ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ, ಅಭಿನಯ ಶಾರದೆ ಜಯಂತಿ ವಿಧಿವಶರಾಗಿದ್ದಾರೆ. 76 ವರ್ಷದ ನಟಿ ಜಯಂತಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಜುಲೈ 26 ಬೆಳಗ್ಗೆ ಜಯಂತಿ ತಮ್ಮ ಬೆಂಗಳೂರಿನ ನಿವಾಸದಲ್ಲಿ ನಿಧನರಾಗಿದ್ದಾರೆ.
ಕಮಲ ಕುಮಾರಿಯಾಗಿ ಬಳ್ಳಾರಿಯಲ್ಲಿ ಜನಿಸಿದ ನಟಿ ಜಯಂತಿಯಾಗಿ ಖ್ಯಾತಿಗಳಿಸಿದರು. ಸುಮಾರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಜಯಂತಿ ಕನ್ನಡ ಸೇರಿದಂತೆ 6 ಭಾಷೆಯಗಳಲ್ಲಿ ನಟಿಸಿದ್ದಾರೆ.
ಜೇನು ಗೂಡು ಸಿನಿಮಾ ಮೂಲಕ 1963ರಲ್ಲಿ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಜಯಂತಿ ಅನೇಕ ಅದ್ಭುತ ಸಿನಿಮಾಗಳನ್ನು ನೀಡಿದ್ದಾರೆ.
ವಿಶೇಷ ಎಂದರೆ ಡಾ.ರಾಜ್ ಕುಮಾರ್ ಅವರ ಜೊತೆ ಸುಮಾರು 45 ಸಿನಿಮಾಗಳಲ್ಲಿ ನಟಿಸಿದ ಖ್ಯಾತಿ ಕೂಡ ಅವರದ್ದು. ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ ಸಿನಿಮಾಗಳಲ್ಲಿ ಜಯಂತಿ ನಟಿಸಿ ಅಭಿಮಾನಿಗಳನ್ನು ರಂಜಿಸಿರುವ ಜಯಂತಿ ಇನ್ನು ನೆನಪು ಮಾತ್ರ. ಜಯಂತಿ ಅವರ ಅಂತ್ಯ ಸಂಸ್ಕಾರ ಬೆಂಗಳೂರಿನಲ್ಲೆ ನಡೆಯಲಿದ್ದು ಜಯಂತಿ ನಿಧನಕ್ಕೆ ಚಿತ್ರರಂಗ ಕಂಬನಿ ಮಿಡಿದಿದೆ.
ಜಯಂತಿ ನಟನೆ ಇಡೀ ಕನ್ನಡ ಚಿತ್ರರಂಗಕ್ಕೆ ಹೆಮ್ಮೆಯಾಗಿತ್ತು. ಇದೀಗ ಕನ್ನಡ ಚಿತ್ರರಂಗ ಹಿರಿಯ ನಟಿಯನ್ನು ಕಳೆದುಕೊಂಡಂತಾಗಿದೆ.
ಪೋಸ್ಟ್ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..