w
Headlines
Home » ವೀಕೆಂಡ್ ಕರ್ಫ಼್ಯೂ ಇರಲ್ಲ:ಸಭೆ ಸಮಾರಂಭಗಳಿಗೆ ಅವಕಾಶ ಇಲ್ಲ: ಅನ್ ಲಾಕ್ 3.0 ಘೋಷಣೆ

ವೀಕೆಂಡ್ ಕರ್ಫ಼್ಯೂ ಇರಲ್ಲ:ಸಭೆ ಸಮಾರಂಭಗಳಿಗೆ ಅವಕಾಶ ಇಲ್ಲ: ಅನ್ ಲಾಕ್ 3.0 ಘೋಷಣೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೊರೊನಾ ಎರಡನೇ ಅಲೆಯ ಬಳಿಕ ಮೂರನೇ ಹಂತದ ಅನ್​ಲಾಕ್​​ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅನ್‌ಲಾಕ್‌ 3.O ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. ಜುಲೈ 5ರ ಮುಂಜಾನೆ 5 ಗಂಟೆಯಿಂದ ಅನ್​ಲಾಕ್ 3.O ಅನ್ವಯವಾಗಲಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಈ ಅನ್​ಲಾಕ್ ಅನ್ವಯವಾಗಲಿದೆ ಎಂದಿದ್ದಾರೆ. ಮಂಗಳೂರು, ಮೈಸೂರು ಸಹಿತ ಅನ್​ಲಾಕ್ 3.0 ಅನ್ವಯವಾಗಲಿದೆ. ಕೊವಿಡ್ ಉಸ್ತುವಾರಿ ಸಚಿವರ ಜೊತೆ ಮುಖ್ಯಮಂತ್ರಿ ಸಭೆ ನಡೆಸಿದ್ದಾರೆ. ಕೊವಿಡ್ ಉಸ್ತುವಾರಿ ಸಚಿವರು, ಅಧಿಕಾರಿಗಳ ಜತೆ ಸಿಎಂ ಅಧಿಕೃತ ‌ನಿವಾಸ ಕಾವೇರಿಯಲ್ಲಿ ಸಭೆ ನಡೆಸಿದ್ದಾರೆ. 3ನೇ ಹಂತದ ಅನ್​ಲಾಕ್ ಪ್ರಕ್ರಿಯೆ ಬಗ್ಗೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಉಪಮುಖ್ಯಮಂತ್ರಿ ಹಾಗೂ ಕೊವಿಡ್ ಟಾಸ್ಕ್​ಫೋರ್ಸ್ ಸಮಿತಿ ಅಧ್ಯಕ್ಷ ಅಶ್ವತ್ಥ್ ನಾರಾಯಣ, ಸಚಿವರಾದ ಬಸವರಾಜ ಬೊಮ್ಮಾಯಿ‌, ಡಾ.ಕೆ.ಸುಧಾಕರ್‌, ಜಗದೀಶ್ ಶೆಟ್ಟರ್‌, ಅರವಿಂದ ಲಿಂಬಾವಳಿ, ಸಿ..ಎಸ್‌. ರವಿಕುಮಾರ್‌ ಸಭೆಯಲ್ಲಿ ಭಾಗಿಯಾಗಿದ್ದಾರೆ. ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್‌, ಆರೋಗ್ಯ ಇಲಾಖೆ, ಕಂದಾಯ ಇಲಾಖೆ ಅಧಿಕಾರಿಗಳು ಕೂಡ ಭಾಗಿಯಾಗಿದ್ದಾರೆ.

