Categories: Blog

ಶಾಸಕ ಹರತಾಳು ಹಾಲಪ್ಪರವರಿಗೆ ಮಂತ್ರಿ ಪದವಿ ನೀಡುವಂತೆ ಒತ್ತಾಯ:

ರಿಪ್ಪನ್ ಪೇಟೆ: ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಎಂಎಸ್ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪರವರಿಗೆ ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿರವರ ಸಂಪುಟದಲ್ಲಿ ಮಂತ್ರಿ ಪದವಿ ನೀಡಬೇಕೆಂದು ಕೆರೆಹಳ್ಳಿ ಹೋಬಳಿ-ಹುಂಚಾ ಹೋಬಳಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್ ಒತ್ತಾಯಿಸಿದ್ದಾರೆ.


ಪಟ್ಟಣದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಶಾಸಕರಾದ ಹರತಾಳು ಹಾಲಪ್ಪರವರು ಸಕ್ರೀಯ ರಾಜಕಾರಣಿಗಳಾಗಿದ್ದು ಹಾಗೇಯೆ ಜಿಲ್ಲೆಯಲ್ಲಿ ಬಿಜೆಪಿ ಪಕ್ಷದ ಬೆಳವಣಿಗೆಗೆ ಹಗಲಿರುಳು ಶ್ರಮಿಸುತ್ತಿದ್ದು ಹಾಗೆಯೇ ಈ ಹಿಂದೆ ಬಿ ಎಸ್ ಯಡಿಯೂರಪ್ಪ ರವರ ಮಂತ್ರಿ ಮಂಡಲದಲ್ಲಿ ಮಂತ್ರಿಗಳಾಗಿ ಕಾರ್ಯನಿರ್ವಹಿಸಿದ ಸಂಧರ್ಭದಲ್ಲಿ ಅನೇಕ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದರು ಹಾಗೇಯೆ ಶಿವಮೊಗ್ಗ ಜಿಲ್ಲೆಯ ಹೊಸನಗರ ಸಾಗರ ಸೊರಬ ಕ್ಷೇತ್ರದಲ್ಲಿ ಶಾಸಕರಾಗಿದ್ದ ಅವಧಿಯಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಗೊಳಿಸುವುದರ ಮೂಲಕ ಜನರ ಪ್ರಶಂಸೆಯ ಜೊತೆಗೆ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಕಾರಣಕರ್ತರಾಗಿದ್ದರು.

ಈ ಬಾರಿಯ ನೂತನ ಮಂತ್ರಿ ಮಂಡಲದಲ್ಲಿ ಹರತಾಳು ಹಾಲಪ್ಪರವರಿಗೆ ಮಂತ್ರಿ ಪದವಿ ನೀಡಿದರೆ ರಾಜ್ಯದ ಹಾಗೂ ಜಿಲ್ಲೆಯ ಅಭಿವೃದ್ಧಿಗೆ ಸಹಕಾರಿಯಾಗುವುದು ಎಂದರು.
ಸುದ್ದಿ ಗೋಷ್ಟಿಯಲ್ಲಿ ಬಿಜೆಪಿ ಮುಖಂಡರುಗಳಾದ ಸುರೇಶ್ ಸಿಂಗ್,ಸತೀಶ್ ಎನ್,ಗ್ರಾಪಂ ಸದಸ್ಯರಾದ ಸುಧೀಂದ್ರ ಪೂಜಾರಿ ಇನ್ನಿತರರು ಇದ್ದರು.




ವರದಿ : ಸಬಾಸ್ಟಿನ್ ಮ್ಯಾಥ್ಯೂಸ್‌ ರಿಪ್ಪನ್ ಪೇಟೆ





ಪೋಸ್ಟ್‌ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..





ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ

ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ Ramesh H.B. has been appointed as the…

1 hour ago

ರಿಪ್ಪನ್‌ಪೇಟೆ, ಹರತಾಳು, ಗರ್ತಿಕೆರೆಯಲ್ಲಿ ರಾಯರ 355ನೇ ಆರಾಧನೆ; ಹರಿದು ಬಂದ ಭಕ್ತ ಸಾಗರ

ರಿಪ್ಪನ್‌ಪೇಟೆ, ಹರತಾಳು, ಗರ್ತಿಕೆರೆಯಲ್ಲಿ ರಾಯರ 355ನೇ ಆರಾಧನೆ; ಹರಿದು ಬಂದ ಭಕ್ತ ಸಾಗರ Thousands of devotees participated in…

2 hours ago

ಹೊಸನಗರ ಪಿಎಸ್‌ಐ ಶಂಕರ್ ಗೌಡ ಪಾಟೀಲ್ ವರ್ಗಾವಣೆ; ನೂತನ ಪಿಎಸ್‌ಐ ಆಗಿ ಸಂತೋಷ್ ಬಾಗೋಜಿ ಅಧಿಕಾರ ಸ್ವೀಕಾರ

ಹೊಸನಗರ ಪಿಎಸ್‌ಐ ಶಂಕರ್ ಗೌಡ ಪಾಟೀಲ್ ವರ್ಗಾವಣೆ; ನೂತನ ಪಿಎಸ್‌ಐ ಆಗಿ ಸಂತೋಷ್ ಬಾಗೋಜಿ ಅಧಿಕಾರ ಸ್ವೀಕಾರ Hosanagara PSI…

4 hours ago

ದೇವಸ್ಥಾನಕ್ಕೆ ತೆರಳಿದ್ದ ಪೋಷಕರು ವಾಪಸ್ ಬರುವಷ್ಟರಲ್ಲಿ ಸಂಭವಿಸಿತ್ತು ದುರಂತ – 9ನೇ ತರಗತಿ ವಿದ್ಯಾರ್ಥಿನಿ ಸಾವು

ದೇವಸ್ಥಾನಕ್ಕೆ ತೆರಳಿದ್ದ ಪೋಷಕರು ವಾಪಸ್ ಬರುವಷ್ಟರಲ್ಲಿ ಸಂಭವಿಸಿತ್ತು ದುರಂತ - 9ನೇ ತರಗತಿ ವಿದ್ಯಾರ್ಥಿನಿ ಸಾವು A tragic incident…

5 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿಜೆ ನಿಯಮ ಉಲ್ಲಂಘನೆ; ಶಿವಮೊಗ್ಗದಲ್ಲಿ ಒಟ್ಟು 5 ಪ್ರಕರಣ ದಾಖಲು

ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿಜೆ ನಿಯಮ ಉಲ್ಲಂಘನೆ; ಶಿವಮೊಗ್ಗದಲ್ಲಿ ಒಟ್ಟು 5 ಪ್ರಕರಣ ದಾಖಲು Shivamogga police have registered…

5 hours ago

ಶಿವಮೊಗ್ಗದಲ್ಲಿ ತಡರಾತ್ರಿ ಕಿಡಿಗೇಡಿಗಳ ಕೃತ್ಯ: ನಿಲ್ಲಿಸಿದ್ದ ಎರಡು ಬೈಕ್‌ಗಳಿಗೆ ಬೆಂಕಿ

ಶಿವಮೊಗ್ಗದಲ್ಲಿ ತಡರಾತ್ರಿ ಕಿಡಿಗೇಡಿಗಳ ಕೃತ್ಯ: ನಿಲ್ಲಿಸಿದ್ದ ಎರಡು ಬೈಕ್‌ಗಳಿಗೆ ಬೆಂಕಿ Miscreants allegedly set two parked bikes on…

5 hours ago