ರಿಪ್ಪನ್ ಪೇಟೆ :ಕಾರ್ಮಿಕ ಕಲ್ಯಾಣ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರಿಗೆ ಸುಮಾರು 10000ಸಂಖ್ಯೆಯ ಆಹಾರ ಕಿಟ್ ಗಳನ್ನು ಕ್ಷೇತ್ರದ64 ಗ್ರಾಮ ಪಂಚಾಯಿತಿ ಗಳಲ್ಲಿ 58 ಗ್ರಾಮಪಂಚಾಯಿತಿಗಳಲ್ಲಿ ವಿತರಿಸಲಾಗಿದ್ದು ಇನ್ನುಳಿದ ಆರು ಗ್ರಾಮ ಪಂಚಾಯಿತಿಗಳಿಗೆ ಇನ್ನೆರಡು ದಿನಗಳಲ್ಲಿ ವಿತರಿಸಲಾಗುವುದೆಂದು ತೀರ್ಥಹಳ್ಳಿ ಕ್ಷೇತ್ರದ ಶಾಸಕರು ಹಾಗೂ ರಾಜ್ಯ ಗೃಹ ಮಂಡಳಿಯ ಅಧ್ಯಕ್ಷರಾದ ಆರಗ ಜ್ಞಾನೇಂದ್ರ ಹೇಳಿದರು
ಗುರುವಾರ ಹೆದ್ದಾರಿಪುರ ಗ್ರಾಮ ಪಂಚಾಯತಿಯ ಸಭಾಂಗಣದಲ್ಲಿ ಕಟ್ಟಡ ಕಾರ್ಮಿಕರಿಗೆ ಆಹಾರದ ಕಿಟ್ಟು ಗಳನ್ನು ವಿತರಿಸಿ ಮಾತನಾಡಿದ ಅವರು ದೇಶದಲ್ಲಿನ ಮೋದಿ ಸರ್ಕಾರವು ರಾಜ್ಯದಲ್ಲಿನ ಬಿಎಸ್ ಯಡಿಯೂರಪ್ಪನವರ ಸರಕಾರವು ಕೊರೋನಾ ದಂತಹ ಸಂಕಷ್ಟದ ಕಾಲದಲ್ಲಿ ಬಡವರ ಮತ್ತು ಕೂಲಿ ಕಾರ್ಮಿಕರ ಪರವಾಗಿ ನಿಂತಿದೆ.
ಈ ಸಂದರ್ಭದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರವು ದೇಶದ ನಾಗರಿಕರ ಆರೋಗ್ಯ ಮತ್ತು ಆಹಾರ ಭದ್ರತೆಯನ್ನು ನೀಡುವುದರ ಸಲುವಾಗಿ ಉಚಿತವಾಗಿ ಬಡವರಿಗೆ. ಕಟ್ಟಡ ಕಾರ್ಮಿಕರಿಗೆ ಆಹಾರವನ್ನು ಒದಗಿಸುವುದರ ಜೊತೆಗೆ ಕೊರೊನಾ ವ್ಯಾಕ್ಸಿನ್ ಅನ್ನು ಸಹ ಉಚಿತವಾಗಿ ನೀಡುವುದರ ಮೂಲಕ ದೇಶದ ಜನರ ಸಂರಕ್ಷಣೆಗೆ ಮುಂದಾಗಿದೆ. ಪ್ರತಿಯೊಬ್ಬ ನಾಗರಿಕರು ಆರೋಗ್ಯ ರಕ್ಷಣೆಯ ಬಗ್ಗೆ ಹೆಚ್ಚು ಗಮನವನ್ನು ಕೊಡುವುದರ ಜೊತೆಗೆ ಸರ್ಕಾರದ ಸೌಲಭ್ಯಗಳನ್ನು ಸಹ ಸದುಪಯೋಗಪಡಿಸಿಕೊಳ್ಳಬೇಕೆಂದು ಹೇಳಿದರು.
