Categories: Blog

ತೀರ್ಥಹಳ್ಳಿಯಲ್ಲಿ ವ್ಯಾಕ್ಸಿನ್ ಪೈಟ್:

ತೀರ್ಥಹಳ್ಳಿ: ಪಟ್ಟಣದಲ್ಲಿ ಕೊರೊನಾ ಲಸಿಕೆಗಾಗಿ ಬಿಜೆಪಿ ಹಾಗೂ ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು, ಬಳಿಕ ಅದು ಘರ್ಷಣೆಗೆ ತಿರುಗಿದ ಪರಿಣಾಮ ಕಾಂಗ್ರೆಸ್​ನ ಇಬ್ಬರು ಹಾಗೂ ಬಿಜೆಪಿಯ ಮೂವರು ಕಾರ್ಯಕರ್ತರು ಆಸ್ಪತ್ರೆಗೆ ದಾಖಲಾಗಿದ್ದಾರೆ. ತಪ್ಪು ಮಾಡಿದ ಬಳಿಕ ಪರಸ್ಪರ ಆರೋಪಿಸಿಕೊಂಡ ಎರಡೂ ಪಕ್ಷದವರು ಪ್ರತಿಭಟನೆ ನಡೆಸಿದ್ದಾರೆ. ತೀರ್ಥಹಳ್ಳಿ ಪಟ್ಟಣದ ಸೀಬಿನಕೆರೆ ಶಾಲೆಯ ಕೊರೊನಾ ಲಸಿಕೆ ಕೇಂದ್ರದಲ್ಲಿ ಘಟನೆ ನಡೆದಿದ್ದು, ಮೊದಲು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಕಾಂಗ್ರೆಸ್​ ಪ್ರತಿಭಟನೆ ನಡೆಸಿದರೆ ಅವರ ಪ್ರತಿಭಟನೆ ಮುಗಿದ ಬಳಿಕ ಬಿಜೆಪಿ ಮುಖಂಡ ಬಾಳೆಬೈಲು ರಾಘವೇಂದ್ರ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ.

ಕೊರೊನಾ ಲಸಿಕೆ ಹಾಕಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಮಾತಿಗೆ ಮಾತು ಬೆಳೆದು ಗಲಾಟೆ ರಾಜಕೀಯ ತಿರುವು ಪಡೆಯುತ್ತಿದ್ದಂತೆಯೇ ಎರಡೂ ಪಕ್ಷದ ಕಾರ್ಯಕರ್ತರ ನಡುವೆ ಘರ್ಷಣೆಯೂ ನಡೆದಿದೆ. ಘರ್ಷಣೆಯ ಪರಿಣಾಮ ಬಿಜೆಪಿ ಕಾರ್ಯಕರ್ತರಾದ ವಿಶ್ವನಾಥ್ ಗಾಣಿಗ, ಯಶಸ್ವಿ ಹಾಗೂ ಸುಮಂತ ಮತ್ತು ಕಾಂಗ್ರೆಸ್​ ಪಕ್ಷದ ತೀರ್ಥಹಳ್ಳಿ ಪಟ್ಟಣ ಪಂಚಾಯತ್ ಸದಸ್ಯ ನಮೃತ್ ಮತ್ತು ಸುಭಾಷ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬಳಿಕ ಎರಡೂ ಪಕ್ಷದವರು ಘರ್ಷಣೆಯನ್ನು ಖಂಡಿಸಿ ತಡರಾತ್ರಿ ವೇಳೆಗೆ ಪ್ರತಿಭಟನೆ ನಡೆಸಿದ್ದು ಮೊದಲು ಕಾಂಗ್ರೆಸ್​ ನಾಯಕ, ಮಾಜಿ ಸಚಿವ ಕಿಮ್ಮನೆ ರತ್ನಾಕರ್​ ನೇತೃತ್ವದಲ್ಲಿ ಕಾಂಗ್ರೆಸ್​ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಆ ಪ್ರತಿಭಟನೆ ಮುಗಿಯುತ್ತಿದ್ದಂತೆಯೇ ಬಿಜೆಪಿ ತಾಲ್ಲೂಕು ಅಧ್ಯಕ್ಷ ಬಾಳೇಬೈಲು ರಾಘವೇಂದ್ರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಘರ್ಷಣೆಗೆ ಸಂಬಂಧಿಸಿದಂತೆ ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಹಿಂದೆಯೂ ಕೆಲವೆಡೆ ಕೊರೊನಾ ಲಸಿಕೆ ವಿತರಣೆ ವಿಚಾರದಲ್ಲಿ ಬೇರೆಬೇರೆ ಪಕ್ಷಗಳ ಕಾರ್ಯಕರ್ತರು ರಾಜಕೀಯ ಎಳೆದುತಂದು ಗಲಾಟೆ ನಡೆಸಿದ ಉದಾಹರಣೆಗಳು ದೇಶದ ವಿವಿಧೆಡೆ ದಾಖಲಾಗಿವೆ. ಕೊರೊನಾ ಎರಡನೇ ಅಲೆ ಪ್ರಭಾವ ತಗ್ಗಿದಂತೆ ಕಾಣುತ್ತಿದ್ದರೂ ಡೆಲ್ಟಾ ರೂಪಾಂತರಿ ಹಾಗೂ ಸಂಭವನೀಯ ಮೂರನೇ ಅಲೆ ಬಗ್ಗೆ ತಜ್ಞರು ಎಚ್ಚರಿಕೆಯ ಮಾತುಗಳನ್ನಾಡಿರುವುದರಿಂದ ಲಸಿಕೆ ವಿತರಣೆಗೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ಇಂತಹ ಸಂದರ್ಭದಲ್ಲೂ ರಾಜಕೀಯ ಬೆರೆಸಿ ಕಿತ್ತಾಡಿಕೊಳ್ಳುತ್ತಿರುವುದು ವಿಷಾದನೀಯ

