ಕರ್ನಾಟಕ ನೂತನ ರಾಜ್ಯಪಾಲರ ಆಯ್ಕೆ:

ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ನೇಮಕವಾಗಿದ್ದಾರೆ. ಕಳೆದ 7 ವರ್ಷಗಳಿಂದ ರಾಜ್ಯಪಾಲರಾಗಿ ವಜೂಬಾಯಿ ವಾಲಾ ರವರು ಕಾರ್ಯನಿರ್ವಹಿಸಿದ್ದರು.

ಕೇಂದ್ರ ಸಚಿವ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಕರ್ನಾಟಕದ ಹೊಸ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ ಎಂದು ರಾಷ್ಟ್ರಪತಿ ಭವನ ವಕ್ತಾರರು ತಿಳಿಸಿದ್ದಾರೆ. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಗೆಹ್ಲೋಟ್  ಪ್ರಮುಖ ದಲಿತ ಮುಖಂಡರು. ಅವರು ಮೋದಿ ಸರ್ಕಾರದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿ ಸೇವೆ ಸಲ್ಲಿಸಿದರು. ಅಲ್ಲದೆ, ರಾಜ್ಯಸಭೆಯಲ್ಲಿ ಸದನದ ನಾಯಕರಾಗಿಯೂ ಸೇವೆ ಸಲ್ಲಿಸಿದರು. 
ಸಂಸದೀಯ ಮಂಡಳಿ ಮತ್ತು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯ ಸದಸ್ಯರಾಗಿರುವ ಅವರು ಕರ್ನಾಟಕದ ರಾಜ್ಯಪಾಲರಾಗಿ ನೇಮಕಗೊಂಡಿದ್ದು ಇದರೊಂದಿಗೆ, ಮಿಜೋರಾಂನ ಹೊಸ ರಾಜ್ಯಪಾಲರಾಗಿ ಕಂಭಂಪತಿ ಹರಿ ಬಾಬು, ಮಧ್ಯಪ್ರದೇಶದ ಗವರ್ನರ್ ಆಗಿ ಮಂಗುಭಾಯ್ ಚಗನ್ಭಾಯ್ ಪಟೇಲ್, ಹಿಮಾಚಲ ಪ್ರದೇಶದ ರಾಜ್ಯಪಾಲರಾಗಿ ರಾಜೇಂದ್ರನ್ ವಿಶ್ವನಾಥ್ ಅರ್ಲೆಕರ್ ಅವರನ್ನು ಸರ್ಕಾರ ನೇಮಿಸಿದೆ.

ವರದಿ: ರಾಮನಾಥ್ ರಿಪ್ಪನ್ ಪೇಟೆ

Leave a Reply

Your email address will not be published. Required fields are marked *