ರಿಪ್ಪನ್ ಪೇಟೆ:ದೇಶದಲ್ಲಿನ ಅಡಿಕೆ ವ್ಯಾಪಾರಿಗಳ ವಂಚಕರ ಜಾಲವು ಗೋಡಂಬಿ ಹೆಸರಿನಲ್ಲಿ ಕಳಪೆ ಗುಣಮಟ್ಟದ ಅಡಿಕೆಯನ್ನು ಇಂಡೋನೇಶಿಯಾದಿಂದ ಆಮದು ಮಾಡಿಕೊಳ್ಳುವ ಮೂಲಕ ದೇಶದ ಅಡಿಕೆ ಬೆಳೆಗಾರರು ಆರ್ಥಿಕ ಸಂಕಷ್ಟದಲ್ಲಿ ಸಿಲುಕಿ ಕೊಳ್ಳುವಂತೆ ಮಾಡುತ್ತಿದ್ದಾರೆ. ಈ ತರಹದ ಕಳಪೆ ಅಡಿಕೆ ಆಮದು ಮಾಡಿಕೊಳ್ಳುವವರ ವಿರುದ್ಧ ಕೇಂದ್ರ ಸರ್ಕಾರವು ಈ ಕೂಡಲೇ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಶಾಸಕ ಮತ್ತು ಗೃಹ ಮಂಡಳಿ ಅಧ್ಯಕ್ಷರಾದ ಶ್ರೀ ಆರಗ ಜ್ಞಾನೇಂದ್ರ ಇಂದಿಲ್ಲಿ ಒತ್ತಾಯಿಸಿದರು.
ಪಟ್ಟಣದಲ್ಲಿ ಇಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಅಡಿಕೆ ವಂಚಕರ ಜಾಲವು ಕಳಪೆ ಗುಣಮಟ್ಟದ ಅಡಿಕೆಗಳನ್ನು ಇಂಡೋನೇಷಿಯಾ ಮತ್ತು ವಿವಿಧ ದೇಶಗಳಿಂದ ಭಾರತಕ್ಕೆ ಆಮದು ಮಾಡಿಕೊಂಡು ಇಲ್ಲಿನ ಅಡಿಕೆ ಬೆಳೆಗಾರರು ಆರ್ಥಿಕ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿ ಸರಕಾರಕ್ಕೆ ಸಾವಿರಾರು ಕೋಟಿ ರೂಪಾಯಿ ಸುಂಕ ಮೋಸ ವಂಚಿಸಿರುವ ಹಿನ್ನಲೆಯಲ್ಲಿ ಬಾಂಬೆ ಉಚ್ಚ ನ್ಯಾಯಾಲಯ ನಾಗಪುರ ಪೀಠದಲ್ಲಿ 16 ಸಾವಿರ ಕೋಟಿ ರೂಪಾಯಿಗಳ ಸುಂಕದ ಅವ್ಯವಹಾರ ಸಾಬೀತಾಗಿದ್ದು ಈ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಲಾಗಿ ಸಿಬಿಐ ತನಿಖೆಯಲ್ಲಿ ಯೂ ಕೂಡ ಈ ಆರೋಪ ಸಾಬೀತಾಗಿದ
ಕಳಪೆ ಗುಣಮಟ್ಟದ ಅಡಿಕೆ ಆಮದು ಮಾಡಿಕೊಳ್ಳುವುದರಿಂದ ದೇಶದಲ್ಲಿನ ಗುಣಮಟ್ಟದ ಅಡಿಕೆ ಹಾಗೂ ಅಡಿಕೆ ಬೆಳೆಗಾರರಿಗೆ ಉತ್ತಮ ಧಾರಣೆ ಸಿಗದೇ ವಂಚಿತರನ್ನಾಗಿಸಿದೆ ಎಂದು ವಿಷಾದ ವ್ಯಕ್ತಪಡಿಸಿ, ಕಳಪೆ ಗುಣಮಟ್ಟದ ಅಡಿಕೆ ಈ ದೇಶದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದ್ದು ಕೇಂದ್ರ ಸರ್ಕಾರ ಈ ಕೂಡಲೇ ಈ ಕೃತ್ಯದಲ್ಲಿ ಭಾಗಿಯಾಗಿರುವ ಕಳಪೆ ಅಡಿಕೆ ಆಮದುಗಾರರ ಆಮದು ಪರವಾನಿಗೆ ರದ್ದು ಪಡಿಸಿ ಮತ್ತು ಈ ಕೃತ್ಯದಲ್ಲಿ ಭಾಗಿಯಾಗಿರುವ ಭ್ರಷ್ಟ ಕೇಂದ್ರದ ಸುಂಕದ ಅಧಿಕಾರಿಗಳ ಮೇಲೆ ಕಠಿಣವಾದ ಕಾನೂನು ಕ್ರಮ ಜರುಗಿಸಿ ದೇಶದ ಅಡಿಕೆ ಬೆಳೆಗಾರರ ಹಿತ ಕಾಪಾಡಬೇಕು ಎಂದು ಈ ಸಂದರ್ಭದಲ್ಲಿ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಬೆಳ್ಳೂರು ತಿಮ್ಮಪ್ಪ,ಕಗ್ಗಲಿ ಲಿಂಗಪ್ಪ,ನಂದನ್ ಉಪಸ್ಥಿತರಿದ್ದರು.
ವರದಿ:ಸೆಬಾಸ್ಟಿಯನ್ ಮ್ಯಾಥ್ಯೂಸ್ ರಿಪ್ಪನ್ ಪೇಟೆ
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್