ಬೆಂಗಳೂರು: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಎಂದು ಮರುನಾಮಕರಣ ಮಾಡುವುದಾಗಿ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಈ ಆದೇಶ ತಕ್ಷಣದಿಂದಲೇ ಅನ್ವಯವಾಗಲಿದ್ದು, ಇನ್ನುಮುಂದೆ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯನ್ನು (North Eastern Karnataka Road Transport Corporation) ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಎಂದು ಕರೆಯುವುದಾಗಿ ಮಾಹಿತಿ ನೀಡಿದ್ದಾರೆ.
ಹೈದರಾಬಾದ್-ಕರ್ನಾಟಕ ಪ್ರದೇಶಕ್ಕೆ ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣವಾದ ನಂತರ ಈಶಾನ್ಯ ಸಾರಿಗೆಗೂ ಈ ರೀತಿ ಮರು ನಾಮಕರಣ ಮಾಡಬೇಕೆಂದು ಬಹುದಿನಗಳ ಬೇಡಿಕೆ ಸ್ಥಳೀಯರಿಂದ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಈಗ ಕ್ರಮ ಕೈಗೊಳ್ಳಲಾಗುತ್ತಿದೆ. ಕಲ್ಯಾಣ ಕರ್ನಾಟಕ ಸಾರಿಗೆ ನಿಗಮ ಎಂದು ಈಶಾನ್ಯ ಸಾರಿಗೆ ನಿಗಮಕ್ಕೆ ಮರುನಾಮಕರಣ ಮಾಡಲಾಗುತ್ತಿದೆ ಎಂದು ಲಕ್ಷ್ಮಣ ಸವದಿ ಹೇಳಿದ್ದಾರೆ.
ಕಲಬುರಗಿ: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿ, ಮಹಿಳೆಯರಿಗೆ ಬಸ್ನಲ್ಲಿಯೇ ಶೌಚಾಲಯ, ಸ್ನಾನಗೃಹ, ಹಾಲುಣಿಸಲು ಸೌಲಭ್ಯ, ಸ್ಯಾನಿಟರಿ ಪ್ಯಾಡ್ ವ್ಯವಸ್ಥೆ ಮಾಡಿ ಮಾದರಿಯಾಗಿದ್ದಾರೆ. ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ, ಯಾದಗಿರಿ ವರ್ಕ್ಶಾಪ್ನಲ್ಲಿ ಮಹಿಳೆಯರಿಗಾಗಿಯೇ ವಿನೂತನ ಬಸ್ ಅನ್ನು ಸಿದ್ಧಗೊಳಿಸಲಾಗಿದೆ. ಸಂಸ್ಥೆಯಲ್ಲಿ ನಿರುಪಯುಕ್ತವಾಗಿದ್ದ ಬಸ್ ಅನ್ನು ಮಹಿಳಾ ಶೌಚಾಲಯದ ಬಸ್ ಆಗಿ ಪರಿವರ್ತನೆ ಮಾಡಲಾಗಿದೆ. ಸಾವಿರಾರು ಕಿಲೋ ಮೀಟರ್ ಓಡಿದ ನಂತರ, ಕೆಲ ಬಸ್ಗಳನ್ನು ಓಡಿಸಲು ಆಗುವುದಿಲ್ಲ. ಅಂತಹ ಬಸ್ವೊಂದನ್ನು ಪಡೆದು, ಅದನ್ನು ಬದಲಾಯಿಸಿ ಮಹಿಳಾ ಬಸ್ ಅನ್ನು ಸಿದ್ಧಗೊಳಿಸಿದ್ದಾರೆ. ಬಸ್ನಲ್ಲಿ ಸೌಲಭ್ಯಗಳನ್ನು ಕಲ್ಪಿಸಲು ಸರಿಸುಮಾರು ಎರಡು ಲಕ್ಷ ರೂಪಾಯಿ ಹಣವನ್ನು ಖರ್ಚು ಮಾಡಿದ್ದಾರೆ. ಕಳೆದ ಒಂದು ತಿಂಗಳಿಂದ ಸಂಸ್ಥೆಯ ವರ್ಕ್ಶಾಪ್ ಸಿಬ್ಬಂದಿ ನಿರಂತರ ಶ್ರಮ ವಹಿಸಿ, ನಿರುಪಯುಕ್ತ ಬಸ್ ಅನ್ನು ಉಪಯುಕ್ತ ಬಸ್ ಆಗಿ ಮಾಡಿದ್ದಾರೆ.