ದೇಶದಲ್ಲಿನ ಅತಿಸಣ್ಣ ರೈತರ ಹಿತರಕ್ಷಣೆಗಾಗಿ ಕೇಂದ್ರದಲ್ಲಿನ ಮೋದಿ ಸರ್ಕಾರ ಹಾಗೂ ರಾಜ್ಯದಲ್ಲಿನ ಬಿಎಸ್ ಯಡಿಯೂರಪ್ಪ ರವರ ಸರಕಾರವು ರೈತರ ಬ್ಯಾಂಕ್ ಅಕೌಂಟಿಗೆ ನೇರವಾಗಿ ಹಣವನ್ನು ಸಂದಾಯ ಮಾಡುವುದರ ಮೂಲಕ ಪ್ರತಿವರ್ಷ 10 ಸಾವಿರ ರೂಪಾಯಿಗಳನ್ನು ನೀಡುವುದರ ಮೂಲಕ ಭಾರತದಲ್ಲಿನ ಅತಿಸಣ್ಣ ರೈತರ ಹಿತ ರಕ್ಷಣೆಗೆ ಮುಂದಾಗಿದೆ.
ಕೊರೊನಾ ಸೋಂಕು ತಡೆಗಟ್ಟುವ ಉದ್ದೇಶದಿಂದ ಕೇಂದ್ರ ಸರ್ಕಾರವು ಪ್ರತಿಯೊಬ್ಬರೂ ಲಸಿಕೆಯನ್ನು ಪಡೆದುಕೊಳ್ಳಬೇಕೆಂದು ಜಾಹಿರಾತಿನ ಮೂಲಕ ಪ್ರಕಟಣೆ ಮಾಡಿದಂತಹ ಸಂದರ್ಭದಲ್ಲಿ ವಿರೋಧಪಕ್ಷದವರು ಲಸಿಕೆ ಬಗ್ಗೆ ಅಪಪ್ರಚಾರ ಮಾಡುವ ಮೂಲಕ ದೇಶದ ನಾಗರಿಕರು ಕೊರೋನಾ ವ್ಯಾಕ್ಸಿನ್ ತೆಗೆದುಕೊಳ್ಳುವುದಕ್ಕೆ ಹಿಂಜರಿಕೆಯನ್ನು ಉಂಟುಮಾಡಿದ್ದರು. ಈಗ ಅದೇ ವಿರೋಧಪಕ್ಷದವರು ದೇಶದಲ್ಲಿ ಕೊರೋನಾ ವ್ಯಾಕ್ಸಿನ್ ಕೊರತೆಯಿದೆ ಎಂದು ಅಬ್ಬರದ ಪ್ರಚಾರವನ್ನು ಮಾಡುತ್ತಿದ್ದಾರೆ.
ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ 200 ಕಟ್ಟಡ ಕಾರ್ಮಿಕರಿಗೆ ಆಹಾರದ ಕಿಟ್ಟು ಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಹೆದ್ದಾರಿಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಿತಾ ಹಾಗೂ ಉಪಾಧ್ಯಕ್ಷೆ ಲೀಲಾವತಿ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹೆಚ್ ರಾಘವೇಂದ್ರ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರುಗಳು. ಕೆರೆಹಳ್ಳಿ ಹಾಗೂ ಹುಂಚ ಹೋಬಳಿಯ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂಬಿ ಮಂಜುನಾಥ್ ಕಾರ್ಯದರ್ಶಿ ಜಂಬಳ್ಳಿ ಗಿರೀಶ್. ಇನ್ನಿತರರು ಹಾಜರಿದ್ದರು
ವರದಿ: ಸಬಾಸ್ಟಿನ್ ಮ್ಯಾಥ್ಯೂಸ್ ರಿಪ್ಪನ್ ಪೇಟೆ
ಪೋಸ್ಟ್ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್