Categories: Blog

ತೀರ್ಥಹಳ್ಳಿ:ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ತೈಲ ಬೆಲೆಯೇರಿಕೆ ವಿರೋಧಿಸಿ ಸೈಕಲ್ ಜಾಥಾ

ತೀರ್ಥಹಳ್ಳಿ :ಕೇಂದ್ರ ಸರ್ಕಾರದ ಬೆಲೆ ಏರಿಕೆ ಬಗ್ಗೆ ರಾಜ್ಯಾದ್ಯಂತ ಪ್ರತಿಭಟನೆ ಕಾಂಗ್ರೆಸ್ ವತಿಯಿಂದ  ನಡೆಯುತ್ತಿದ್ದು , ಪೆಟ್ರೋಲ್ ಡೀಸೆಲ್, ಗ್ಯಾಸ್ ಮತ್ತು ಶ್ರೀ  ಸಾಮಾನ್ಯ ಜನರ ಬಳಕೆಯ ವಸ್ತುಗಳಬೆಲೆಯನ್ನು ಯನ್ನು ನಿರಂತರವಾಗಿ  ಕೇಂದ್ರ ಸರಕಾರವು ಬೆಲೆ ಏರಿಕೆ ಇಂದು ತೀರ್ಥಹಳ್ಳಿಯಲ್ಲಿ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಸೈಕಲ್ ಜಾಥಾ ದಲ್ಲಿ ಪ್ರತಿಭಟನೆ ನಡೆಸಲಾಯಿತು.

ಶಿವ ರಾಜಪುರದ ಗಣಪತಿ ದೇವಸ್ಥಾನದ ಮುಂಭಾಗದಿಂದ ಸ್ವತಃ ಕಿಮ್ಮನೆ ರತ್ನಾಕರ್ ಅವರು ಸೈಕಲ್ ಏರಿ ಪಟ್ಟಣದ ತಾಲ್ಲೂಕು ಕಚೇರಿಯ ವರೆಗೆ ಬಂದು  ಪ್ರತಿಭಟನೆಯನ್ನು ನಡೆಸಿದರು.

ತಹಸೀಲ್ದಾರ್ ರವರಿಗೆ ಪ್ರತಿಭಟನಾ ಮನವಿ ಪತ್ರವನ್ನು ನೀಡಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಮಾತನಾಡಿದರು .ನಂತರ ಸರ್ಕಾರಿ ಜೆಸಿ ಆಸ್ಪತ್ರೆಯ ತನಕ  ಮೆರವಣಿಗೆಯಲ್ಲಿ ಹೋಗಿ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿ ನಿನ್ನೆ ದಿನ ಪಟ್ಟಣ ಪಂಚಾಯ್ತಿ ವಾರ್ಡ್  4 ಮತ್ತು 13 ಕೊರೊನಾ ಲಸಿಕೆಗಳು ನೀಡುತ್ತಿದ್ದು ಕೇವಲ 1 ಗಂಟೆಯ ಅವಧಿಯಲ್ಲಿ ಲಸಿಕೆಗಳನ್ನು ನೀಡುವುದನ್ನು ನಿಲ್ಲಿಸಲಾಗಿತ್ತು .ಈ ರೀತಿ ಕ್ಷೇತ್ರದ ಶಾಸಕರಾದ ಆರಗ ಜ್ಞಾನೇಂದ್ರರವರು ಪ್ರಭಾವ ರಾಜಕೀಯ  ಒತ್ತಡ ಮತ್ತು ಮಾತಿನ ಮೇಲೆ ತಾಲ್ಲೂಕು ವೈದ್ಯಾಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದು .ಲಸಿಕೆ ನೀಡುವುದು ಕೇವಲ ವಾರ್ಡ್ ಮಟ್ಟದಲ್ಲಿ ಸೀಮಿತಗೊಳಿಸದೆ ಸದರಿ ಲಸಿಕೆ ನೀಡುವ ಸ್ಥಳಕ್ಕೆ ಯಾರೇ ಆಧಾರ್ ಕಾರ್ಡ್ ಗಳನ್ನು ತೆಗೆದುಕೊಂಡು ಬಂದರೂ ಮುಕ್ತವಾಗಿ ನೀಡಬೇಕೆಂದು ಕಿಮ್ಮನೆ ರತ್ನಾಕರ್ ಅವರು ಒತ್ತಾಯಿಸಿದರು.

