿಗೆ ಸಹಾಯಧನಕ್ಕಾಗಿ ಆರ್ಜಿ ಆಹ್ವಾನ::

ಶಿವಮೊಗ್ಗ, ಜುಲೈ-03: ಪಶುಪಾಲನ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯು ಶಿವಮೊಗ್ಗ ಜಿಲ್ಲೆಯಲ್ಲಿ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಹೈನುಗಾರಿಕೆಗೆ ಯೋಗ್ಯವಾದ ಒಂದು ವರ್ಷ ಮೇಲ್ಪಟ್ಟ ಮತ್ತು ವಿಮೆಗೊಳಪಡಿಸುವ ಸಮಯದಲ್ಲಿ ಗರಿಷ್ಠ 8 ವರ್ಷಗಳಿಗೆ ಮೀರದಂತಹ ಮಣಕ/ಆಕಳು/ಎಮ್ಮೆಗಳಿಗೆ ಒಂದು ವರ್ಷದ/ಮೂರು ವರ್ಷದ ಅವಧಿಗೆ ಮಾರುಕಟ್ಟೆ ಮೌಲ್ಯದ 2%/6% ಪ್ರೀಮಿಯಂ ದರದಲ್ಲಿ ಗರಿಷ್ಠ ರೂ. 70 ಸಾವಿರ ಮೂಲ ಬೆಲೆಯವರೆಗೆ ಕೆಳಕಂಡ ಪ್ರೀಮಿಯಂ ಸಹಾಯಧನದ ದರದಂತೆ ವಿಮಾ ಸೌಲಭ್ಯ ಒದಗಿಸಲಾಗುತ್ತಿದೆ.
ಬಿ.ಪಿ.ಎಲ್ ಫಲಾನುಭವಿಗಳಿಗೆ ಸರ್ಕಾರದ ಸಹಾಯಧನ 70% ಹಾಗೂ ಎ.ಪಿ.ಎಲ್. ಫಲಾನುಭವಿಗಳಿಗೆ ಸರ್ಕಾರದ ಸಹಾಯಧನ 50% ಆಗಿದ್ದು,  ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಸಮೀಪದ ಪಶುವೈದ್ಯಕೀಯ ಸಂಸ್ಥೆಗಳನ್ನು ಸಂಪರ್ಕಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
————————–
ವರದಿ: ಸೆಬಾಸ್ಟಿಯನ್ ಮ್ಯಾಥ್ಯೂಸ್‌ ರಿಪ್ಪನ್ ಪೇಟೆ
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ

ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ Kenchanaala Marikamba Jatre was celebrated with…

2 hours ago

ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ!

ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ! Changing trends among Indian women show a growing…

11 hours ago

ಮಳೆಯಿಂದ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪೊಲೀಸರ ಬಲೆಗೆ : ಸಾವಿರಾರು ಮೌಲ್ಯದ ಗಾಂಜಾ ವಶ

ಮಳೆಯಿಂದ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪೊಲೀಸರ ಬಲೆಗೆ : ಸಾವಿರಾರು ಮೌಲ್ಯದ ಗಾಂಜಾ ವಶ Three people were arrested…

24 hours ago

ಕಾವೇರಿ ಲೋನ್ ಸರ್ವೀಸ್ ನಂಬಿ ₹12.50 ಲಕ್ಷ ಕಳೆದುಕೊಂಡ ರೈತ; ಯೂಟ್ಯೂಬ್ ಜಾಹೀರಾತು ಮೂಲಕ ವಂಚನೆ

ಕಾವೇರಿ ಲೋನ್ ಸರ್ವೀಸ್ ನಂಬಿ ₹12.50 ಲಕ್ಷ ಕಳೆದುಕೊಂಡ ರೈತ; ಯೂಟ್ಯೂಬ್ ಜಾಹೀರಾತು ಮೂಲಕ ವಂಚನೆ Farmer from Thirthahalli…

24 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆರೋಪಿ ಪ್ರದೋಷ್‌ಗೆ ‘ಮಾಫಿ ಸಾಕ್ಷಿ’ಯಾಗಲು ಕೋರ್ಟ್‌ ಅಸ್ತು

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆರೋಪಿ ಪ್ರದೋಷ್‌ಗೆ ‘ಮಾಫಿ ಸಾಕ್ಷಿ’ಯಾಗಲು ಕೋರ್ಟ್‌ ಅಸ್ತು Renukaswamy murder case takes…

24 hours ago

ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ KSRTC ಬಸ್‌ನ ಟೈರ್; ತಪ್ಪಿದ ಭಾರಿ ಅನಾಹುತ

ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ KSRTC ಬಸ್‌ನ ಟೈರ್; ತಪ್ಪಿದ ಭಾರಿ ಅನಾಹುತ KSRTC bus travelling from Udupi to…

1 day ago