ರಿಪ್ಪನ್ ಪೇಟೆ: ಶಿವಮೊಗ್ಗದಲ್ಲಿ ಉದ್ಘಾಟನೆಗೆ ಸಿದ್ದವಾಗಿರುವ ನೂತನ ವಿಮಾನ ನಿಲ್ದಾಣಕ್ಕೆ ಕರ್ನಾಟಕದಿಂದ ಆಯ್ಕೆಯಾಗಿ ದೇಶದ ಪ್ರಧಾನಿಯಾಗಿ ರಾಜ್ಯದ ಕೀರ್ತಿಯನ್ನು ಇಡೀ ದೇಶಕ್ಕೆ ಪರಿಚಯಿಸಿದ ಮಾಜಿ ಪ್ರಧಾನಿ ಹೆಚ್ ಡಿ ದೇವೆಗೌಡರ ಹೆಸರನ್ನು ಇಡಬೇಕೆಂದು ಮಾನ್ಯ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಶಿವಮೊಗ್ಗ ಸಂಸದರಾದ ಬಿ ವೈ ರಾಘವೇಂದ್ರ ರವರಿಗೆ ರಾಜ್ಯ ಜೆಡಿಎಸ್ ಮಾಜಿ ಪ್ರಧಾನಕಾರ್ಯದರ್ಶಿಗಳಾದ ಅರ್ ಎ ಚಾಬುಸಾಬ್ ಒತ್ತಾಯಿಸಿದ್ದಾರೆ.
. ಅರ್ ಎ ಚಾಬುಸಾಬ್
ಮಾಜಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಜೆಡಿಎಸ್
ಪಟ್ಟಣದಲ್ಲಿ ಸುದ್ದಿಗೋಷ್ಟೀಯನ್ನುಉದ್ದೇಶಿಸಿ ಮಾತನಾಡಿದ ಅವರು ಹೆಚ್ ಡಿ ದೇವೆಗೌಡರು ಪ್ರಧಾನಿಯಾಗಿ ನಡೆಸಿದ ಹನ್ನೊಂದು ತಿಂಗಳ ಆಡಳಿತದಲ್ಲಿ ಕರ್ನಾಟಕ ರಾಜ್ಯಕ್ಕೆ ಹಾಗೂ ಅದರಲ್ಲೂ ಶಿವಮೊಗ್ಗ ಜಿಲ್ಲೆ ಗೆ ಅಪಾರ ಕೊಡುಗೆ ಇದೆ. ಪಕ್ಷಾತೀತವಾಗಿ ಇಂದಿಗೂ ಶಿವಮೊಗ್ಗದ ಜನತೆ ದೇವೆಗೌಡರನ್ನು ಸ್ಮರಿಸುತ್ತಿದ್ದಾರೆ.
ಅವರಿಗೆ ಸಲ್ಲ ಬೇಕಾದ ಗೌರವ ಅವರ ಜೀವಿತಾವಧಿಯಲ್ಲಿಯೇ ತಲುಪಿದರೆ ಉತ್ತಮ ಆದ್ದರಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ದೇವೆಗೌಡರ ಹೆಸರಿಟ್ಟು ಅವರಿಗೆ ಗೌರವ ಸಲ್ಲಿಸಬೇಕಾಗಿರುವುದು ಶಿವಮೊಗ್ಗ ಜನತೆಯ ಕರ್ತವ್ಯ ಎಂದರು.
ಈ ನಿಟ್ಟಿನಲ್ಲಿ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಸಂಸದರು ದೇವೆಗೌಡ ಹೆಸರನ್ನು ಶೀಘ್ರವಾಗಿ ಘೋಷಿಸುವಂತೆ ಒತ್ತಾಯಿಸಿದರು.
ಸುದ್ದಿ ಗೋಷ್ಟಿಯಲ್ಲಿ ಜಿಲ್ಲಾ ಜೆಡಿಎಸ್ ಮುಖಂಡರಾದ ಜಿ ಎಸ್ ವರದರಾಜ್ ಉಪಸ್ತಿತರಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್