ತೀರ್ಥಳ್ಳಿ ತಾಲೂಕಿನ 10000 ಕಟ್ಟಡ ಕಾರ್ಮಿಕರಿಗೆ ಕಿಟ್ ಗಳ ವಿತರಣೆ : ಆರಗ ಜ್ಞಾನೇಂದ್ರ

ರಿಪ್ಪನ್ ಪೇಟೆ :ಕಾರ್ಮಿಕ ಕಲ್ಯಾಣ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರಿಗೆ ಸುಮಾರು 10000ಸಂಖ್ಯೆಯ ಆಹಾರ ಕಿಟ್ ಗಳನ್ನು ಕ್ಷೇತ್ರದ64 ಗ್ರಾಮ ಪಂಚಾಯಿತಿ ಗಳಲ್ಲಿ 58 ಗ್ರಾಮಪಂಚಾಯಿತಿಗಳಲ್ಲಿ ವಿತರಿಸಲಾಗಿದ್ದು ಇನ್ನುಳಿದ ಆರು ಗ್ರಾಮ ಪಂಚಾಯಿತಿಗಳಿಗೆ ಇನ್ನೆರಡು ದಿನಗಳಲ್ಲಿ ವಿತರಿಸಲಾಗುವುದೆಂದು ತೀರ್ಥಹಳ್ಳಿ  ಕ್ಷೇತ್ರದ ಶಾಸಕರು ಹಾಗೂ ರಾಜ್ಯ ಗೃಹ ಮಂಡಳಿಯ ಅಧ್ಯಕ್ಷರಾದ  ಆರಗ ಜ್ಞಾನೇಂದ್ರ ಹೇಳಿದರು

 ಗುರುವಾರ ಹೆದ್ದಾರಿಪುರ ಗ್ರಾಮ ಪಂಚಾಯತಿಯ ಸಭಾಂಗಣದಲ್ಲಿ ಕಟ್ಟಡ ಕಾರ್ಮಿಕರಿಗೆ ಆಹಾರದ ಕಿಟ್ಟು ಗಳನ್ನು ವಿತರಿಸಿ ಮಾತನಾಡಿದ ಅವರು ದೇಶದಲ್ಲಿನ ಮೋದಿ ಸರ್ಕಾರವು ರಾಜ್ಯದಲ್ಲಿನ ಬಿಎಸ್ ಯಡಿಯೂರಪ್ಪನವರ ಸರಕಾರವು ಕೊರೋನಾ ದಂತಹ ಸಂಕಷ್ಟದ ಕಾಲದಲ್ಲಿ ಬಡವರ ಮತ್ತು ಕೂಲಿ ಕಾರ್ಮಿಕರ ಪರವಾಗಿ ನಿಂತಿದೆ.