ಸೈಕಲ್ ಜಾಥಾದಲ್ಲಿ ಮತ್ತು ಪ್ರತಿಭಟನೆಯಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರೊಂದಿಗೆ ಒಕ್ಕಲಿಗರ ಸಂಘದ ಮತ್ತು ಕೃಷಿ ಸಮಾಜದ ಅಧ್ಯಕ್ಷ ರಾದ ಬಾಳೇಹಳ್ಳಿ ಪ್ರಭಾಕರ್ ,ಎಪಿಎಂಸಿ ಮಾಜಿ ಅಧ್ಯಕ್ಷರಾದ ಹಸಿರುಮನೆ ಮಹಾಬಲೇಶ್ .ತಾಲ್ಲೂಕು ಪಂಚಾಯಿತಿ ಸದಸ್ಯರಾದ ಕೆಳಕೆರೆ ದಿವಾಕರ್, ಪತ್ರಕರ್ತರಾದ ತುಂಗಾ ವಾರ್ತೆ  ವಿಶ್ವನಾಥ ಶೆಟ್ಟಿ ,ಪಟ್ಟಣ ಪಂಚಾಯಿತಿ ಸದಸ್ಯರು ಎಪಿಎಂಸಿ ಸದಸ್ಯರಾದ ಬಿ ಗಣಪತಿ ,ಕಾಂಗೈ ಮುಖಂಡ ಅಮ್ರಪಾಲಿ ಸುರೇಶ್.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮುಡುಬ ರಾಘವೇಂದ್ರ . ಹುಂಚದಕಟ್ಟೆ ಆದರ್ಶ್, ಪಟ್ಟಣ ಪಂಚಾಯ್ತಿ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ರೆಹಮತುಲ್ಲಾ ಅಸಾದಿ ,ಯುವ ಕಾಂಗ್ರೆಸ್ ಅಧ್ಯಕ್ಷ ಅಮರನಾಥ ಶೆಟ್ಟಿ. ಪಟ್ಟಣ ಪಂಚಾಯಿತಿ ಮಾಜಿ ಸದಸ್ಯರಾದ ಬಾಳೆಬೈಲು ರಾಘವೇಂದ್ರ ಶೆಟ್ಟಿ . ಅಲ್ಪಸಂಖ್ಯಾತ ಸಮಿತಿ ಅಧ್ಯಕ್ಷರಾದ ವಿಲಿಯಂ ಮಾರ್ಟಿಸ್ .ಪಟ್ಟಣ ಪಂಚಾಯಿತಿ ಸದಸ್ಯರಾದ ನಮೃತಾ .ರತ್ನಾಕರ ಶೆಟ್ಟಿ . ಶಬನಮ್ .ಗೀತಾ ರಮೇಶ್. ಮಂಜುಳ .ಮುಖಂಡರಾದ ಹರ್ಷೇಂದ್ರಕುಮಾರ್ ಪಡುವಳ್ಳಿ. ಹಾರೋಗೊಳಿಗೆ ವಿಶ್ವನಾಥ್ .ಮಿಲ್ ಕೇರಿ ಹರೀಶ್ , ಡಿ ಲಕ್ಷ್ಮಣ್ .ಸೈಯದ್ ಯಾಸಿನ್.ಇನ್ನೂ ಮುಂತಾದ ನಾಯಕರು ಮತ್ತು ನೂರಾರು ಕಾರ್ಯಕರ್ತರು ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿದ್ದರು ….

ವರದಿ: ಪ್ರಶಾಂತ್ ಮೇಗರವಳ್ಳಿ


ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಚಿವ ಸಂಪುಟದ ಖಾತೆ ಹಂಚಿಕೆ ಫೈನಲ್: ಹಿರಿಯ ಸಚಿವರ ಖಾತೆಗಳಲ್ಲೂ ಭಾರೀ ಬದಲಾವಣೆ!10 ದಿನಗಳ ಕುತೂಹಲಕ್ಕೆ ತೆರೆ – ಇಲ್ಲಿದೆ ಸಂಪೂರ್ಣ ವಿವರ!

ಸಚಿವ ಸಂಪುಟದ ಖಾತೆ ಹಂಚಿಕೆ ಫೈನಲ್: ಹಿರಿಯ ಸಚಿವರ ಖಾತೆಗಳಲ್ಲೂ ಭಾರೀ ಬದಲಾವಣೆ!10 ದಿನಗಳ ಕುತೂಹಲಕ್ಕೆ ತೆರೆ - ಇಲ್ಲಿದೆ…

5 hours ago

ರಸ್ತೆಯಲ್ಲೇ ಭತ್ತ ನಾಟಿ ಮಾಡಿ ಗ್ರಾಮಸ್ಥರ ಪ್ರತಿಭಟನೆ; ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ

ರಸ್ತೆಯಲ್ಲೇ ಭತ್ತ ನಾಟಿ ಮಾಡಿ ಗ್ರಾಮಸ್ಥರ ಪ್ರತಿಭಟನೆ; ಹೆದ್ದಾರಿಪುರ ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ Villagers protest by planting…

5 hours ago

ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ

ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ A container lorry lost control and collided…

8 hours ago

ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ತಂಬಾಕು–ನಿಕೋಟಿನ್ ಉತ್ಪನ್ನಗಳ ಸಂಪೂರ್ಣ ನಿಷೇಧ

ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ತಂಬಾಕು–ನಿಕೋಟಿನ್ ಉತ್ಪನ್ನಗಳ ಸಂಪೂರ್ಣ ನಿಷೇಧ Karnataka government bans manufacture, storage, transport,…

8 hours ago

ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ

ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ Kenchanaala Marikamba Jatre was celebrated with…

1 day ago

ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ!

ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ! Changing trends among Indian women show a growing…

2 days ago