ರಿಪ್ಪನ್ ಪೇಟೆ: ಪಟ್ಟಣದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಸಾಗರ ರಸ್ತೆಯ ಕಾಲೇಜು ಬಳಿ ಮಳೆ ನೀರು ರಸ್ತೆಯ ಇಕ್ಕೆಲದ ಚರಂಡಿಗಳಲ್ಲಿ ಸರಾಗವಾಗಿ ಹರಿಯದೆ, ರಸ್ತೆಯ ತುಂಬ ಹೊಂಡದಂತೆ ತುಂಬಿಕೊಂಡು ಸಾರ್ವಜನಿಕರು, ವಿದ್ಯಾರ್ಥಿ ಗಳಿಗೆ ತುಂಬಾ ತೊಂದರೆಯಾಗುತ್ತಿತ್ತು.
ಗ್ರಾಮ ಪಂಚಾಯತ್ ಸದಸ್ಯರಾದ ಸುಂದರೇಶ್ ರವರು ಸ್ಥಳಕ್ಕೆ ಭೇಟಿ ನೀಡಿ ಸಾಗರ ರಸ್ತೆಯ ಕಾಲೇಜ್ ಬಳಿ ಚರಂಡಿ ನೀರು ರಸ್ತೆಗೆ ಹರಿಯುತಿರುವುದರಿಂದ ಕಾಲೇಜು ವಿದ್ಯಾರ್ಥಿಗಳಿಗೆ ಬಹಳ ತೊಂದರೆ ಯಾಗುತ್ತಿದೆ ಇದರ ಬಗ್ಗೆ ಪಿಡಬ್ಲ್ಯೂಡಿ ಅಧಿಕಾರಿಗಳಿಗೆ ಚರಂಡಿಯ ಅವೈಜ್ಞಾನಿಕ ಕಾಮಗಾರಿಗಳ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದು, ಮನವಿ ಪತ್ರ ಕೂಡ ಕಳೆದ ವರ್ಷ ನೀಡಿದ್ದರೂ ಯಾವುದೇ ಸ್ಪಂದನೆ ಇಲ್ಲ ಹಾಗಾಗಿ ಚರಂಡಿ ವ್ಯವಸ್ಥೆಯ ಬಗ್ಗೆ ತುರ್ತು ಕ್ರಮ ಕೈಗೊಳ್ಳದೆ ಇದ್ದರೆ ಸಾಗರ- ರಿಪ್ಪನ್ ಪೇಟೆ ರಸ್ತೆಯನ್ನು ತಡೆದು ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಹೇಳಿ ಸಂಬಂಧಪಟ್ಟ ಇಲಾಖೆಗೆ ಕೂಡಲೇ ಕರೆ ಮಾಡಿ ಎಚ್ಚರಿಸಿದ್ದರು.
°ಈ ಸುದ್ದಿಯನ್ನು ಪೋಸ್ಟ್ ಮ್ಯಾನ್ ನ್ಯೂಸ್ ವರದಿ ಮಾಡಿತ್ತು.°
ಇದರಿಂದ ಪಿಡಬ್ಲ್ಯೂಡಿ ಹಿರಿಯ ಅಧಿಕಾರಿಗಳು ಎಚ್ಛೆತ್ತುಕೊಂಡು ಸಾಗರ ರಸ್ತೆಯ ಚರಂಡಿಯ ಕಾಮಗಾರಿಯನ್ನು ಕೈಗೆತ್ತಿಗೊಂಡು ಕೂಡಲೇ ಸಮಸ್ಯೆಗೆ ಸ್ಪಂದಿಸಿದ್ದಾರೆ.
ಜನಪ್ರತಿನಿಧಿಗಳು ತಮ್ಮ ಜವಾಬ್ದಾರಿ ಮತ್ತು ಕೆಲಸ ದ ಮೇಲೆ ಇಚ್ಚಾ ಶಕ್ತಿ ತೋರಿಸಿದರೆ ಯಾವ ಕೆಲಸವೂ ಅಸಾಧ್ಯವಿಲ್ಲ ಎಂದು ರಿಪ್ಪನ್ ಪೇಟೆ ಗ್ರಾಪಂ ಸದಸ್ಯ ಸುಂದರೇಶ್ ರವರು ತೋರಿಸಿಕೊಟ್ಟಿದ್ದಾರೆ.ಗ್ರಾಪಂ ಸದಸ್ಯ ಸುಂದರೇಶ್ ರವರ ಕಾರ್ಯವೈಖರಿಯನ್ನು ಸಾರ್ವಜನಿಕರು ಪ್ರಶಂಸಿದ್ದಾರೆ.
ವರದಿ: ರಾಮನಾಥ್ ರಿಪ್ಪನ್ ಪೇಟೆ
ಪೋಸ್ಟ್ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..