ಶಿಕಾರಿಪುರ: ಇಲ್ಲಿನ ಅಂಜನಾಪುರ ಜಲಾಶಯಕ್ಕೆ ಸಂಸದರಾದ ಶ್ರೀ ಬಿ ವೈ ರಾಘವೇಂದ್ರರವರು ಭಾಗಿನ ಸಮರ್ಪಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ವರುಣ ದೇವ ಪ್ರತಿ ವರ್ಷ ಇದೇ ರೀತಿ ಕೃಪೆ ತೋರಬೇಕು. ಇದರಿಂದ ಮಳೆ-ಬೆಳೆಯಾಗಿ ರೈತ ಸಂತಸದಿಂದ ಇರುತ್ತಾನೆ. ರೈತರ ಅನುಕೂಲಕ್ಕೆ ಸಾಕಷ್ಟು ಯೋಜನೆಯನ್ನು ಮಾಡಿದ್ದೇವೆ, ಮುಂದೆ ಹಣಕಾಸಿನ ಸ್ಥಿತಿಗತಿ ನೋಡಿಕೊಂಡು ಮತ್ತಷ್ಟು ಮಾಡುತ್ತೇವೆ ಎಂದರು.
ಈ ಸಂಧರ್ಭದಲ್ಲಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಶ್ರೀ ಗುರುಮೂರ್ತಿ ರವರು,ಶ್ರೀಮತಿ ತೇಜಸ್ವಿನಿ ರಾಘವೇಂದ್ರ ರವರು,ಸೇರಿದಂತೆ ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ವರದಿ:ರಾಮನಾಥ್
ಪೋಸ್ಟ್ ಮ್ಯಾನ್ ನ್ಯೂಸ್ ನ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್ಡೌನ್ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹರಡದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್