ಶಿವಮೊಗ್ಗ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜುಲೈ 15ರಿಂದ ಎರಡು ದಿನಗಳ ಶಿವಮೊಗ್ಗ ಮತ್ತು ದಾವಣಗೆರೆ ಪ್ರವಾಸ ಕೈಗೊಳ್ಳಲಿದ್ದಾರೆಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ಮಾಹಿತಿ ನೀಡಿದರು.
ಜುಲೈ 15ರ ಬೆಳಗ್ಗೆ 11 ಗಂಟೆಗೆ ಅವರು ನೇರವಾಗಿ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಸೂರಗೊಂಡನಕೊಪ್ಪಕ್ಕೆ ಆಗಮಿಸಿ ಅಲ್ಲಿ ಲಂಬಾಣಿ ಜನರೊಂದಿಗೆ ಕುಂದುಕೊರತೆ ಕುರಿತು ಸಂವಾದ ನಡೆಸುವರು. ನಂತರ 3 ಗಂಟೆಗೆ ಶಿಕಾರಿಪುರಕ್ಕೆ ತೆರಳಿ ಅಲ್ಲೂ ಕೂಡಾ ಲಂಬಾಣಿ ಜನರ ಸಮಸ್ಯೆ ಆಲಿಸುವರು ಅದೇ ರೀತಿ ಸಂಜೆ 5ಕ್ಕೆ ಶಿವಮೊಗ್ಗ ತಾಲೂಕಿನ ಕುಂಚೇನಹಳ್ಳಿ ತಾಂಡಕ್ಕೆ ಭೇಟಿ ನೀಡಿ
ಲಂಬಾಣಿ ಜನಾಂಗದವರ ಜತೆ ಸಂವಾದದಲ್ಲಿ ಭಾಗವಹಿಸುವರು. ರಾತ್ರಿ ಶಿವಮೊಗ್ಗದಲ್ಲಿ ವಾಸ್ತವ್ಯ ಹೂಡಿ ಜು.16ರಂದು ಬೆಂಗಳೂರಿಗೆ ತೆರಳುವರು ಎಂದರು.
ಡಿ.ಕೆ.ಶಿವಕುಮಾರ್ ಪ್ರಮುಖವಾಗಿ ಲಂಬಾಣಿ ತಾಂಡಗಳ ಕುಂದುಕೊರತೆಗಳು,ಕೋವಿಡ್‍ನಿಂದ ಉಂಟಾದ ಸಂಕಷ್ಟಗಳ ಬಗ್ಗೆ ಅಧ್ಯಯನ ನಡೆಸಲು ಈ ಪ್ರವಾಸ ಕೈಗೊಂಡಿದ್ದಾರೆ. ಈ ಸಂದರ್ಭದಲ್ಲಿ ಪಕ್ಷದ ಎಲ್ಲಾ ಜಿಲ್ಲಾ ನಾಯಕರು ಜತೆಗಿರುವರು
ಎಂದರು.
ವರದಿ: ರಾಮನಾಥ್
ಪೋಸ್ಟ್ ಮ್ಯಾನ್ ನ್ಯೂಸ್ ನ ಕಳಕಳಿ:
ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್ಡೌನ್ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹರಡದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.