w
Headlines
Home » ನಾಳೆಯಿಂದ ಅರಸಾಳು ಮಾಲ್ಗುಡಿ ಮ್ಯೂಸಿಯಂ ಸಾರ್ವಜನಿಕರ ಪ್ರವೇಶಕ್ಕೆ ಅನುಮತಿ::

ನಾಳೆಯಿಂದ ಅರಸಾಳು ಮಾಲ್ಗುಡಿ ಮ್ಯೂಸಿಯಂ ಸಾರ್ವಜನಿಕರ ಪ್ರವೇಶಕ್ಕೆ ಅನುಮತಿ::

ರಿಪ್ಪನ್ ಪೇಟೆ: ಲಾಕ್ ಡೌನ್ ಸಡಿಲಿಕೆಯಿಂದಾಗಿ ಅರಸಾಳು ರೈಲ್ವೆ ನಿಲ್ದಾಣದಲ್ಲಿರುವ ಮಾಲ್ಗುಡಿ ಮ್ಯೂಸಿಯಂ ಪುನರಾರಂಭಗೊಳ್ಳಲಿದೆ.ಶಂಕರ್ ನಾಗ್ ನಟಿಸಿ ನಿರ್ದೇಶಿಸಿರುವ, ಆರ್ ಕೆ ನಾರಾಯಣ್ ಅವರ ಕೃತಿ ಆಧಾರಿತ ಮಾಲ್ಗುಡಿ ಡೇಸ್ ಧಾರವಾಹಿ, ಅರಸಾಳು ರೈಲ್ವೆ ನಿಲ್ದಾಣದಲ್ಲಿ ಚಿತ್ರೀಕರಣವಾಗಿತ್ತು ಹಾಗಾಗಿ ಅರಸಾಳು ರೈಲ್ವೆ ನಿಲ್ದಾಣದಲ್ಲಿ ಮಾಲ್ಗುಡಿ ಮ್ಯೂಸಿಯಂ ನಿರ್ಮಿಸಲಾಗಿತ್ತು. 

ಮಾಲ್ಗುಡಿ ಡೇಸ್ ಧಾರಾವಾಹಿಯ ನೆನಪುಗಳನ್ನು ಕಲೆ ಹಾಕುತ್ತಿರುವ ಮಾಲ್ಗುಡಿ ಮ್ಯೂಸಿಯಂನನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದರು.‌

ಕೋವಿಡ್ ಕಾರಣದ ಹಿನ್ನೆಲೆಯಲ್ಲಿ ಕಳೆದ 2 ತಿಂಗಳಿನಿಂದ ಬಂದ್ ಆಗಿದ್ದ ಮಾಲ್ಗುಡಿ ಮ್ಯೂಸಿಯಂ ಪುನಾರಾರಂಭವಾಗಲಿದೆ. ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸಾರ್ವಜನಿಕರ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ.. ಮ್ಯೂಸಿಯಂಗೆ ಆಗಮಿಸುವ ಪ್ರವಾಸಿಗರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರವನ್ನ ಕಾಯ್ದುಕೊಳ್ಳಬೇಕು ಎಂದು ತಿಳಿಸಲಾಗಿದೆ


ವರದಿ:ರಾಮನಾಥ್

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.