Categories: Blog

ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ ಸರಳ ಆಚರಣೆ:

ರಿಪ್ಪನ್ ಪೇಟೆ: ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದಲ್ಲಿ ಆಗಸ್ಟ್ 03 ರ ಮಂಗಳವಾರ ದಂದು ನಡೆಯುವ ಇತಿಹಾಸ ಪ್ರಸಿದ್ಧ ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವವನ್ನು ಕೊರೊನಾ ಕಾರಣದಿಂದಾಗಿ ರಾಜ್ಯ ಸರಕಾರದ ಆದೇಶದ ಅನ್ವಯ ಸರಳವಾಗಿ ಆಚರಣೆ ಮಾಡಲಾಗುವುದು ಎಂದು  ಮಾರಿಕಾಂಬಾ ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ಬಸವರಾಜ್ ರವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಾರಿಕಾಂಬಾ ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ಬಸವರಾಜ್ ರವರು  ಪೂರ್ವಿಕರು ನಡೆದು ಬಂದಂತಯೆ ನಾವುಗಳೂ ವರ್ಷಕ್ಕೆ ಎರಡು ಬಾರಿ ಜಾತ್ರೆ ಆಚರಿಸಿಕೊಂಡು ಬಂದಿದ್ದೇವೆ. ಬೇಸಿಗೆಯಲ್ಲಿ ಶೂನ್ಯ ಅಮಾವಾಸ್ಯೆಗೆ ಮಳೆಗಾಲದಲ್ಲಿ ಆಷಾಢ ಅಮವಾಸ್ಯೆಗೆ ಜಾತ್ರೆಯನ್ನು ಆಚರಿಸುತ್ತೇವೆ. ಆದರೆ ಈ ಸಂದರ್ಭದಲ್ಲಿ ಕೊರೊನಾ ರೋಗವಿರುವ ಕಾರಣದಿಂದ ಸಂಪ್ರದಾಯದಂತೆ ಜಾತ್ರಾಮಹೋತ್ಸವವನ್ನು ಆಚರಿಸುತ್ತಿದ್ದು, ದೇವಿಯ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಯಾವುದೇ ರೀತಿಯ ಅಂಗಡಿ-ಮುಂಗಟ್ಟುಗಳು ಅಳವಡಿಸುದಂತೆ ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದೆ. ಜಾತ್ರಾ ಸಂದರ್ಭದಲ್ಲಿ ಮುಜರಾಯಿ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ಕೊರೊನಾ ನಿಯಮದೊಂದಿಗೆ ಅತ್ಯಂತ ಸರಳ ರೀತಿಯಲ್ಲಿ ಈ ಜಾತ್ರಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಈ ಸಂಧರ್ಭದಲ್ಲಿ ಮಾತನಾಡಿದ ಕೆಂಚನಾಲ ಗ್ರಾಪಂ ಅಧ್ಯಕ್ಷರಾದ ಉಬೇದುಲ್ಲಾ ಷರೀಫ್ ರವರು ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರೆಯು ಇತಿಹಾಸ ಪ್ರಸಿದ್ಧವಾಗಿದೆ. ಸುತ್ತಮುತ್ತಲಿನಲ್ಲಿ ವರ್ಷಕ್ಕೆ ಎರಡು ಬಾರಿ ನಡೆಯುವಂತಹ ಜಾತ್ರೆಯೆಂದರೆ ಅದು ಕೆಂಚನಾಲ ಮಾರಿಕಾಂಬಾ ಜಾತ್ರೆ ಮಾತ್ರ ಆದರೆ ಇದೀಗ ಕೊರೋನಾ ಕಾರಣದಿಂದ ಜಾತ್ರಾ ಮಹೋತ್ಸವ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ.ಕೇವಲ ಪೂಜಾ ಕಾರ್ಯಗಳಿಗೆ ಅವಕಾಶ ಕಲ್ಪಿಸಲಾಗಿದೆ. ಇಲ್ಲಿಗೆ ಆಗಮಿಸುವ ಭಕ್ತರು ಕೊರೊನಾ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು,ಹಾಗೇಯೆ ಸಾಮಾಜಿಕ ಅಂತರ ಹಾಗೂ ಮಾಸ್ಕನ್ನು ಕಡ್ಡಾಯವಾಗಿ ಧರಿಸತಕ್ಕದ್ದು, ಸ್ಯಾನಿಟೈಸರ್ ಬಳಸುವುದರೊಂದಿಗೆ ಸರ್ಕಾರದ ಆದೇಶದಂತೆ ಕೋವಿಡ್ ನಿಯಮವನ್ನು ಪಾಲಿಸಬೇಕು ಎಂದರು.

