ರಿಪ್ಪನ್ ಪೇಟೆ: ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದಲ್ಲಿ ಆಗಸ್ಟ್ 03 ರ ಮಂಗಳವಾರ ದಂದು ನಡೆಯುವ ಇತಿಹಾಸ ಪ್ರಸಿದ್ಧ ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವವನ್ನು ಕೊರೊನಾ ಕಾರಣದಿಂದಾಗಿ ರಾಜ್ಯ ಸರಕಾರದ ಆದೇಶದ ಅನ್ವಯ ಸರಳವಾಗಿ ಆಚರಣೆ ಮಾಡಲಾಗುವುದು ಎಂದು ಮಾರಿಕಾಂಬಾ ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ಬಸವರಾಜ್ ರವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಾರಿಕಾಂಬಾ ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ಬಸವರಾಜ್ ರವರು ಪೂರ್ವಿಕರು ನಡೆದು ಬಂದಂತಯೆ ನಾವುಗಳೂ ವರ್ಷಕ್ಕೆ ಎರಡು ಬಾರಿ ಜಾತ್ರೆ ಆಚರಿಸಿಕೊಂಡು ಬಂದಿದ್ದೇವೆ. ಬೇಸಿಗೆಯಲ್ಲಿ ಶೂನ್ಯ ಅಮಾವಾಸ್ಯೆಗೆ ಮಳೆಗಾಲದಲ್ಲಿ ಆಷಾಢ ಅಮವಾಸ್ಯೆಗೆ ಜಾತ್ರೆಯನ್ನು ಆಚರಿಸುತ್ತೇವೆ. ಆದರೆ ಈ ಸಂದರ್ಭದಲ್ಲಿ ಕೊರೊನಾ ರೋಗವಿರುವ ಕಾರಣದಿಂದ ಸಂಪ್ರದಾಯದಂತೆ ಜಾತ್ರಾಮಹೋತ್ಸವವನ್ನು ಆಚರಿಸುತ್ತಿದ್ದು, ದೇವಿಯ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಯಾವುದೇ ರೀತಿಯ ಅಂಗಡಿ-ಮುಂಗಟ್ಟುಗಳು ಅಳವಡಿಸುದಂತೆ ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದೆ. ಜಾತ್ರಾ ಸಂದರ್ಭದಲ್ಲಿ ಮುಜರಾಯಿ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ಕೊರೊನಾ ನಿಯಮದೊಂದಿಗೆ ಅತ್ಯಂತ ಸರಳ ರೀತಿಯಲ್ಲಿ ಈ ಜಾತ್ರಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಈ ಸಂಧರ್ಭದಲ್ಲಿ ಮಾತನಾಡಿದ ಕೆಂಚನಾಲ ಗ್ರಾಪಂ ಅಧ್ಯಕ್ಷರಾದ ಉಬೇದುಲ್ಲಾ ಷರೀಫ್ ರವರು ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರೆಯು ಇತಿಹಾಸ ಪ್ರಸಿದ್ಧವಾಗಿದೆ. ಸುತ್ತಮುತ್ತಲಿನಲ್ಲಿ ವರ್ಷಕ್ಕೆ ಎರಡು ಬಾರಿ ನಡೆಯುವಂತಹ ಜಾತ್ರೆಯೆಂದರೆ ಅದು ಕೆಂಚನಾಲ ಮಾರಿಕಾಂಬಾ ಜಾತ್ರೆ ಮಾತ್ರ ಆದರೆ ಇದೀಗ ಕೊರೋನಾ ಕಾರಣದಿಂದ ಜಾತ್ರಾ ಮಹೋತ್ಸವ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ.ಕೇವಲ ಪೂಜಾ ಕಾರ್ಯಗಳಿಗೆ ಅವಕಾಶ ಕಲ್ಪಿಸಲಾಗಿದೆ. ಇಲ್ಲಿಗೆ ಆಗಮಿಸುವ ಭಕ್ತರು ಕೊರೊನಾ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು,ಹಾಗೇಯೆ ಸಾಮಾಜಿಕ ಅಂತರ ಹಾಗೂ ಮಾಸ್ಕನ್ನು ಕಡ್ಡಾಯವಾಗಿ ಧರಿಸತಕ್ಕದ್ದು, ಸ್ಯಾನಿಟೈಸರ್ ಬಳಸುವುದರೊಂದಿಗೆ ಸರ್ಕಾರದ ಆದೇಶದಂತೆ ಕೋವಿಡ್ ನಿಯಮವನ್ನು ಪಾಲಿಸಬೇಕು ಎಂದರು.
ಈ ಸಂಧರ್ಭದಲ್ಲಿ ಕೆಂಚನಾಲ ಗ್ರಾಪಂ ಕಾರ್ಯದರ್ಶಿ ಪ್ರಸಾದ್,ಗ್ರಾಮಸ್ಥರಾದ ಸೋಮಶೇಖರ್,ಲಿಂಗರಾಜ್,ಖಲೀಲ್ ಗಾಳಿಬೈಲು ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ದೇವಿಯ ದರ್ಶನಕ್ಕೆ ಬರುವಂತಹ ಭಕ್ತಾದಿಗಳು ಮಾಸ್ಕ ಧರಿಸಿ,ಸ್ಯಾನಿಟೈಸರ್ ಬಳಸಿ ಸಾಮಾಜಿಕ ಅಂತರ ಕಾಪಾಡಬೇಕು ಎಂದು ಈ ಮೂಲಕ ಕೆಂಚನಾಲ ಗ್ರಾಮ ಪಂಚಾಯತ್ ಹಾಗೂ ದೇವಸ್ಥಾನ ಸಮಿತಿ ಯವರು ಮನವಿ ಮಾಡಿದ್ದಾರೆ.
ವರದಿ : ದೇವರಾಜ್ ರಿಪ್ಪನ್ ಪೇಟೆ
ಪೋಸ್ಟ್ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..