Headlines

ಶಿಕಾರಿಪುರದ ಅಂಜನಾಪುರ ಜಲಾಶಯಕ್ಕೆ ಸಂಸದ ಬಿ ವೈ ರಾಘವೇಂದ್ರ ರವರಿಂದ ಬಾಗಿನ ಅರ್ಪಣೆ:

ಶಿಕಾರಿಪುರ: ಇಲ್ಲಿನ ಅಂಜನಾಪುರ ಜಲಾಶಯಕ್ಕೆ ಸಂಸದರಾದ ಶ್ರೀ ಬಿ ವೈ ರಾಘವೇಂದ್ರರವರು ಭಾಗಿನ ಸಮರ್ಪಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ವರುಣ ದೇವ ಪ್ರತಿ ವರ್ಷ ಇದೇ ರೀತಿ ಕೃಪೆ ತೋರಬೇಕು. ಇದರಿಂದ ಮಳೆ-ಬೆಳೆಯಾಗಿ ರೈತ ಸಂತಸದಿಂದ ಇರುತ್ತಾನೆ. ರೈತರ ಅನುಕೂಲಕ್ಕೆ ಸಾಕಷ್ಟು ಯೋಜನೆಯನ್ನು ಮಾಡಿದ್ದೇವೆ, ಮುಂದೆ ಹಣಕಾಸಿನ ಸ್ಥಿತಿಗತಿ ನೋಡಿಕೊಂಡು ಮತ್ತಷ್ಟು ಮಾಡುತ್ತೇವೆ ಎಂದರು.

ಈ ಸಂಧರ್ಭದಲ್ಲಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಶ್ರೀ ಗುರುಮೂರ್ತಿ ರವರು,ಶ್ರೀಮತಿ ತೇಜಸ್ವಿನಿ ರಾಘವೇಂದ್ರ ರವರು,ಸೇರಿದಂತೆ ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


ವರದಿ:ರಾಮನಾಥ್

ಪೋಸ್ಟ್ ಮ್ಯಾನ್ ನ್ಯೂಸ್ ನ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹರಡದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.

Leave a Reply

Your email address will not be published. Required fields are marked *