ರಿಪ್ಪನ್ ಪೇಟೆ : ಇಲ್ಲಿಯ ಗೌಡಸಾರಸ್ವತ ಕಲ್ಯಾಣ ಮಂದಿರದಲ್ಲಿ ಮಂಗಳವಾರದಂದು ಗೌಡ ಸಾರಸ್ವತ ಸಮಾಜ ಬಾಂಧವರು ಸಭೆ ಸೇರಿ ಸೋಮವಾರ ಹರಿಪಾದ ಸೇರಿದ ಶ್ರೀಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ಒಡೆರ್ ಸ್ವಾಮೀಜಿಯವರ ಪುಣ್ಯಸ್ಮರಣ ಕಾರ್ಯಕ್ರಮ ನಡೆಸಿದರು.
ಸಭೆಯಲ್ಲಿ ಮಾತನಾಡಿದ ಸಮಾಜದ ಅಧ್ಯಕ್ಷ ಮಂಜುನಾಥ ಕಾಮತ್ ರಿಪ್ಪನ್ ಪೇಟೆ ಗೌಡ ಸಾರಸ್ವತ ಸಮಾಜ ಸ್ಥಾಪನೆಗೆ ಪೂಜ್ಯರು ಕಾರಣರಾಗಿದ್ದನ್ನು ಸ್ಮರಿಸಿದರು. ಪೂಜ್ಯರ ಮಠಕ್ಕೂ ರಿಪ್ಪನ್ ಪೇಟೆ ಗೌಡ ಸಾರಸ್ವತ ಸಮಾಜಕ್ಕೂ ಅನೇಕ ಕಾಲದಿಂದಲೂ ಇರುವ ಸಂಬಂಧವನ್ನು ಸ್ಮರಿಸಿದರು.
ಗುರುಪರಂಪರೆ, ಆಚಾರ- ವಿಚಾರ, ಧರ್ಮನಿಷ್ಠೆ ಬಗ್ಗೆ ಪೂಜ್ಯರ ಬದ್ಧತೆ ಬಗ್ಗೆ ಆರ್ ಉಮೇಶ್ ಅವರು ಮಾತನಾಡಿದರು.
ಸಭೆಯಲ್ಲಿ ಗಣೇಶ್ ಕಾಮತ್, ಡಿ.ನರಸಿಂಹ ಕಾಮತ್, ರಮೇಶ್ ಶಾನುಭಾಗ್, ಹರೀಶ್ ಸರಾಫ್, ಹರೀಶ್ ಪ್ರಭು, ರಾಮದಾಸ್ ನಾಯಕ್, ಸುಧೀಂದ್ರಪ್ರಭು, ಸತೀಶ್ ಕಿಣಿ, ಸತೀಶ್ ಹೆಗಡೆ. ರಾಜೇಶ್ ಪ್ರಭು. ಗಿರೀಶ್ ಪ್ರಭು ಮುಂತಾದವರು ಭಾಗವಹಿಸಿ ಗುರುವರ್ಯರಿಗೆ ಅಂತಿಮ ಭಕ್ತಿಪೂರ್ವಕ ಪ್ರಣಾಮವನ್ನು ಸಲ್ಲಿಸಿದರು.
ವರದಿ : ಸಬಾಸ್ಟಿನ್ ಮ್ಯಾಥ್ಯೂಸ್
ಪೋಸ್ಟ್ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್