ಈ ಬಸ್ನ ವಿಶೇಷತೆ ಏನು?
ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಈ ಬಸ್ ಮಹಿಳಾ ಪ್ರಯಾಣಿಕರನ್ನು ದೃಷ್ಟಿಯಲ್ಲಿಟ್ಟುಕೊಂಡು ರೂಪಿಸಲಾಗಿದೆ. ಅಂದರೆ ಬಸ್ ನಿಲ್ದಾಣದಲ್ಲಿ ಈಗಿರುವ ಶೌಚಗೃಹಗಳನ್ನು ಬಳಕೆ ಮಾಡಲು ಅನೇಕರು ಹಿಂದೇಟು ಹಾಕುತ್ತಿರುವ ಹಿನ್ನೆಲೆಯಲ್ಲಿ ಸ್ವಚ್ಛ ಮತ್ತು ಸುಂದರವಾದ ಮಹಿಳಾ ಶೌಚಾಲಾಯ, ಸ್ನಾನಗೃಹ, ಹಾಲುಣಿಸುವ ಕೋಣೆಯನ್ನು ಬಸ್ನಲ್ಲಿ ಸಿದ್ಧಮಾಡಲಾಗಿದೆ. ಒಂದು ಬಸ್ನಲ್ಲಿ ಎರಡು ದೇಶಿಯ ಶೌಚಾಲಯ, ಒಂದು ವಿದೇಶಿ ಶೌಚಾಲಯ, ಕೈ ತೊಳೆಯುವ ಕೋಣೆ, ಸ್ನಾನಗೃಹ ಕೋಣೆ, ಜತೆಗೆ ಪುಟ್ಟ ಮಕ್ಕಳಿಗೆ ಹಾಲುಣಿಸಲು ಕೋಣೆಯೊಂದನ್ನು ಮಾಡಲಾಗಿದೆ. ವಿಶೇಷವೆಂದರೆ ಸ್ನಾನಗೃಹದಲ್ಲಿ ಗೀಜರ್ ಕೂಡಿಸಿದ್ದು, ಬಿಸಿನೀರು ಕೂಡಾ ಬರಲಿದೆ. ಮಹಿಳಾ ಪ್ರಯಾಣಿಕರು ಶೌಚ, ಸ್ನಾನ ಮಾಡಿ, ಬಟ್ಟೆ ಬದಲಾಯಿಸಲು ಬೇಕಾದ ಎಲ್ಲಾ ವ್ಯವಸ್ಥೆಯನ್ನು ಇಲ್ಲಿ ಮಾಡಲಾಗಿದೆ. ಜತೆಗೆ ಸ್ಯಾನಿಟರಿ ನ್ಯಾಪಕಿನ್ ವ್ಯವಸ್ಥೆ ಕೂಡಾ ಕಲ್ಪಿಸಲಾಗಿದೆ. ಬಸ್ನ ಮೇಲೆ ಸೋಲಾರ್ ವ್ಯವಸ್ಥೆ ಇದ್ದು, ವಿದ್ಯುತ್ ಪೂರಕೆಯಾಗುತ್ತದೆ. ಹೀಗಾಗಿ ಪ್ರತಿಯೊಂದು ಕೋಣೆಗೂ ಫ್ಯಾನ್ ಕೂಡಾ ಹಾಕಲಾಗಿದೆ. ಬಸ್ನ ಮೇಲ್ಭಾಗದಲ್ಲಿ ನೀರಿನ ಟ್ಯಾಂಕ್ ಕೂರಿಸಿದ್ದು, ಅಲ್ಲಿಂದ ಶೌಚಗೃಹಕ್ಕೆ, ಸ್ನಾನ ಗೃಹಕ್ಕೆ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ.