 ಈ ಸಂದರ್ಭದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರವು ದೇಶದ ನಾಗರಿಕರ ಆರೋಗ್ಯ ಮತ್ತು ಆಹಾರ ಭದ್ರತೆಯನ್ನು ನೀಡುವುದರ ಸಲುವಾಗಿ ಉಚಿತವಾಗಿ ಬಡವರಿಗೆ. ಕಟ್ಟಡ ಕಾರ್ಮಿಕರಿಗೆ ಆಹಾರವನ್ನು ಒದಗಿಸುವುದರ ಜೊತೆಗೆ ಕೊರೊನಾ ವ್ಯಾಕ್ಸಿನ್ ಅನ್ನು ಸಹ ಉಚಿತವಾಗಿ ನೀಡುವುದರ ಮೂಲಕ ದೇಶದ ಜನರ ಸಂರಕ್ಷಣೆಗೆ ಮುಂದಾಗಿದೆ. ಪ್ರತಿಯೊಬ್ಬ ನಾಗರಿಕರು ಆರೋಗ್ಯ ರಕ್ಷಣೆಯ ಬಗ್ಗೆ ಹೆಚ್ಚು ಗಮನವನ್ನು ಕೊಡುವುದರ ಜೊತೆಗೆ ಸರ್ಕಾರದ ಸೌಲಭ್ಯಗಳನ್ನು ಸಹ ಸದುಪಯೋಗಪಡಿಸಿಕೊಳ್ಳಬೇಕೆಂದು ಹೇಳಿದರು.
 ದೇಶದಲ್ಲಿನ ಅತಿಸಣ್ಣ ರೈತರ ಹಿತರಕ್ಷಣೆಗಾಗಿ ಕೇಂದ್ರದಲ್ಲಿನ ಮೋದಿ ಸರ್ಕಾರ ಹಾಗೂ ರಾಜ್ಯದಲ್ಲಿನ ಬಿಎಸ್ ಯಡಿಯೂರಪ್ಪ ರವರ ಸರಕಾರವು ರೈತರ ಬ್ಯಾಂಕ್ ಅಕೌಂಟಿಗೆ ನೇರವಾಗಿ ಹಣವನ್ನು ಸಂದಾಯ ಮಾಡುವುದರ ಮೂಲಕ ಪ್ರತಿವರ್ಷ 10 ಸಾವಿರ ರೂಪಾಯಿಗಳನ್ನು ನೀಡುವುದರ ಮೂಲಕ ಭಾರತದಲ್ಲಿನ ಅತಿಸಣ್ಣ ರೈತರ ಹಿತ ರಕ್ಷಣೆಗೆ ಮುಂದಾಗಿದೆ.
 ಕೊರೊನಾ ಸೋಂಕು ತಡೆಗಟ್ಟುವ ಉದ್ದೇಶದಿಂದ ಕೇಂದ್ರ ಸರ್ಕಾರವು ಪ್ರತಿಯೊಬ್ಬರೂ ಲಸಿಕೆಯನ್ನು ಪಡೆದುಕೊಳ್ಳಬೇಕೆಂದು ಜಾಹಿರಾತಿನ ಮೂಲಕ ಪ್ರಕಟಣೆ ಮಾಡಿದಂತಹ ಸಂದರ್ಭದಲ್ಲಿ ವಿರೋಧಪಕ್ಷದವರು ಲಸಿಕೆ ಬಗ್ಗೆ ಅಪಪ್ರಚಾರ ಮಾಡುವ ಮೂಲಕ ದೇಶದ ನಾಗರಿಕರು ಕೊರೋನಾ ವ್ಯಾಕ್ಸಿನ್ ತೆಗೆದುಕೊಳ್ಳುವುದಕ್ಕೆ ಹಿಂಜರಿಕೆಯನ್ನು ಉಂಟುಮಾಡಿದ್ದರು. ಈಗ ಅದೇ ವಿರೋಧಪಕ್ಷದವರು ದೇಶದಲ್ಲಿ ಕೊರೋನಾ ವ್ಯಾಕ್ಸಿನ್ ಕೊರತೆಯಿದೆ ಎಂದು  ಅಬ್ಬರದ ಪ್ರಚಾರವನ್ನು ಮಾಡುತ್ತಿದ್ದಾರೆ.
 ಎಂದು ಆಕ್ರೋಶ ವ್ಯಕ್ತಪಡಿಸಿದರು.

 ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ 200 ಕಟ್ಟಡ ಕಾರ್ಮಿಕರಿಗೆ ಆಹಾರದ ಕಿಟ್ಟು ಗಳನ್ನು ವಿತರಿಸಲಾಯಿತು.
 ಕಾರ್ಯಕ್ರಮದಲ್ಲಿ ಹೆದ್ದಾರಿಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಿತಾ ಹಾಗೂ ಉಪಾಧ್ಯಕ್ಷೆ ಲೀಲಾವತಿ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹೆಚ್ ರಾಘವೇಂದ್ರ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರುಗಳು. ಕೆರೆಹಳ್ಳಿ ಹಾಗೂ ಹುಂಚ ಹೋಬಳಿಯ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂಬಿ ಮಂಜುನಾಥ್ ಕಾರ್ಯದರ್ಶಿ ಜಂಬಳ್ಳಿ ಗಿರೀಶ್. ಇನ್ನಿತರರು ಹಾಜರಿದ್ದರು

ವರದಿ: ಸಬಾಸ್ಟಿನ್ ಮ್ಯಾಥ್ಯೂಸ್‌ ರಿಪ್ಪನ್ ಪೇಟೆ



ಪೋಸ್ಟ್‌ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..

Leave a Reply

Your email address will not be published. Required fields are marked *