ಗಡಿಕಟ್ಟೆ: ಕಷ್ಟ ಎಲ್ಲಾರಿಗೂ ಇರುತ್ತದೆ ಪರಸ್ಪರ ಒಬ್ಬರು ಮತ್ತೊಬ್ಬರಿಗೆ ಸಹಾಯ ಹಸ್ತ ಚಾಚಿದಾಗ ನೊಂದವರಿಗೆ ಕೊಂಚ ಸಮಾಧಾನವಾಗುತ್ತದೆ ಎಂದು ಮಾಜಿ ಶಾಸಕರೂ,ಕೆ.ಪಿ.ಸಿ.ಸಿ. ವಕ್ತಾರರಾದ ಗೋಪಾಲಕೃಷ್ಣ ಬೇಳೂರು ಅಭಿಪ್ರಾಯ ವ್ಯಕ್ತಪಡಿಸಿದರು.
ಅವರು ಇಲ್ಲಿನ ಗಡಿಕಟ್ಟೆಯ ಹಾವುಗೊಲ್ಲರ ಸುಮಾರು 50 ಕುಟುಂಬದ ಸದಸ್ಯರಿಗೆ ದಿನಸಿ ಕಿಟ್ ಗಳನ್ನು ವಿತರಿಸಿ ಮಾತನಾಡಿದರು. ಸರ್ಕಾರ ಇಂತಹವರನ್ನು ನಿರ್ಲಕ್ಷಿಸಿರುವುದು ಖಂಡನೀಯ, ನಿಮ್ಮ ಸಂಕಷ್ಟದ ಜೊತೆ ಗೋಪಾಲಕೃಷ್ಣ ಬೇಳೂರು ಸದಾ ಇರುತ್ತಾರೆ ಎಂದರು.
ಈ ಸಂದರ್ಭದಲ್ಲಿ ರಂಜಿತ ರಾಧಾ ಗೋಪಾಲ ಕೃಷ್ಣ ಬೇಳೂರು, ತಾಲ್ಲೂಕು ಪಂಚಾಯತ ಸದಸ್ಯರಾದ ಸೋಮಶೇಖರ ಲಾವಿಗೆರೆ, ಗ್ರಾಮ ಪಂಚಾಯ್ತಿ ಸದಸ್ಯ ಅಶೋಕ್ ಬೇಳೂರು, ಗಣಪತಿ ಮಂಡಗಳಲೆ, ಮುಖಂಡರಾದ ವಿ. ಶಂಕರ್, ಸಂತೋಷ್ ಸದ್ಗುರು, ನಾಗರಾಜ ಸ್ವಾಮಿ, ಶ್ರೀದರ ಪಟೇಲ್, ಆನಂದ್, ಮಂಜು ಸಣ್ಣಕ್ಕಿ ರವಿ, ಅರುಣ, ವಿಜಯ್ ವಿಜೇಂದ್ರ, ಘಟಕದ ಅಧ್ಯಕ್ಷ ಅಬ್ಬು ಮೊದಲಾದವರು ಹಾಜರಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್