w
Headlines
Home » ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೆಗೌಡರ ಹೆಸರನ್ನು ಇಡಲು ಆಗ್ರಹ:

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೆಗೌಡರ ಹೆಸರನ್ನು ಇಡಲು ಆಗ್ರಹ:

ರಿಪ್ಪನ್ ಪೇಟೆ: ಶಿವಮೊಗ್ಗದಲ್ಲಿ ಉದ್ಘಾಟನೆಗೆ ಸಿದ್ದವಾಗಿರುವ ನೂತನ ವಿಮಾನ ನಿಲ್ದಾಣಕ್ಕೆ ಕರ್ನಾಟಕದಿಂದ ಆಯ್ಕೆಯಾಗಿ ದೇಶದ ಪ್ರಧಾನಿಯಾಗಿ ರಾಜ್ಯದ ಕೀರ್ತಿಯನ್ನು ಇಡೀ ದೇಶಕ್ಕೆ ಪರಿಚಯಿಸಿದ ಮಾಜಿ ಪ್ರಧಾನಿ ಹೆಚ್ ಡಿ ದೇವೆಗೌಡರ ಹೆಸರನ್ನು  ಇಡಬೇಕೆಂದು ಮಾನ್ಯ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಶಿವಮೊಗ್ಗ ಸಂಸದರಾದ ಬಿ ವೈ ರಾಘವೇಂದ್ರ ರವರಿಗೆ ರಾಜ್ಯ ಜೆಡಿಎಸ್ ಮಾಜಿ ಪ್ರಧಾನಕಾರ್ಯದರ್ಶಿಗಳಾದ ಅರ್ ಎ ಚಾಬುಸಾಬ್ ಒತ್ತಾಯಿಸಿದ್ದಾರೆ.

.                              ಅರ್ ಎ ಚಾಬುಸಾಬ್

                 ಮಾಜಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಜೆಡಿಎಸ್

  ಪಟ್ಟಣದಲ್ಲಿ ಸುದ್ದಿಗೋಷ್ಟೀಯನ್ನುಉದ್ದೇಶಿಸಿ ಮಾತನಾಡಿದ ಅವರು ಹೆಚ್ ಡಿ ದೇವೆಗೌಡರು ಪ್ರಧಾನಿಯಾಗಿ ನಡೆಸಿದ ಹನ್ನೊಂದು ತಿಂಗಳ ಆಡಳಿತದಲ್ಲಿ ಕರ್ನಾಟಕ ರಾಜ್ಯಕ್ಕೆ ಹಾಗೂ ಅದರಲ್ಲೂ ಶಿವಮೊಗ್ಗ ಜಿಲ್ಲೆ ಗೆ ಅಪಾರ ಕೊಡುಗೆ ಇದೆ. ಪಕ್ಷಾತೀತವಾಗಿ ಇಂದಿಗೂ ಶಿವಮೊಗ್ಗದ ಜನತೆ ದೇವೆಗೌಡರನ್ನು ಸ್ಮರಿಸುತ್ತಿದ್ದಾರೆ.

ಅವರಿಗೆ ಸಲ್ಲ ಬೇಕಾದ ಗೌರವ ಅವರ ಜೀವಿತಾವಧಿಯಲ್ಲಿಯೇ ತಲುಪಿದರೆ ಉತ್ತಮ ಆದ್ದರಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ದೇವೆಗೌಡರ ಹೆಸರಿಟ್ಟು ಅವರಿಗೆ ಗೌರವ ಸಲ್ಲಿಸಬೇಕಾಗಿರುವುದು ಶಿವಮೊಗ್ಗ ಜನತೆಯ ಕರ್ತವ್ಯ ಎಂದರು.

 ಈ ನಿಟ್ಟಿನಲ್ಲಿ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಸಂಸದರು ದೇವೆಗೌಡ ಹೆಸರನ್ನು ಶೀಘ್ರವಾಗಿ ಘೋಷಿಸುವಂತೆ ಒತ್ತಾಯಿಸಿದರು.
ಸುದ್ದಿ ಗೋಷ್ಟಿಯಲ್ಲಿ ಜಿಲ್ಲಾ ಜೆಡಿಎಸ್ ಮುಖಂಡರಾದ ಜಿ ಎಸ್ ವರದರಾಜ್ ಉಪಸ್ತಿತರಿದ್ದರು.



ವರದಿ:ರಾಮನಾಥ್

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.