ಬಸ್ ನಿಲ್ದಾಣಕ್ಕೆ ಮಾತ್ರ ಈ ಬಸ್ ಸೀಮಿತ
ಮಹಿಳಾ ಶೌಚಾಲಯ, ಸ್ನಾನಗೃಹ ಇರುವ ಈ ಬಸ್ ಬೇರಡೆ ಹೋಗುವುದಿಲ್ಲ. ಬದಲಾಗಿ ಬಸ್ ನಿಲ್ದಾಣದಲ್ಲಿಯೇ ನಿಲ್ಲಲಿದೆ. ಹೆಚ್ಚಿನ ಜನದಟ್ಟಣೆ ಇರುವ ಕಲಬುರಗಿಯಲ್ಲಿ ಇಂದಿನಿಂದ (ಜುಲೈ 7) ಈ ಬಸ್ ಬಳಕೆಗೆ ಮುಕ್ತವಾಗಲಿದೆ. ಸಾರಿಗೆ ಸಚಿವ ಲಕ್ಷ್ಮಣ ಸವದಿ ಈ ಬಸ್ಗೆ ಇಂದು ಚಾಲನೆ ನೀಡಲಿದ್ದಾರೆ. ಈ ಸೌಲಭ್ಯಗಳನ್ನು ಪಡೆಯಬೇಕಾದರೆ ಐದರಿಂದ ಹತ್ತು ರೂಪಾಯಿ ಹಣ ನಿಗದಿ ಮಾಡಲು ಸಂಸ್ಥೆಯ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ. ಏಕೆಂದರೆ ಬಸ್ಗೆ ಒಬ್ಬರು ಮಹಿಳಾ ಸಿಬ್ಬಂದಿಯನ್ನು ನಿಯೋಜಿಸಬೇಕು. ಸ್ವಚ್ಚತೆ ಕಾಪಾಡಿಕೊಳ್ಳಬೇಕಾದರೆ ಕೆಲಸಗಾರರ ಅವಶ್ಯಕತೆ ಇದೆ. ಹೀಗಾಗಿ ಪ್ರತಿ ಪ್ರಯಾಣಿಕರಿಗೆ ಐದು ರೂಪಾಯಿ ಪಡೆದು ಈ ಸೌಲಭ್ಯವನ್ನು ಬಳಸಿಕೊಳ್ಳಲು ಮಹಿಳಾ ಪ್ರಯಾಣಿಕರಿಗೆ ಅವಕಾಶ ಕಲ್ಪಿಸಲು ಸಂಸ್ಥೆಯ ಅಧಿಕಾರಿಗಳು ಮುಂದಾಗಿದ್ದಾರೆ.
ವರದಿ: ರಾಮನಾಥ್ ರಿಪ್ಪನ್ ಪೇಟೆ
ಸಚಿವ ಸಂಪುಟದ ಖಾತೆ ಹಂಚಿಕೆ ಫೈನಲ್: ಹಿರಿಯ ಸಚಿವರ ಖಾತೆಗಳಲ್ಲೂ ಭಾರೀ ಬದಲಾವಣೆ!10 ದಿನಗಳ ಕುತೂಹಲಕ್ಕೆ ತೆರೆ - ಇಲ್ಲಿದೆ…
ರಸ್ತೆಯಲ್ಲೇ ಭತ್ತ ನಾಟಿ ಮಾಡಿ ಗ್ರಾಮಸ್ಥರ ಪ್ರತಿಭಟನೆ; ಹೆದ್ದಾರಿಪುರ ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ Villagers protest by planting…
ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ A container lorry lost control and collided…
ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ತಂಬಾಕು–ನಿಕೋಟಿನ್ ಉತ್ಪನ್ನಗಳ ಸಂಪೂರ್ಣ ನಿಷೇಧ Karnataka government bans manufacture, storage, transport,…
ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ Kenchanaala Marikamba Jatre was celebrated with…
ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ! Changing trends among Indian women show a growing…