Categories: Blog

ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಶಿವಮೊಗ್ಗ ಜಿಲ್ಲಾ ಪ್ರವಾಸ:

ಶಿವಮೊಗ್ಗ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜುಲೈ 15ರಿಂದ ಎರಡು ದಿನಗಳ ಶಿವಮೊಗ್ಗ ಮತ್ತು ದಾವಣಗೆರೆ ಪ್ರವಾಸ ಕೈಗೊಳ್ಳಲಿದ್ದಾರೆಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ಮಾಹಿತಿ ನೀಡಿದರು.

ಜುಲೈ 15ರ ಬೆಳಗ್ಗೆ 11 ಗಂಟೆಗೆ ಅವರು  ನೇರವಾಗಿ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಸೂರಗೊಂಡನಕೊಪ್ಪಕ್ಕೆ ಆಗಮಿಸಿ ಅಲ್ಲಿ ಲಂಬಾಣಿ ಜನರೊಂದಿಗೆ ಕುಂದುಕೊರತೆ ಕುರಿತು ಸಂವಾದ ನಡೆಸುವರು. ನಂತರ 3 ಗಂಟೆಗೆ ಶಿಕಾರಿಪುರಕ್ಕೆ ತೆರಳಿ ಅಲ್ಲೂ ಕೂಡಾ ಲಂಬಾಣಿ ಜನರ ಸಮಸ್ಯೆ ಆಲಿಸುವರು ಅದೇ ರೀತಿ ಸಂಜೆ 5ಕ್ಕೆ ಶಿವಮೊಗ್ಗ ತಾಲೂಕಿನ ಕುಂಚೇನಹಳ್ಳಿ ತಾಂಡಕ್ಕೆ ಭೇಟಿ ನೀಡಿ
ಲಂಬಾಣಿ ಜನಾಂಗದವರ ಜತೆ ಸಂವಾದದಲ್ಲಿ ಭಾಗವಹಿಸುವರು. ರಾತ್ರಿ ಶಿವಮೊಗ್ಗದಲ್ಲಿ ವಾಸ್ತವ್ಯ ಹೂಡಿ ಜು.16ರಂದು ಬೆಂಗಳೂರಿಗೆ ತೆರಳುವರು ಎಂದರು.

ಡಿ.ಕೆ.ಶಿವಕುಮಾರ್ ಪ್ರಮುಖವಾಗಿ ಲಂಬಾಣಿ ತಾಂಡಗಳ ಕುಂದುಕೊರತೆಗಳು,ಕೋವಿಡ್‍ನಿಂದ ಉಂಟಾದ ಸಂಕಷ್ಟಗಳ ಬಗ್ಗೆ ಅಧ್ಯಯನ ನಡೆಸಲು ಈ ಪ್ರವಾಸ ಕೈಗೊಂಡಿದ್ದಾರೆ. ಈ ಸಂದರ್ಭದಲ್ಲಿ ಪಕ್ಷದ ಎಲ್ಲಾ ಜಿಲ್ಲಾ ನಾಯಕರು ಜತೆಗಿರುವರು
ಎಂದರು.


ವರದಿ: ರಾಮನಾಥ್



ಪೋಸ್ಟ್ ಮ್ಯಾನ್ ನ್ಯೂಸ್ ನ ಕಳಕಳಿ:
ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹರಡದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

RIPPONPETE | ಬೀದಿ ಬದಿಯ ಸರ್ಕಸ್‌ನಲ್ಲಿ ಅಪ್ರಾಪ್ತ ಬಾಲಕಿ ಬಳಕೆ ಆರೋಪ: ಪೊಲೀಸರಿಂದ ರಕ್ಷಣೆ

RIPPONPETE | ಬೀದಿ ಬದಿಯ ಸರ್ಕಸ್‌ನಲ್ಲಿ ಅಪ್ರಾಪ್ತ ಬಾಲಕಿ ಬಳಕೆ ಆರೋಪ: ಪೊಲೀಸರಿಂದ ರಕ್ಷಣೆ Police rescue a minor…

57 minutes ago

ಅರಸಾಳು ಕೆರೆ ಬಳಿ 20 ಅಡಿ ಆಳದ ಕಂದಕಕ್ಕೆ ಉರುಳಿದ ಲಾರಿ; ತಪ್ಪಿದ ಭಾರಿ ಅನಾಹುತ

ಅರಸಾಳು ಕೆರೆ ಬಳಿ 20 ಅಡಿ ಆಳದ ಕಂದಕಕ್ಕೆ ಉರುಳಿದ ಲಾರಿ; ತಪ್ಪಿದ ಭಾರಿ ಅನಾಹುತ A truck carrying…

8 hours ago

ತಂದೆ–ಮಗನ ಜಗಳ ಕೊಲೆಯಲ್ಲಿ ಅಂತ್ಯ; ಮೃತದೇಹ ಬಾವಿಗೆ ಎಸೆದ ಆರೋಪ

ಸಾಗರ: ಜೈಲಿನಿಂದ ಬಿಡುಗಡೆಯಾದ ತಂದೆಯನ್ನೇ ಮಗ ಕೊಲೆ ಮಾಡಿದ ಆರೋಪ; ಮೃತದೇಹ ಬಾವಿಗೆ ಎಸೆದು ಮುಚ್ಚಿಟ್ಟ ಶಂಕೆ A man…

10 hours ago

ಸಚಿವ ಸಂಪುಟದ ಖಾತೆ ಹಂಚಿಕೆ ಫೈನಲ್: ಹಿರಿಯ ಸಚಿವರ ಖಾತೆಗಳಲ್ಲೂ ಭಾರೀ ಬದಲಾವಣೆ!10 ದಿನಗಳ ಕುತೂಹಲಕ್ಕೆ ತೆರೆ – ಇಲ್ಲಿದೆ ಸಂಪೂರ್ಣ ವಿವರ!

ಸಚಿವ ಸಂಪುಟದ ಖಾತೆ ಹಂಚಿಕೆ ಫೈನಲ್: ಹಿರಿಯ ಸಚಿವರ ಖಾತೆಗಳಲ್ಲೂ ಭಾರೀ ಬದಲಾವಣೆ!10 ದಿನಗಳ ಕುತೂಹಲಕ್ಕೆ ತೆರೆ - ಇಲ್ಲಿದೆ…

1 day ago

ರಸ್ತೆಯಲ್ಲೇ ಭತ್ತ ನಾಟಿ ಮಾಡಿ ಗ್ರಾಮಸ್ಥರ ಪ್ರತಿಭಟನೆ; ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ

ರಸ್ತೆಯಲ್ಲೇ ಭತ್ತ ನಾಟಿ ಮಾಡಿ ಗ್ರಾಮಸ್ಥರ ಪ್ರತಿಭಟನೆ; ಹೆದ್ದಾರಿಪುರ ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ Villagers protest by planting…

1 day ago

ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ

ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ A container lorry lost control and collided…

1 day ago