ಮಮತಾ ಬ್ಯಾನರ್ಜಿಗೆ 5 ಲಕ್ಷ ರೂ. ದಂಡ ವಿಧಿಸಿದ ನ್ಯಾಯಮೂರ್ತಿ

ಕೋಲ್ಕತಾ: ಮುಖ್ಯಮಂತ್ರಿ, ಟಿಎಂಸಿ ಮುಖ್ಯಸ್ಥೆ ಅವರಿಗೆ ನ್ಯಾಯಮೂರ್ತಿ ಅವರು 5 ಲಕ್ಷ ರೂಪಾಯಿ ದಂಡ ವಿಧಿಸಿದ್ದಾರೆ. ಜತೆಗೆ ನಂದಿಗ್ರಾಮ ವಿಧಾನಸಭೆ ಕ್ಷೇತ್ರದಿಂದ ವಿರೋಧ ಪಕ್ಷದ ನಾಯಕ ಅವರ ಆಯ್ಕೆಯನ್ನು ಪ್ರಶ್ನಿಸಿ ಮಮತಾ ಬ್ಯಾನರ್ಜಿ ಸಲ್ಲಿಸಿದ ಅರ್ಜಿಯ ವಿಚಾರಣೆಯಿಂದ ನ್ಯಾಯಮೂರ್ತಿ ಹಿಂದೆ ಸರಿದಿದ್ದಾರೆ.

‘ಅರ್ಜಿದಾರರ ಪ್ರಕರಣವನ್ನು ವಿಚಾರಣೆಗೆ ಒಳಪಡಿಸಲು ನನಗೆ ಯಾವುದೇ ವೈಯಕ್ತಿಕ ಒಲವು ಇಲ್ಲ. ಈ ಪ್ರಕರಣವನ್ನು ಕೈಗೆತ್ತಿಕೊಳ್ಳಲು ನನಗೆ ಹಿಂಜರಿಕೆಯೂ ಇಲ್ಲ. ಸಿಜೆಐ ನನಗೆ ನಿಯೋಜಿಸಿದ ಪ್ರಕರಣವನ್ನು ವಿಚಾರಣೆ ನಡೆಸುವುದು ನನ್ನ ಸಾಂವಿಧಾನಿಕ ಕರ್ತವ್ಯ. ಆದರೆ ನಾನು ಈ ಪ್ರಕರಣದಿಂದ ಹಿಂದೆ ಸರಿಯಲು ನಿರ್ಧರಿಸಿದ್ದೇನೆ’ ಎಂದು ನ್ಯಾಯಮೂರ್ತಿ ಕೌಶಿಕ್ ಚಂದ ಹೇಳಿದ್ದಾರೆ.

ಕೌಶಿಕ್ ಚಂದ ಅವರು ಬಿಜೆಪಿ ಜತೆಗೆ ಬಹಳ ವೈಯಕ್ತಿಕ, ಹಣಕಾಸಿನ ಮತ್ತು ಸೈದ್ಧಾಂತಿಕ ಸಂಬಂಧವನ್ನು ಹೊಂದಿರುವುದನ್ನು ಸಾರ್ವಜನಿಕವಾಗಿ ಲಭ್ಯವಿರುವ ದಾಖಲೆಗಳು ತೋರಿಸಿವೆ. ಹೀಗಾಗಿ ಈ ಪ್ರಕರಣದಿಂದ ನ್ಯಾ. ಚಂದ ಅವರು ಹಿಂದೆ ಸರಿಯಬೇಕು ಎಂದು ಮಮತಾ ಪರ ವಕೀಲರು ಕಳೆದ ತಿಂಗಳು ಆಗ್ರಹಿಸಿದ್ದರು. ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಅವರೊಂದಿಗೆ ನ್ಯಾ. ಚಂದ ಅವರಿದ್ದ ಚಿತ್ರಗಳನ್ನು ಟಿಎಂಸಿ ಬಿಡುಗಡೆ ಮಾಡಿತ್ತು. ತಾವು ಈ ಪ್ರಕರಣದಿಂದ ಹಿಂದೆ ಸರಿಯದೆ ಇದ್ದರೆ ಕಿರುಕುಳ ನೀಡುವವರು ವಿವಾದವನ್ನು ಜೀವಂತವಾಗಿ ಇರಿಸುತ್ತಾರೆ ಎಂದು ಬುಧವಾರ ಹೇಳಿದ ಚಂದ, ತಮ್ಮನ್ನು ಹೈಕೋರ್ಟ್‌ನ ಕಾಯಂ ನ್ಯಾಯಮೂರ್ತಿಯಾಗಿಸುವುದಕ್ಕೆ ಮಮತಾ ಅವರ ಆಕ್ಷೇಪಣೆಯು ವಿಚಾರಣೆಯಿಂದ ಹಿಂದೆ ಸರಿಯುವ ಅವರ ಮನವಿಗೆ ಸೂಕ್ತವಾಗಿಲ್ಲ ಎಂದಿದ್ದಾರೆ.

