Categories: Blog

ಇದೇ ಮೊದಲ ಬಾರಿ ರಾಜ್ಯಪಾಲರ ನೇಮಕದಲ್ಲಿ ಮಹಿಳೆಯರು,ಮುಸಲ್ಮಾನರಿಗೆ ಅವಕಾಶ!

ನವದೆಹಲಿ(ಜು.06): ಇದು ಭಾರತದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಕುತೂಹಲಕಾರಿ ಹಾಗೂ ವಿಶೇಷ ವಿಚಾರವೆನ್ನಬಹುದೇನೋ, ಯಾಕೆಂದರೆ ಈಗ ರಾಜ್ಯಪಾಲರ ನೇಮಕದಲ್ಲಿ ಪ್ರತಿ ಸಮುದಾಯ ಅಂದರೆ SC/ST, OBC ಹೊರತುಪಡಿಸಿ ಮಹಿಳೆಯರು ಹಾಗೂ ಮುಸ್ಲಿಂ ಸಮುದಾಯದವರಿಗೂ ಸಮಾನಾದ ಅವಕಾಶ ಸಿಗುತ್ತಿದೆ. ಖುದ್ದು ರಾಷ್ಟ್ರಪತಿ ಕೋವಿಂದ್ ದಲಿತ ಸಮುದಾಯದವರಾಗಿದ್ದು, ರಾಜ್ಯಪಾಲರ ನೇಮಕದಲ್ಲೂ ಸಾಮಾಜಿಕ ಸಾಮರಸ್ಯದ ವಿಶಿಷ್ಟ ಸಂಗಮ ಕಂಡು ಬಂದಿದೆ. ಹಾಗಾದ್ರೆ ಯಾವ ರಾಜ್ಯಪಾಲ ಯಾವ ಸಮುದಾಯದವರು? ಇಲ್ಲಿದೆ ವಿವರ

ಮೋದಿ ಸರ್ಕಾರದ ಅವಧಿಯಲ್ಲಿ ರಾಜ್ಯಪಾಲರ ನೇಮಕಾತಿಯಲ್ಲಿ ಎಸ್‌ಸಿ / ಎಸ್‌ಟಿ ಮತ್ತು ಒಬಿಸಿ ಹೊರತುಪಡಿಸಿ ಮಹಿಳೆಯರನ್ನೂ ನೇಮಿಸಲಾಗಿದೆ.

ಥಾವರ್ ಚಂದ್ ಗೆಹ್ಲೋಟ್:
ಬಿಜೆಪಿಯ ಓರ್ವ ಹಿರಿಯ ದಲಿತ ನಾಯಕ ಹಾಗೂ ಮಾಜಿ ಕ್ಯಾಬಿನೆಟ್ ಸಚಿವ. ಇನ್ಮುಂದೆ ಅವರು ಕರ್ನಾಟಕ ರಾಜ್ಯಪಾಲರಾಗಿ ಕಾರ್ಯನಿರ್ವಹಿಸಲಿದ್ದಾರೆ.

.      .ಥಾವರ್ ಚಂದ್ ಗೆಹ್ಲೋಟ್.


ಬುಡಕಟ್ಟು ಸಮುದಾಯಗಳ (Tribal communities)  ರಾಜ್ಯಪಾಲರು:
ಮಧ್ಯಪ್ರದೇಶದ ರಾಜ್ಯಪಾಲರಾಗಿ ನೇಮಕಗೊಂಡಿರುವ ಮಂಗುಭಾಯ್ ಪಟೇಲ್, ಗುಜರಾತ್‌ನ ನಾಯಕರಾಗಿದ್ದ ಅವರು ಬುಡಕಟ್ಟು ಸಮುದಾಯಗಳ ನಾಯಕರಾಗಿಯೂ ಸೇನೆ ಸಲ್ಲಿಸಿದ್ದಾರೆ. ಇನ್ನು ಇದೇ ಸಮುದಾಯದ ನಾಯಕಿ ಅನುಸೂಯಾ ಅವರು ಛತ್ತೀಸ್‌ಗಢದ ರಾಜ್ಯಪಾಲೆಯಾಗಿದ್ದಾರೆ.

ಒಬಿಸಿಯ ರಾಜ್ಯಪಾಲರು:
ರಾಜ್ಯಪಾಲ ಹುದ್ದೆಗಳಲ್ಲಿ ಒಬಿಸಿ ನಾಯಕರಿಗೆ ಸಂಪೂರ್ಣ ಗೌರವ ನೀಡಲಾಗಿದೆ. ಲೋನಿಯಾ ಸಮುದಾಯಕ್ಕೆ ಸೇರಿದ ಫಾಗು ಚೌಹಾನ್ ಬಿಹಾರದ ರಾಜ್ಯಪಾಲರಾಗಿದ್ದಾರೆ. ಇತ್ತ ರಮೇಶ್ ಬೈಸ್ ಈಗ ಜಾರ್ಖಂಡ್ ರಾಜ್ಯಪಾಲರಾಗಲಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಒಂದು ಅವಧಿ ಪೂರ್ಣಗೊಳಿಸಿರುವ ಬಂಡಾರು ದತ್ತಾತ್ರೇಯ ಅವರು ಹರ್ಯಾಣ ರಾಜ್ಯಪಾಲರಾಗಲಿದ್ದಾರೆ. ಗಂಗಾ ಪ್ರಸಾದ್ ಚೌರಾಸಿಯಾ ಸಿಕ್ಕಿಂನ ರಾಜ್ಯಪಾಲರಾಗಿದ್ದಾರೆ. ತಮಿಳುಸಾಯಿ ಸುಂದರರಾಜನ್ ತೆಲಂಗಾಣದಲ್ಲಿ ಪುದುಚೇರಿಯ ಹೆಚ್ಚುವರಿ ಹುದ್ದೆಯೊಂದಿಗೆ ಕಾರ್ಯ ನಿರ್ವಹಿಸುತ್ತಿದ್ದಾರೆ.