ಯಾವುದಕ್ಕೆಲ್ಲಾ ಅವಕಾಶ? 
ಸರ್ಕಾರಿ, ಖಾಸಗಿ ಕಚೇರಿಗಳಲ್ಲಿ ಶೇಕಡಾ 100ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ. ಎಲ್ಲಾ ಮಾಲ್‌ಗಳು ಓಪನ್ ಮಾಡಲು ಅವಕಾಶ ನೀಡಲಾಗಿದೆ. ರಾಜ್ಯದಲ್ಲಿ ದೇವಾಲಯಗಳನ್ನು ತೆರೆಯುವ ಬಗ್ಗೆ ಕೆಲವು ನಿರ್ಬಂಧಗಳೊಂದಿಗೆ ಅವಕಾಶ ನೀಡಲಾಗಿದೆ. ಭಕ್ತರಿಗೆ ದೇವಾಲಯ ಪ್ರವೇಶ, ದೇವರ ದರ್ಶನ ಮತ್ತು ಆರತಿ ಸೇವೆಗಷ್ಟೇ ಅವಕಾಶ ಮಾಡಿಕೊಡಲಾಗಿದೆ. ಬಾರ್​ಗಳು ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗಿದೆ.

ರಾತ್ರಿ ಕರ್ಫ್ಯೂ ಇದೆ, ವೀಕೆಂಡ್ ಕರ್ಫ್ಯೂ ಇಲ್ಲ 

ರಾಜ್ಯಾದ್ಯಂತ ಪ್ರತಿದಿನ ಸಂಜೆ 9ರಿಂದ ಬೆಳಗ್ಗೆ 5ರವರೆಗೆ ಕರ್ಫ್ಯೂ ಹಾಗೂ ರಾಜ್ಯಾದ್ಯಂತ ವೀಕೆಂಡ್‌ ಕರ್ಫ್ಯೂ ಜಾರಿಯಲ್ಲಿ ಇರುವುದಿಲ್ಲ. ಧಾರ್ಮಿಕ, ರಾಜಕೀಯ ಇತರ ಸಮಾರಂಭಗಳಿಗೆ ಅವಕಾಶ ಇರುವುದಿಲ್ಲ. ಪಬ್​ಗಳು ಕಾರ್ಯನಿರ್ವಹಿಸಲು ಅವಕಾಶ ಇಲ್ಲ ಹಾಗೂ ಸಿನಿಮಾ ಹಾಲ್​ಗಳು ಕೂಡ ತೆರೆಯಲು ಅವಕಾಶ ನೀಡಲಾಗಿಲ್ಲ.

ಕೊರೊನಾ ಎರಡನೇ ಅಲೆ ಗಣನೀಯ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಇಳಿಕೆಯಾಗಿದೆ. ಪಾಸಿಟಿವಿಟಿ ದರ ಕೂಡ ಕಡಿಮೆ ಆಗಿದೆ. ಕೊವಿಡ್-19 ಎರಡನೇ ಅಲೆ ಆತಂಕ ಕಡಿಮೆಯಾಗುತ್ತಿರುವಂತೆ ಲಾಕ್​ಡೌನ್ ನಿಯಮಾವಳಿಗಳನ್ನು ಹಂತಹಂತವಾಗಿ ಸಡಿಲಿಕೆ ಮಾಡಲಾಗುತ್ತಿದೆ. ಜೂನ್ 14ರಂದು ಮೊದಲ ಅನ್​ಲಾಕ್ ಘೋಷಿಸಲಾಗಿತ್ತು. ಆ ಬಳಿಕ, ಜೂನ್ 21ರಂದು ಮತ್ತೊಂದು ಹಂತದ ಲಾಕ್​ಡೌನ್ ಸಡಿಲಿಕೆ ಮಾಡಲಾಗಿತ್ತು. ಇಂದು (ಜುಲೈ 3) ಮೂರನೇ ಹಂತದ ಅನ್​ಲಾಕ್ ಘೋಷಿಸಲಾಗಿದೆ. ಜುಲೈ 5 ಅಂದರೆ ಸೋಮವಾರದಿಂದ ಈ ನಿಯಮಾವಳಿಗಳು ಜಾರಿಗೆ ಬರಲಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.