ಸಾಗರ: ಸೊರಬದ ಮಾಜಿ ಶಾಸಕರಾದ ಮಧು ಬಂಗಾರಪ್ಪ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಮುಖಂಡರಾದ ಆರ್ ಎಂ ಮಂಜುನಾಥ ಗೌಡರವರು ಹೇಳಿದರು.
ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಜುಲೈ 30ರಂದು ಹುಬ್ಬಳ್ಳಿಯಲ್ಲಿ ನಡೆಯುವ ಕಾಂಗ್ರೆಸ್ ಪಕ್ಷದ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದ ರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಸಮ್ಮುಖದಲ್ಲಿ ಮಧು ಬಂಗಾರಪ್ಪ ರವರು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂದರು.
ಇವರ ಜೊತೆಯಲ್ಲಿ ಭಾರಿ ಸಂಖ್ಯೆಯ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂದು ಹೇಳಿದರು.
ಬಂಗಾರಪ್ಪನವರ ಮಗನಾದ ಮಧುಬಂಗಾರಪ್ಪ ಜಾತ್ಯಾತೀತ ತತ್ವದಲ್ಲಿ ನಂಬಿಕೆ ಹೊಂದಿದವರಾಗಿದ್ದಾರೆ .ಕಳೆದ ಲೋಕಸಭಾ ಚುನಾವಣೆಯಲ್ಲಿ ಅಲ್ಪಮತಗಳಿಂದ ತಪ್ಪಿದ ಅವಕಾಶ ಈ ಬಾರಿ ನಮ್ಮ ಪಕ್ಷಕ್ಕೆ ಸಿಗಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ತಾಲ್ಲೂಕು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಬಿ. ಆರ್. ಜಯಂತ್ ,ರಾಜನಂದಿನಿ ಕಾಗೋಡು, ಮಹಾಬಲ ಕೌತಿ,ನಗರಸಭಾ ಸದಸ್ಯರಾದ ತಶ್ರೀಫ್,ಸಾಗರ ಸುರೇಶ್ ಬಾಬು ಅಶೋಕ ಬೇಳೂರು ಹಾಗೂ ಇನ್ನಿತರ ಮುಖಂಡರು ಹಾಜರಿದ್ದರು.
ವರದಿ . ಧರ್ಮ ರಾಜ್. ಜಿ .ಸಾಗರ
ಪೋಸ್ಟ್ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..
https://chat.whatsapp.com/KlIbXYr74Ee5ph5noWzuHw
30 ವರ್ಷ 8 ತಿಂಗಳ ಸಾರ್ಥಕ ಸೇವೆಗೆ ವಿರಾಮ: ಶಿಕ್ಷಕಿ ಅಂಬಿಕಾ ಸಿ. ಅವರಿಗೆ ಆತ್ಮೀಯ ಬೀಳ್ಕೊಡುಗೆ Teacher Ambika…
ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ Ramesh H.B. has been appointed as the…
ರಿಪ್ಪನ್‌ಪೇಟೆ, ಹರತಾಳು, ಗರ್ತಿಕೆರೆಯಲ್ಲಿ ರಾಯರ 355ನೇ ಆರಾಧನೆ; ಹರಿದು ಬಂದ ಭಕ್ತ ಸಾಗರ Thousands of devotees participated in…
ಹೊಸನಗರ ಪಿಎಸ್‌ಐ ಶಂಕರ್ ಗೌಡ ಪಾಟೀಲ್ ವರ್ಗಾವಣೆ; ನೂತನ ಪಿಎಸ್‌ಐ ಆಗಿ ಸಂತೋಷ್ ಬಾಗೋಜಿ ಅಧಿಕಾರ ಸ್ವೀಕಾರ Hosanagara PSI…
ದೇವಸ್ಥಾನಕ್ಕೆ ತೆರಳಿದ್ದ ಪೋಷಕರು ವಾಪಸ್ ಬರುವಷ್ಟರಲ್ಲಿ ಸಂಭವಿಸಿತ್ತು ದುರಂತ - 9ನೇ ತರಗತಿ ವಿದ್ಯಾರ್ಥಿನಿ ಸಾವು A tragic incident…
ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿಜೆ ನಿಯಮ ಉಲ್ಲಂಘನೆ; ಶಿವಮೊಗ್ಗದಲ್ಲಿ ಒಟ್ಟು 5 ಪ್ರಕರಣ ದಾಖಲು Shivamogga police have registered…