ರಿಪ್ಪನ್ ಪೇಟೆ: ಇಲ್ಲಿಗೆ ಸಮೀಪದ ಪೂಜಾರದಿಂಬ ಎಂಬಲ್ಲಿ ರಸ್ತೆ ಮೇಲೆ ಮರ ಬಿದ್ದು ಬಟ್ಟೆಮಲ್ಲಪ್ಪ ರಿಪ್ಪನ್ ಪೇಟೆ ರಸ್ತೆಸಂಪರ್ಕ ಕಡಿತಗೊಂಡಿದೆ.
ಮರ ಬಿದ್ದ ಸ್ಥಳದಲ್ಲಿ ವಿದ್ಯುತ್ ಕಂಬವಿದ್ದು, ವಿದ್ಯುತ್ ವಯರ್ ಗಳು ತುಂಡಾಗಿ ಬಿದ್ದಿದ್ದು ವಿದ್ಯುತ್ ಸಂಪರ್ಕ ಕೂಡ ಕಡಿತಗೊಂಡಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಸಂಬಂಧಪಟ್ಟ ಇಲಾಖೆ ಸೂಕ್ತಕ್ರಮ ಕೈಗೊಂಡು ವಿದ್ಯುತ್ ಸಂಪರ್ಕ ಸರಿಪಡಿಸುವುದರೊಂದಿಗೆ, ಮರ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ವರದಿ: ದೇವರಾಜ್ ರಿಪ್ಪನ್ ಪೇಟೆ
ಪೋಸ್ಟ್ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..