.          {ಫಾಗೂ ಚೌಹಾನ್. ಬಿಹಾರ ರಾಜ್ಯಪಾಲರು}


ಜಾಟ್ ಸಮುದಾಯದ 3 ಗವರ್ನರ್‌ಗಳು:
ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿ ಜಾಟ್ ಸಮುದಾಯಕ್ಕೆ ಸೇರಿದ 3 ಗವರ್ನರ್‌ಗಳ ನೇಮಕವಾಗಿದೆ. ಜಗದೀಪ್ ಧಂಕರ್ ರಾಜಕೀಯವಾಗಿ ಮಹತ್ವ ಪಡೆದುಕೊಂಡಿರುವ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಆಚಾರ್ಯ ದೇವವ್ರತ್ ಅವರು ಪ್ರಧಾನಿ ಮೋದಿಯವರ ತವರು ರಾಜ್ಯ ಗುಜರಾತ್ ರಾಜ್ಯಪಾಲರಾಗಿದ್ದಾರೆ. ಸತ್ಯ ಪಾಲ್ ಮಲಿಕ್ ಮೇಘಾಲಯ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ.


ಇಬ್ಬರು ಪ್ರಮುಖ ಮುಸ್ಲಿಂ ಬುದ್ಧಿಜೀವಿಗಳು:
ಆರಿಫ್ ಮೊಹಮ್ಮದ್ ಖಾನ್ ಕೇರಳದ ರಾಜ್ಯಪಾಲರಾದರೆ, ನಜ್ಮಾ ಹೆಪ್ತುಲ್ಲಾ ಮಣಿಪುರದ ರಾಜ್ಯಪಾಲರಾಗಿದ್ದರೆ.

.        ನಜ಼್ಮಾ ಹೆಪ್ತುಲ್ಲಾ.ಮಣಿಪುರ ರಾಜ್ಯಪಾಲರು


ಇಬ್ಬರು ತೆಲುಗು ರಾಜ್ಯಪಾಲರು: ಹರಿ ಬಾಬು ಕಂಭಂಪತಿ ಮತ್ತು ಬಂಡಾರು ದತ್ತಾತ್ರೇಯರಿಂದ ರಾಜ್ಯಪಾಲರ ಪಟ್ಟಿಯಲ್ಲಿ ತೆಲುಗು ನಾಯಕರ ಸಂಖ್ಯೆ 2ಕ್ಕೇರಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಚಿವ ಸಂಪುಟದ ಖಾತೆ ಹಂಚಿಕೆ ಫೈನಲ್: ಹಿರಿಯ ಸಚಿವರ ಖಾತೆಗಳಲ್ಲೂ ಭಾರೀ ಬದಲಾವಣೆ!10 ದಿನಗಳ ಕುತೂಹಲಕ್ಕೆ ತೆರೆ – ಇಲ್ಲಿದೆ ಸಂಪೂರ್ಣ ವಿವರ!

ಸಚಿವ ಸಂಪುಟದ ಖಾತೆ ಹಂಚಿಕೆ ಫೈನಲ್: ಹಿರಿಯ ಸಚಿವರ ಖಾತೆಗಳಲ್ಲೂ ಭಾರೀ ಬದಲಾವಣೆ!10 ದಿನಗಳ ಕುತೂಹಲಕ್ಕೆ ತೆರೆ - ಇಲ್ಲಿದೆ…

3 hours ago

ರಸ್ತೆಯಲ್ಲೇ ಭತ್ತ ನಾಟಿ ಮಾಡಿ ಗ್ರಾಮಸ್ಥರ ಪ್ರತಿಭಟನೆ; ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ

ರಸ್ತೆಯಲ್ಲೇ ಭತ್ತ ನಾಟಿ ಮಾಡಿ ಗ್ರಾಮಸ್ಥರ ಪ್ರತಿಭಟನೆ; ಹೆದ್ದಾರಿಪುರ ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ Villagers protest by planting…

3 hours ago

ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ

ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ A container lorry lost control and collided…

6 hours ago

ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ತಂಬಾಕು–ನಿಕೋಟಿನ್ ಉತ್ಪನ್ನಗಳ ಸಂಪೂರ್ಣ ನಿಷೇಧ

ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ತಂಬಾಕು–ನಿಕೋಟಿನ್ ಉತ್ಪನ್ನಗಳ ಸಂಪೂರ್ಣ ನಿಷೇಧ Karnataka government bans manufacture, storage, transport,…

6 hours ago

ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ

ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ Kenchanaala Marikamba Jatre was celebrated with…

1 day ago

ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ!

ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ! Changing trends among Indian women show a growing…

2 days ago