Categories: Blog

ರಿಪ್ಪನ್ ಪೇಟೆಯ ಸಮೀಪದ ಅರಸಾಳು ಬಳಿ ಕಾರು ಬಸ್ಸು ಮುಖಾಮುಖಿ ಡಿಕ್ಕಿ:

ರಿಪ್ಪನ್ ಪೇಟೆ: ಇಲ್ಲಿನ ಸಮೀಪದ ಅರಸಾಳು ಬಳಿ ಬಸ್ ಹಾಗೂ ಕಾರ್ ನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ.ಗಾಯಗೊಂಡವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ‌.

ಶಿವಮೊಗ್ಗದಿಂದ ರಿಪ್ಪನ್ ಪೇಟೆ ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ ಕಾರ್ ಸಂಪೂರ್ಣವಾಗಿ ಜಖಂಗೊಂಡಿದೆ ಎಂದು ತಿಳಿದುಬಂದಿದೆ. ಇಬ್ಬರು ಮಕ್ಕಳಿಗೆ ಗಂಭೀರವಾದ ಗಾಯವಾಗಿದೆ ಎಂದು ತಿಳಿದು ಬಂದಿದೆ. ಕಾರಿನಲ್ಲಿದ್ದವರೂ ಸಾಗರ ಮೂಲದವರೆಂದು ತಿಳಿದುಬಂದಿದೆ.

ರಿಪ್ಪನ್ ಪೇಟೆಯಿಂದ ಶಿವಮೊಗ್ಗ ಕಡೆ ತೆರಳುತ್ತಿದ್ದ ಗಜಾನನ ಬಸ್ ಗೆ ಕಾರಿನ ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.

ವರದಿ : ®®
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

30 ವರ್ಷ 8 ತಿಂಗಳ ಸಾರ್ಥಕ ಸೇವೆಗೆ ವಿರಾಮ: ಬರುವೆ ಶಾಲೆಯ ಶಿಕ್ಷಕಿ ಅಂಬಿಕಾ ಸಿ. ಅವರಿಗೆ ಆತ್ಮೀಯ ಬೀಳ್ಕೊಡುಗೆ

30 ವರ್ಷ 8 ತಿಂಗಳ ಸಾರ್ಥಕ ಸೇವೆಗೆ ವಿರಾಮ: ಶಿಕ್ಷಕಿ ಅಂಬಿಕಾ ಸಿ. ಅವರಿಗೆ ಆತ್ಮೀಯ ಬೀಳ್ಕೊಡುಗೆ Teacher Ambika…

3 hours ago

ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ

ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ Ramesh H.B. has been appointed as the…

4 hours ago

ರಿಪ್ಪನ್‌ಪೇಟೆ, ಹರತಾಳು, ಗರ್ತಿಕೆರೆಯಲ್ಲಿ ರಾಯರ 355ನೇ ಆರಾಧನೆ; ಹರಿದು ಬಂದ ಭಕ್ತ ಸಾಗರ

ರಿಪ್ಪನ್‌ಪೇಟೆ, ಹರತಾಳು, ಗರ್ತಿಕೆರೆಯಲ್ಲಿ ರಾಯರ 355ನೇ ಆರಾಧನೆ; ಹರಿದು ಬಂದ ಭಕ್ತ ಸಾಗರ Thousands of devotees participated in…

4 hours ago

ಹೊಸನಗರ ಪಿಎಸ್‌ಐ ಶಂಕರ್ ಗೌಡ ಪಾಟೀಲ್ ವರ್ಗಾವಣೆ; ನೂತನ ಪಿಎಸ್‌ಐ ಆಗಿ ಸಂತೋಷ್ ಬಾಗೋಜಿ ಅಧಿಕಾರ ಸ್ವೀಕಾರ

ಹೊಸನಗರ ಪಿಎಸ್‌ಐ ಶಂಕರ್ ಗೌಡ ಪಾಟೀಲ್ ವರ್ಗಾವಣೆ; ನೂತನ ಪಿಎಸ್‌ಐ ಆಗಿ ಸಂತೋಷ್ ಬಾಗೋಜಿ ಅಧಿಕಾರ ಸ್ವೀಕಾರ Hosanagara PSI…

6 hours ago

ದೇವಸ್ಥಾನಕ್ಕೆ ತೆರಳಿದ್ದ ಪೋಷಕರು ವಾಪಸ್ ಬರುವಷ್ಟರಲ್ಲಿ ಸಂಭವಿಸಿತ್ತು ದುರಂತ – 9ನೇ ತರಗತಿ ವಿದ್ಯಾರ್ಥಿನಿ ಸಾವು

ದೇವಸ್ಥಾನಕ್ಕೆ ತೆರಳಿದ್ದ ಪೋಷಕರು ವಾಪಸ್ ಬರುವಷ್ಟರಲ್ಲಿ ಸಂಭವಿಸಿತ್ತು ದುರಂತ - 9ನೇ ತರಗತಿ ವಿದ್ಯಾರ್ಥಿನಿ ಸಾವು A tragic incident…

7 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿಜೆ ನಿಯಮ ಉಲ್ಲಂಘನೆ; ಶಿವಮೊಗ್ಗದಲ್ಲಿ ಒಟ್ಟು 5 ಪ್ರಕರಣ ದಾಖಲು

ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿಜೆ ನಿಯಮ ಉಲ್ಲಂಘನೆ; ಶಿವಮೊಗ್ಗದಲ್ಲಿ ಒಟ್ಟು 5 ಪ್ರಕರಣ ದಾಖಲು Shivamogga police have registered…

8 hours ago