ಶಿವಮೊಗ್ಗ::ದಿನಾಂಕ 04/07/21 ಭಾನುವಾರದಂದು ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನ ಹಡಗಲಿ ಹಾಗೂ ಬರಹಗಾರರ ಜಿಲ್ಲಾ ಘಟಕ ಶಿವಮೊಗ್ಗದ ಸಹಯೋಗದೊಂದಿಗೆ ರಾಜ್ಯ ಮಟ್ಟದ ಅಂತರ್ಜಾಲ ಕವಿಗೋಷ್ಟಿ ಏರ್ಪಡಿಸಲಾಗಿದೆ ಎಲ್ಲ ಕವಿಮನಗಳು ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಬರಹಗಾರರ ಬಳಗದ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷರಾದ ರಫ಼ಿ ರಿಪ್ಪನ್ ಪೇಟೆ ಇಂದು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.
ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಭಾನುವಾರ ಸಂಜೆ 4 ಗಂಟೆಗೆ ಅನ್ನದಾತ ಎಂಬ ವಿಷಯದ ಅಡಿಯಲ್ಲಿ ಗೂಗಲ್ ಮೀಟ್ ನಲ್ಲಿ ಜಿಲ್ಲಾಮಟ್ಟದ ಅಂತರ್ಜಾಲ ಕವಿಗೋಷ್ಟಿಯನ್ನು ಏರ್ಪಡಿಸಿದ್ದು ವಿಜೇತ ಕವಿಗಳಿಗೆ ಆಕರ್ಷಕ ಬಹುಮಾನವನ್ನು ನೀಡಲಾಗುವುದು ಎಂದರು,
ಈ ಕವಿಗೋಷ್ಟಿಯ ನಿರ್ಣಾಯಕರಾಗಿ
ಶ್ರೀ ಕೆ.ಬಾರಾವಲಿ ಬಾವಿಹಳ್ಳಿ ,ಶ್ರೀ ಖಂಡೂ ಬಂಜಾರ
ಶ್ರೀ ವಿರೂಪಾಕ್ಷಪ್ಪ ಯು, ಶ್ರೀ ಮಹೇಶ ಎಸ್ ಹೆಚ್ ಕಾರ್ಯನಿರ್ವಹಿಸುವರು ಎಂದರು.
ಮಧುನಾಯ್ಕ ಲಂಬಾಣಿ. ಸಂಸ್ಥಾಪಕ ಅಧ್ಯಕ್ಷರು
ಈ ಕಾರ್ಯಕ್ರಮದ ಉದ್ಘಾಟನೆ ಬರಹಗಾರರ ಬಳಗದ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಧುನಾಯ್ಕ ಲಂಬಾಣಿ ರವರು ನೆರವೇರಿಸಲಿದ್ದಾರೆ.ಅಧ್ಯಕ್ಷತೆಯನ್ನು ಶ್ರೀ ಆಲೂರು ಚಂದ್ರಪ್ಪ ರವರು ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಟಿಯಲ್ಲಿ ಅಶು ರಿಪ್ಪನ್ ಪೇಟೆ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಜಿ ವಿ ನಾಗೇಂದ್ರಪ್ಪ ಉಪಸ್ತಿತರಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್