ವರದಿ: ಪ್ರಶಾಂತ್ ಮೇಗರವಳ್ಳಿ
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

30 ವರ್ಷ 8 ತಿಂಗಳ ಸಾರ್ಥಕ ಸೇವೆಗೆ ವಿರಾಮ: ಬರುವೆ ಶಾಲೆಯ ಶಿಕ್ಷಕಿ ಅಂಬಿಕಾ ಸಿ. ಅವರಿಗೆ ಆತ್ಮೀಯ ಬೀಳ್ಕೊಡುಗೆ

30 ವರ್ಷ 8 ತಿಂಗಳ ಸಾರ್ಥಕ ಸೇವೆಗೆ ವಿರಾಮ: ಶಿಕ್ಷಕಿ ಅಂಬಿಕಾ ಸಿ. ಅವರಿಗೆ ಆತ್ಮೀಯ ಬೀಳ್ಕೊಡುಗೆ Teacher Ambika…

3 hours ago

ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ

ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ Ramesh H.B. has been appointed as the…

4 hours ago

ರಿಪ್ಪನ್‌ಪೇಟೆ, ಹರತಾಳು, ಗರ್ತಿಕೆರೆಯಲ್ಲಿ ರಾಯರ 355ನೇ ಆರಾಧನೆ; ಹರಿದು ಬಂದ ಭಕ್ತ ಸಾಗರ

ರಿಪ್ಪನ್‌ಪೇಟೆ, ಹರತಾಳು, ಗರ್ತಿಕೆರೆಯಲ್ಲಿ ರಾಯರ 355ನೇ ಆರಾಧನೆ; ಹರಿದು ಬಂದ ಭಕ್ತ ಸಾಗರ Thousands of devotees participated in…

4 hours ago

ಹೊಸನಗರ ಪಿಎಸ್‌ಐ ಶಂಕರ್ ಗೌಡ ಪಾಟೀಲ್ ವರ್ಗಾವಣೆ; ನೂತನ ಪಿಎಸ್‌ಐ ಆಗಿ ಸಂತೋಷ್ ಬಾಗೋಜಿ ಅಧಿಕಾರ ಸ್ವೀಕಾರ

ಹೊಸನಗರ ಪಿಎಸ್‌ಐ ಶಂಕರ್ ಗೌಡ ಪಾಟೀಲ್ ವರ್ಗಾವಣೆ; ನೂತನ ಪಿಎಸ್‌ಐ ಆಗಿ ಸಂತೋಷ್ ಬಾಗೋಜಿ ಅಧಿಕಾರ ಸ್ವೀಕಾರ Hosanagara PSI…

6 hours ago

ದೇವಸ್ಥಾನಕ್ಕೆ ತೆರಳಿದ್ದ ಪೋಷಕರು ವಾಪಸ್ ಬರುವಷ್ಟರಲ್ಲಿ ಸಂಭವಿಸಿತ್ತು ದುರಂತ – 9ನೇ ತರಗತಿ ವಿದ್ಯಾರ್ಥಿನಿ ಸಾವು

ದೇವಸ್ಥಾನಕ್ಕೆ ತೆರಳಿದ್ದ ಪೋಷಕರು ವಾಪಸ್ ಬರುವಷ್ಟರಲ್ಲಿ ಸಂಭವಿಸಿತ್ತು ದುರಂತ - 9ನೇ ತರಗತಿ ವಿದ್ಯಾರ್ಥಿನಿ ಸಾವು A tragic incident…

7 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿಜೆ ನಿಯಮ ಉಲ್ಲಂಘನೆ; ಶಿವಮೊಗ್ಗದಲ್ಲಿ ಒಟ್ಟು 5 ಪ್ರಕರಣ ದಾಖಲು

ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿಜೆ ನಿಯಮ ಉಲ್ಲಂಘನೆ; ಶಿವಮೊಗ್ಗದಲ್ಲಿ ಒಟ್ಟು 5 ಪ್ರಕರಣ ದಾಖಲು Shivamogga police have registered…

7 hours ago