‘ನ್ಯಾಯಾಧೀಶರ ನೇಮಕದ ಕುರಿತಾದ ತಮ್ಮ ಸಮ್ಮತಿ ಅಥವಾ ಆಕ್ಷೇಪಣೆ ಆಧಾರದಲ್ಲಿ ಅರ್ಜಿದಾರರು ವಿಚಾರಣೆಯಿಂದ ಹಿಂದೆ ಸರಿಯಲು ಬಯಸುವಂತಿಲ್ಲ. ಅರ್ಜಿದಾರರ ಸ್ವಂತ ವೈಯಕ್ತಿಕ ಕ್ರಿಯೆಗಳಿಗಾಗಿ ನ್ಯಾಯಾಧೀಶರೊಬ್ಬರನ್ನು ಪಕ್ಷಪಾತಿ ಎಂದು ಹೇಳಲಾಗದು’ ಎಂದು ಹೇಳಿದ್ದಾರೆ. ‘ವಿಚಾರಣೆಯಿಂದ ಹಿಂದೆ ಸರಿಯಲು ಇಂತಹ ಲೆಕ್ಕಾಚಾರದ, ಮಾನಸಿಕ ಮತ್ತು ಆಕ್ರಮಣಕಾರಿ ಪ್ರಯತ್ನಗಳನ್ನು ದೃಢವಾಗಿ ಹಿಮ್ಮೆಟ್ಟಿಸಬೇಕಿದೆ’ ಎಂದ ಅವರು, 5 ಲಕ್ಷ ರೂ ದಂಡ ವಿಧಿಸಿದರು. ಈ ಹಣವನ್ನು ಎರಡು ವಾರಗಳ ಒಳಗೆ ಪಶ್ಚಿಮ ಬಂಗಾಳದ ಬಾರ್ ಕೌನ್ಸಿಲ್‌ನಲ್ಲಿ ಇರಿಸಬೇಕು.

ಈ ಮೊತ್ತವನ್ನು ಕೋವಿಡ್ 19ರಿಂದ ಮೃತಪಟ್ಟ ವಕೀಲರ ಕುಟುಂಬದವರಿಗೆ ನೀಡಲು ಬಳಸಬಹುದು ಎಂದು ಸೂಚಿಸಿದ್ದಾರೆ.

ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಮಾಜಿ ಸಹೋದ್ಯೋಗಿ ಸುವೇಂದು ಅಧಿಕಾರಿ ವಿರುದ್ಧ ನಂದಿಗ್ರಾಮ ಕ್ಷೇತ್ರದಲ್ಲಿ ಮಮತಾ ಅವರು 1,956 ಮತಗಳಿಂದ ಸೋಲು ಕಂಡಿದ್ದರು. ಚುನಾವಣೆಯಲ್ಲಿ ನಿಯೋಜನೆಗೊಂಡಿದ್ದ ಅಧಿಕಾರಿಯೊಬ್ಬರು ತಮಗೆ ಬೆದರಿಕೆ ಬಂದಿದ್ದಾಗಿ ಹೇಳಿದ್ದರು. ಇದರಿಂದ ಇಲ್ಲಿ ಅಕ್ರಮ ನಡೆದಿದ್ದು, ಸುವೇಂದು ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಮಮತಾ ಒತ್ತಾಯಿಸಿದ್ದಾರೆ.
ವರದಿ: ರಾಮನಾಥ್ ರಿಪ್ಪನ್ ಪೇಟೆ
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

