January 11, 2026

ತುರ್ತು ಪರಿಸ್ಥಿತಿ ನಿಭಾಯಿಸಲು ಸನ್ನದ್ದರಾಗಿರಿ: ಕುಮಾರ್ ಬಂಗಾರಪ್ಪ

ಸೊರಬ: ತಾಲೂಕಿನಲ್ಲಿ ಅತಿವೃಷ್ಟಿ ನಿಮಿತ್ತ ಮಾನ್ಯ ಶಾಸಕರು ಇಂದು ತಾಲೂಕು ಕಚೇರಿ ಸೊರಬದಲ್ಲಿ ತುರ್ತು ಸಭೆಯನ್ನು ನಡೆಸಿದರು.

ತಾಲೂಕಿನಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು  ಈ ಸಂದರ್ಭದಲ್ಲಿ ತಾಲೂಕ ಆಡಳಿದ ತುರ್ತು ಪರಿಸ್ಥಿತಿ ನಿಭಾಯಿಸಲು ಸನ್ನದ್ಧರಾಗಿರಲು ಸೂಚಿಸಿದರು.

ಈ ಸಂದರ್ಭದಲ್ಲಿ  ತಹಶೀಲ್ದಾರ್ ಸೊರಬ, ಪುರಸಭೆ ಅಧ್ಯಕ್ಷರು ಹಾಗೂ ಎಲ್ಲ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ನಂತರ ಸೊರಬ ವಿಧಾನಸಭಾ ಕ್ಷೇತ್ರದ ಸೊರಬ ಪಟ್ಟಣದ ದಂಡಾವತಿ ಸೇತುವೆ, ಹಳೆಸೊರಬ ಗ್ರಾಮದ ಕೆರೆ ತೀರ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿರುವ ವಿಷಯ ತಿಳಿದು ಮಾನ್ಯ ಶಾಸಕರಾದ ಶ್ರೀ ಎಸ್ ಕುಮಾರ್ ಬಂಗಾರಪ್ಪ ರವರು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದು, ಸೂಕ್ತ ವ್ಯವಸ್ಥೆಗೆ ಸೂಚನೆ ನೀಡಿದರು..

ಈ ಸಂಧರ್ಭದಲ್ಲಿ ಪುರಸಭೆ ಅಧ್ಯಕ್ಷರು, ಸದಸ್ಯರುಗಳು ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳು, ಗ್ರಾಮಸ್ಥರು ಹಾಜರಿದ್ದರು.



ವರದಿ: ವೆಂಕಟೇಶ್ ಚಂದ್ರಗುತ್ತಿ
ಪೋ::9845783961



ಪೋಸ್ಟ್‌ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..

About The Author

Leave a Reply

Your email address will not be published. Required fields are marked *

Exit mobile version