ಈ ಸಂಧರ್ಭದಲ್ಲಿ ಕೆಂಚನಾಲ ಗ್ರಾಪಂ ಕಾರ್ಯದರ್ಶಿ ಪ್ರಸಾದ್,ಗ್ರಾಮಸ್ಥರಾದ ಸೋಮಶೇಖರ್,ಲಿಂಗರಾಜ್,ಖಲೀಲ್ ಗಾಳಿಬೈಲು ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ದೇವಿಯ ದರ್ಶನಕ್ಕೆ ಬರುವಂತಹ ಭಕ್ತಾದಿಗಳು ಮಾಸ್ಕ ಧರಿಸಿ,ಸ್ಯಾನಿಟೈಸರ್ ಬಳಸಿ ಸಾಮಾಜಿಕ ಅಂತರ ಕಾಪಾಡಬೇಕು ಎಂದು ಈ ಮೂಲಕ ಕೆಂಚನಾಲ ಗ್ರಾಮ ಪಂಚಾಯತ್ ಹಾಗೂ ದೇವಸ್ಥಾನ ಸಮಿತಿ ಯವರು ಮನವಿ ಮಾಡಿದ್ದಾರೆ.






ವರದಿ : ದೇವರಾಜ್ ರಿಪ್ಪನ್ ಪೇಟೆ




ಪೋಸ್ಟ್‌ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ

ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ Ramesh H.B. has been appointed as the…

1 hour ago

ರಿಪ್ಪನ್‌ಪೇಟೆ, ಹರತಾಳು, ಗರ್ತಿಕೆರೆಯಲ್ಲಿ ರಾಯರ 355ನೇ ಆರಾಧನೆ; ಹರಿದು ಬಂದ ಭಕ್ತ ಸಾಗರ

ರಿಪ್ಪನ್‌ಪೇಟೆ, ಹರತಾಳು, ಗರ್ತಿಕೆರೆಯಲ್ಲಿ ರಾಯರ 355ನೇ ಆರಾಧನೆ; ಹರಿದು ಬಂದ ಭಕ್ತ ಸಾಗರ Thousands of devotees participated in…

2 hours ago

ಹೊಸನಗರ ಪಿಎಸ್‌ಐ ಶಂಕರ್ ಗೌಡ ಪಾಟೀಲ್ ವರ್ಗಾವಣೆ; ನೂತನ ಪಿಎಸ್‌ಐ ಆಗಿ ಸಂತೋಷ್ ಬಾಗೋಜಿ ಅಧಿಕಾರ ಸ್ವೀಕಾರ

ಹೊಸನಗರ ಪಿಎಸ್‌ಐ ಶಂಕರ್ ಗೌಡ ಪಾಟೀಲ್ ವರ್ಗಾವಣೆ; ನೂತನ ಪಿಎಸ್‌ಐ ಆಗಿ ಸಂತೋಷ್ ಬಾಗೋಜಿ ಅಧಿಕಾರ ಸ್ವೀಕಾರ Hosanagara PSI…

4 hours ago

ದೇವಸ್ಥಾನಕ್ಕೆ ತೆರಳಿದ್ದ ಪೋಷಕರು ವಾಪಸ್ ಬರುವಷ್ಟರಲ್ಲಿ ಸಂಭವಿಸಿತ್ತು ದುರಂತ – 9ನೇ ತರಗತಿ ವಿದ್ಯಾರ್ಥಿನಿ ಸಾವು

ದೇವಸ್ಥಾನಕ್ಕೆ ತೆರಳಿದ್ದ ಪೋಷಕರು ವಾಪಸ್ ಬರುವಷ್ಟರಲ್ಲಿ ಸಂಭವಿಸಿತ್ತು ದುರಂತ - 9ನೇ ತರಗತಿ ವಿದ್ಯಾರ್ಥಿನಿ ಸಾವು A tragic incident…

5 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿಜೆ ನಿಯಮ ಉಲ್ಲಂಘನೆ; ಶಿವಮೊಗ್ಗದಲ್ಲಿ ಒಟ್ಟು 5 ಪ್ರಕರಣ ದಾಖಲು

ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿಜೆ ನಿಯಮ ಉಲ್ಲಂಘನೆ; ಶಿವಮೊಗ್ಗದಲ್ಲಿ ಒಟ್ಟು 5 ಪ್ರಕರಣ ದಾಖಲು Shivamogga police have registered…

5 hours ago

ಶಿವಮೊಗ್ಗದಲ್ಲಿ ತಡರಾತ್ರಿ ಕಿಡಿಗೇಡಿಗಳ ಕೃತ್ಯ: ನಿಲ್ಲಿಸಿದ್ದ ಎರಡು ಬೈಕ್‌ಗಳಿಗೆ ಬೆಂಕಿ

ಶಿವಮೊಗ್ಗದಲ್ಲಿ ತಡರಾತ್ರಿ ಕಿಡಿಗೇಡಿಗಳ ಕೃತ್ಯ: ನಿಲ್ಲಿಸಿದ್ದ ಎರಡು ಬೈಕ್‌ಗಳಿಗೆ ಬೆಂಕಿ Miscreants allegedly set two parked bikes on…

5 hours ago