30 ವರ್ಷ 8 ತಿಂಗಳ ಸಾರ್ಥಕ ಸೇವೆಗೆ ವಿರಾಮ: ಬರುವೆ ಶಾಲೆಯ ಶಿಕ್ಷಕಿ ಅಂಬಿಕಾ ಸಿ. ಅವರಿಗೆ ಆತ್ಮೀಯ ಬೀಳ್ಕೊಡುಗೆ

30 ವರ್ಷ 8 ತಿಂಗಳ ಸಾರ್ಥಕ ಸೇವೆಗೆ ವಿರಾಮ: ಶಿಕ್ಷಕಿ ಅಂಬಿಕಾ ಸಿ. ಅವರಿಗೆ ಆತ್ಮೀಯ ಬೀಳ್ಕೊಡುಗೆ Teacher Ambika…

2 hours ago

ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ

ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ Ramesh H.B. has been appointed as the…

3 hours ago

ರಿಪ್ಪನ್‌ಪೇಟೆ, ಹರತಾಳು, ಗರ್ತಿಕೆರೆಯಲ್ಲಿ ರಾಯರ 355ನೇ ಆರಾಧನೆ; ಹರಿದು ಬಂದ ಭಕ್ತ ಸಾಗರ

ರಿಪ್ಪನ್‌ಪೇಟೆ, ಹರತಾಳು, ಗರ್ತಿಕೆರೆಯಲ್ಲಿ ರಾಯರ 355ನೇ ಆರಾಧನೆ; ಹರಿದು ಬಂದ ಭಕ್ತ ಸಾಗರ Thousands of devotees participated in…

3 hours ago

ಹೊಸನಗರ ಪಿಎಸ್‌ಐ ಶಂಕರ್ ಗೌಡ ಪಾಟೀಲ್ ವರ್ಗಾವಣೆ; ನೂತನ ಪಿಎಸ್‌ಐ ಆಗಿ ಸಂತೋಷ್ ಬಾಗೋಜಿ ಅಧಿಕಾರ ಸ್ವೀಕಾರ

ಹೊಸನಗರ ಪಿಎಸ್‌ಐ ಶಂಕರ್ ಗೌಡ ಪಾಟೀಲ್ ವರ್ಗಾವಣೆ; ನೂತನ ಪಿಎಸ್‌ಐ ಆಗಿ ಸಂತೋಷ್ ಬಾಗೋಜಿ ಅಧಿಕಾರ ಸ್ವೀಕಾರ Hosanagara PSI…

5 hours ago

ದೇವಸ್ಥಾನಕ್ಕೆ ತೆರಳಿದ್ದ ಪೋಷಕರು ವಾಪಸ್ ಬರುವಷ್ಟರಲ್ಲಿ ಸಂಭವಿಸಿತ್ತು ದುರಂತ – 9ನೇ ತರಗತಿ ವಿದ್ಯಾರ್ಥಿನಿ ಸಾವು

ದೇವಸ್ಥಾನಕ್ಕೆ ತೆರಳಿದ್ದ ಪೋಷಕರು ವಾಪಸ್ ಬರುವಷ್ಟರಲ್ಲಿ ಸಂಭವಿಸಿತ್ತು ದುರಂತ - 9ನೇ ತರಗತಿ ವಿದ್ಯಾರ್ಥಿನಿ ಸಾವು A tragic incident…

7 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿಜೆ ನಿಯಮ ಉಲ್ಲಂಘನೆ; ಶಿವಮೊಗ್ಗದಲ್ಲಿ ಒಟ್ಟು 5 ಪ್ರಕರಣ ದಾಖಲು

ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿಜೆ ನಿಯಮ ಉಲ್ಲಂಘನೆ; ಶಿವಮೊಗ್ಗದಲ್ಲಿ ಒಟ್ಟು 5 ಪ್ರಕರಣ ದಾಖಲು Shivamogga police have registered…

7 hours ago