Headlines

ರಾಜ್ಯದಲ್ಲಿ ಜನಸಂಖ್ಯೆಯ ನಿಯಂತ್ರಣಕ್ಕಾಗಿ ಎರಡು ಮಕ್ಕಳ ಯೋಜನಾ ನೀತಿ ಬಗ್ಗೆ ಸಿಎಂ ಜೊತೆ ಚರ್ಚೆ: ಕೆ ಎಸ್ ಈಶ್ವರಪ್ಪ

ಶಿವಮೊಗ್ಗ : ಉತ್ತರ ಪ್ರದೇಶ ರಾಜ್ಯ ಸರ್ಕಾರ ಕುಟುಂಬಕ್ಕೆ 2 ಮಕ್ಕಳು ಇರಬೇಕು ಎಂಬ ತೀರ್ಮಾನ ಮಾಡಿದ್ದನ್ನು ನಾನು ಗಮನಿಸಿದ್ದೇನೆ. ರಾಜ್ಯದಲ್ಲಿ ಏನು ಮಾಡ್ಬೇಕು ಎಂದು ಸಿಎಂ ನೇತೃತ್ವದಲ್ಲಿ ಕುಳಿತು ಚರ್ಚೆ,ಯೋಚನೆ ಮಾಡುತ್ತೇವೆ.ದೇಶದಲ್ಲಿ ಜನಸಂಖ್ಯೆ ದಿನೇ ದಿನೇ ಜಾಸ್ತಿಯಾಗ್ತಾ ಹೋಗ್ತಾನೆ ಇದೆ. ಅದನ್ನು ಕಡಿಮೆ ಮಾಡಲು ಬಹಳ ವರ್ಷದಿಂದ ಕೇಂದ್ರ ಸರಕಾರಗಳು ಎಲ್ಲಾ ಪ್ರಯತ್ನ ಮಾಡುತ್ತಿದೆ. ಅದ್ರೇ, ಯಾವುದೇ ಪ್ರಯೋಜನವಾಗುತ್ತಿಲ್ಲ, ಇದರಿಂದ ಬಡತನ, ನಿರುದ್ಯೋಗ, ಆರ್ಥಿಕ ಮತ್ತು ಸಾಮಾಜಿಕ ಸಮಸ್ಯೆಗಳು ಉಲ್ಬಣಗೊಳ್ಳುತ್ತಿವೆ. ದೇಶ ಸಂಪದ್ಭರಿತವಾಗಬೇಕಾದರೆ ಜನಸಂಖ್ಯೆ ನಿಯಂತ್ರಣ ಅಗತ್ಯ. ಜನಸಂಖ್ಯೆ ವಿಷಯದಲ್ಲಿ ಸ್ಥಿರತೆಯನ್ನು ಸಾಧಿಸದಿದ್ದಲ್ಲಿ ದೇಶದ ಅಭಿವೃದ್ಧಿ ಕಾರ್ಯಗಳು ಯಶಸ್ಸನ್ನು ಕಾಣಲಾರವು ಎಂದು ಉತ್ತರ ಪ್ರದೇಶ ಸರ್ಕಾರದಿಂದ ಎರಡು ಮಕ್ಕಳ ಜನಸಂಖ್ಯಾ ನೀತಿ ವಿಚಾರವಾಗಿ ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯೆ ನೀಡಿದರು.

ಉತ್ತರ ಪ್ರದೇಶದ ಪ್ರಯತ್ನ ನೋಡಿಕೊಂಡು,ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದರು.

ಗ್ರಾಮಾಂತರ ಪ್ರದೇಶದ ಜನ ರಾಜ್ಯದಲ್ಲಿ ನಾಲ್ಕು ಕೋಟಿಗೂ ಹೆಚ್ಚಿನ ಮತದಾರರಿದ್ದಾರೆ. ಅವರೆಲ್ಲರೂ ಜಿ.ಪಂ, ತಾ.ಪಂ ಚುನಾವಣೆಯಲ್ಲಿ ಭಾಗವಹಿಸಬೇಕು. ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ ಸಾಮಾಜಿಕ ನ್ಯಾಯದ ಮೂಲಕ ಮೀಸಲಾತಿ ಆಗಬೇಕು ಎಂದರು.

ಇದು ಸರ್ಕಾರದ ತೀರ್ಮಾನ.‌ ಆ ಪ್ರಕಾರ ಚುನಾವಣಾ ಆಯೋಗಕ್ಕೆ ಅಧಿಕಾರ ಇದೆ. ಚುನಾವಣಾ ಆಯೋಗ ಮೀಸಲಾತಿ ಘೋಷಣೆ ಮಾಡಿದ್ದರ ಬಗ್ಗೆ ನನಗೆ ಯಾವುದೇ ಅಭ್ಯಂತರವಿಲ್ಲ. ಅದ್ರೇ, ಸೌಜನ್ಯಕ್ಕೆ ಸರ್ಕಾರದ ಜೊತೆ ಚರ್ಚೆ ಮಾಡಿದ್ದರೇ, ಸಲಹೆಗಳನ್ನು ಕೊಡಬಹುದಿತ್ತು. ತೀರ್ಮಾನ ಚುನಾವಣಾ ಆಯೋಗದ್ದೇ, ಅದರಲ್ಲಿ ಯಾವುದೇ ಎರಡು ಮಾತಿಲ್ಲ. ಈವಾಗ ಈಡೀ ರಾಜ್ಯದಲ್ಲಿ ಮೀಸಲಾತಿ ಸರಿ ಇಲ್ಲ, ಅನ್ಯಾಯವಾಗಿದೆ ಎಂಬ ಅಪಾದನೆ ಬರುತ್ತಿದೆ.

ಇದರಲ್ಲಿ ಸರ್ಕಾರ ಏನು ಮಾಡಲು ಬರಲ್ಲ.. ಆಯೋಗವೇ ತೀರ್ಮಾನ ತೆಗೆದುಕೊಳ್ಳಬೇಕು. ಈಗಾಗಲೇ ಹಲವರು ಆಕ್ಷೇಪಣೆ ಸಲ್ಲಿಸಿದ್ದಾರೆ. 

ಕೋರ್ಟ್ ಗೆ ಹೋಗಲು ಅವಕಾಶ ಇದೆ,ಸರ್ಕಾರ ಡಿಸೆಂಬರ್ ವರೆಗೂ ಚುನಾವಣೆ ಬೇಡ ಎಂದು ತೀರ್ಮಾನ ಮಾಡಿದೆ. ಕೋವಿಡ್ ಸಮಯದಲ್ಲೇ ಮೀಸಲಾತಿ ಪ್ರಕಟಗೊಂಡಿದೆ. ಯಾವುದೇ ಮೀಸಲಾತಿ ಬಂದರೂ ಪಕ್ಷದಿಂದ ಅಭ್ಯರ್ಥಿ ಹಾಕುತ್ತೇವೆ. ಉತ್ತರ ಪ್ರದೇಶ ಮಾದರಿಯಲ್ಲಿ ಅತೀ ಹೆಚ್ಚು ಜಿಲ್ಲಾ ಪಂಚಾಯತ್ ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದು ಈಶ್ವರಪ್ಪ ಹೇಳಿದರು.


ವರದಿ: ರಾಮನಾಥ್
ಪೋಸ್ಟ್ ಮ್ಯಾನ್ ನ್ಯೂಸ್ ನ ಕಳಕಳಿ

ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹರಡದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.


Leave a Reply

Your email address will not be published. Required fields are marked *