Categories: Blog

ಬಿಳ್ಕೊಡುಗೆ ಸಮಾರಂಭ::

ಹುಲ್ತಿಕೊಪ್ಪ:ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರ್ವಹಿಸಿದ  ಸಿಬ್ಬಂದಿಗಳು ಪದೋನ್ನತಿ ಹೊಂದಿ ಬೇರೆ ಕಡೆಗೆ ವರ್ಗಾವಣೆಗೊಂಡ  ಶ್ರೀಮತಿ ಲಕ್ಷ್ಮಿ ,ಶ್ರೀಮತಿ ಕುಸುಮ ಸಿಸ್ಟರ್ ಹಾಗೂ  ಹೆಚ್ ಪಿ ನಾಗರಾಜ್  ಅವರನ್ನು ಗೌರವ ಪೂರ್ಣವಾಗಿ  ಬೀಳ್ಕೊಡಲಾಯಿತು.
ಇದೇ ಸಂದರ್ಭದಲ್ಲಿ ಚಂದ್ರಗುತ್ತಿಯಲ್ಲಿ ಸೇವೆಸಲ್ಲಿಸಿ ನಿವೃತ್ತರಾದ ಇಂದುಧರ್ ಪಾಟೀಲ್ ಸರ್ ಅವರ ಕಾರ್ಯವನ್ನು ಸ್ಮರಿಸಿ ಅಭಿನಂದಿಸಲಾಯಿತು,

ಈ ಬೀಳ್ಕೊಡುಗೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಡಾಕ್ಟರ್ ವಿನಯ್ ಕುಮಾರ್ ಪಾಟೀಲ್ ರವರು ಮಾತನಾಡಿ ಯಾವುದೇ ಒಂದು ಆಡಳಿತ ವ್ಯವಸ್ಥೆಯಲ್ಲಿ ಎಲ್ಲರೂ ಜವಾಬ್ದಾರಿಯಿಂದ ಸೇವೆ ನೀಡಿದರೆ ಉತ್ತಮ ಸೇವೆ ದೊರೆಯುವುದು ಎಂದರು.
ವಿಶೇಷ ಆಹ್ವಾನಿತರಾಗಿ ಭಾಗವಹಿಸಿದ ತಾಲೂಕು ವೈದ್ಯಾಧಿಕಾರಿಗಳಾದ ಡಾಕ್ಟರ್ ಅಕ್ಷತಾ ಖಾನಾಪುರ್ ರವರು ಈ ಕೊರೋನಾ  ಎರಡನೆಯ ಸಮಯದಲ್ಲಿ   ಕಾರ್ಯನಿರ್ವಹಿಸಿದ ಸೊರಬ ತಾಲ್ಲೂಕು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರು  ಅಂಗನವಾಡಿ ಕಾರ್ಯಕರ್ತರನ್ನು ಅಭಿನಂದಿಸಿದರು, ಹಾಗೂ ಮೂರನೆಯ ಅಲೆಯ ಸಂಭವವಿದ್ದು ತಯಾರಾಗಲು ಸೂಚಿಸಿದರು,

ನಿರೂಪಣೆಯನ್ನು ಗಾಯತ್ರಿ ಸಿಸ್ಟರ್ ನಿರ್ವಹಿಸಿದರು, ಪ್ರಾರ್ಥನೆಯನ್ನು ಸುಮನ್ ಪಿ ಮತ್ತು ಪವಿತ್ರ ಸಿಸ್ಟರ್ ಮಾಡಿದರು, ಸ್ವಾಗತವನ್ನು ಮಂಜುನಾಥ್ ರಾವ್ ಮಾಡಿದರು, ರೇಖಾ, ಆಶಾ, ಪುನೀತ್ ಸರ್  ಮತ್ತು ಪ್ರಶಾಂತ್ ನಾಯಕ್ ಅನಿಸಿಕೆ ಹಂಚಿಕೊಂಡರು, ರೇಣುಕಾಪ್ರಸಾದ್ ವಂದನಾರ್ಪಣೆಯನ್ನು ಮಾಡಿದರು.ಎಂಲ್ಎಚ್ ವಿಗಳಾದ ಶ್ರೇಯ ,ಅಂಜುಮ್,ಹರೀಶ್,ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ವರದಿ:ಪ್ರಸನ್ನ ಶೇಟ್ ಚಂದ್ರಗುತ್ತಿ
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python…

38 minutes ago

ಈದ್ ಮಿಲಾದ್ – ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್ ವಾರ್ನಿಂಗ್

ಈದ್ ಮಿಲಾದ್ - ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್…

2 hours ago

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…

9 hours ago

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…

9 hours ago

ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆ ಮೇಲೆ ಹಲ್ಲೆ; ಬಂಗಾರದ ಸರ ಕಿತ್ತುಕೊಂಡು ದುಷ್ಕರ್ಮಿ ಪರಾರಿ

ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆ ಮೇಲೆ ಹಲ್ಲೆ; ಬಂಗಾರದ ಸರ ಕಿತ್ತುಕೊಂಡು ದುಷ್ಕರ್ಮಿ ಪರಾರಿ A woman was allegedly…

9 hours ago

30 ವರ್ಷ 8 ತಿಂಗಳ ಸಾರ್ಥಕ ಸೇವೆಗೆ ವಿರಾಮ: ಬರುವೆ ಶಾಲೆಯ ಶಿಕ್ಷಕಿ ಅಂಬಿಕಾ ಸಿ. ಅವರಿಗೆ ಆತ್ಮೀಯ ಬೀಳ್ಕೊಡುಗೆ

30 ವರ್ಷ 8 ತಿಂಗಳ ಸಾರ್ಥಕ ಸೇವೆಗೆ ವಿರಾಮ: ಶಿಕ್ಷಕಿ ಅಂಬಿಕಾ ಸಿ. ಅವರಿಗೆ ಆತ್ಮೀಯ ಬೀಳ್ಕೊಡುಗೆ Teacher Ambika…

21 hours ago