ಸೊರಬ: ಇಲ್ಲಿನ ಚಂದ್ರಗುತ್ತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಆಶ್ರಯ ಯೋಜನೆಯಡಿಯಲ್ಲಿ ಎರಡು ಬಿಲ್ ಪಡೆದಿರುವ ಮನೆಯಲ್ಲಿ, ಅಬಕಾರಿ ಇಲಾಖೆಯ ಅಧಿಕೃತವಾದ ಲಿಕ್ಕರ್ ಶಾಪನ್ನು ಗ್ರಾಮ ಪಂಚಾಯ್ತಿಯ NOC ಪಡೆಯದೇ,ಯಾವುದೇ ಮಾಹಿತಿಯನ್ನು ನೀಡದೇ, ಪ್ರಾರಂಭ ಮಾಡಲಾಗಿದೆ.
ಈ ಬಗ್ಗೆ ಸಾರ್ವಜನಿಕರ ದೂರಿನನ್ವಯ ಸರ್ಕಾರದ ಆದೇಶದ ಪ್ರಕಾರ, ಗ್ರಾಮ ಪಂಚಾಯತ್ ಪಂಚಾಯತ್ ACT ಪ್ರಕಾರ ಶಾಪ್ ನ್ನು ಮುಚ್ಚಿಸಲು ಹಾಗೂ ಬಡವರಿಗೆ ನೀಡಿದ ಮನೆಯನ್ನು ವಾಣಿಜ್ಯ ಮಳಿಗೆಗೆ ಬಳಸಿದ ಹಿನ್ನಲೆಯಲ್ಲಿ ಮನೆ ಫಲಾನುಭವಿಯ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ಶಾಸಕರಾದ ಕುಮಾರ್ ಬಂಗಾರಪ್ಪ ರವರು ಖಡಕ್ ಸಂದೇಶ ನೀಡಿದರು.
ಫ಼ೇಸ್ಬುಕ್ ನಲ್ಲಿ ವೀಡಿಯೋ ವೀಕ್ಷಿಸಲು ಈ ಕೆಳಗಿನ ಲಿಂಕ್ ಬಳಸಿ:
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್