ಚಾಮರಾಜನಗರ: ಬಿ.ಎಸ್.ಯಡಿಯೂರಪ್ಪ ರಾಜೀನಾಮೆಯಿಂದ ಮನನೊಂದು ಅಭಿಮಾನಿಯೊಬ್ಬ ನೇಣಿಗೆ ಶರಣಾದ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ರವಿ (40 ವರ್ಷ) ಆಲಿಯಾಸ್ ರಾಜಾಹುಲಿ ಎಂಬ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಯಡಿಯೂರಪ್ಪ ರಾಜೀನಾಮೆಯಿಂದ ಬೇಸರಗೊಂಡ ರವಿ ರಾತ್ರಿ ವೇಳೆ ನೇಣಿಗೆ ಕೊರಳೊಡ್ಡಿರುವುದು ತಿಳಿದುಬಂದಿದೆ. ಗುಂಡ್ಲುಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಈ ಘಟನೆ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಹಂಗಾಮಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಷಾದ ವ್ಯಕ್ತಪಡಿಸಿದ್ದು, ನನ್ನ ರಾಜೀನಾಮೆಯಿಂದ ಮನನೊಂದ ಗುಂಡ್ಲುಪೇಟೆ ತಾಲ್ಲೂಕು ಬೊಮ್ಮಲಾಪುರದ ರಾಜಪ್ಪ (ರವಿ) ಆತ್ಮಹತ್ಯೆಗೆ ಶರಣಾದ ಸುದ್ದಿ ಅತೀವ ನೋವು ಹಾಗೂ ಬೇಸರ ತರಿಸಿದೆ.ರಾಜಕಾರಣದಲ್ಲಿ ಏರಿಳಿತಗಳು ಸಹಜ ,ಇದಕ್ಕಾಗಿ ಪ್ರಾಣಾರ್ಪಣೆ ಮಾಡಿಕೊಳ್ಳಲು ಮುಂದಾಗುವುದು ಸರ್ವಥಾ ಒಪ್ಪಲಾಗದು, ಇದರಿಂದ ಕುಟುಂಬಕ್ಕಾಗುವ ನಷ್ಟ ಯಾರಿಂದಲೂ ಭರಿಸಲಾಗದು ಎಂದಿದ್ದಾರೆ.
ಪೋಸ್ಟ್ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್