ಸಾಗರ: ಇಲ್ಲಿನ ಸಿಂಗಂದೂರು ರಸ್ತೆಯ ಸಂಜಯ್ ಮೆಮೋರಿಯಲ್ ಕಾಲೇಜು ಬಳಿ ಆದಿಶಕ್ತಿ ನಗರದ ವ್ಯಕ್ತಿಯೊಬ್ಬರು ನಡೆದುಕೊಂಡು ಹೋಗುತ್ತಿರುವಾಗ ಅಪರಿಚಿತ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಜೆ 7.30 ರ ಸುಮಾರಿಗೆ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಆದಿಶಕ್ತಿ ನಗರದ ಬಾಬು(47) ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳಕ್ಕೆ ಸಾಗರ ಪೇಟೆ ಪೊಲೀಸ್ ಇನ್ಸ್ ಪೆಕ್ಟರ್ ಅಶೋಕ್ ಕುಮಾರ್ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಗಿರೀಶ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಮೃತ ಶರೀರವನ್ನು ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ಖಾಸಗಿ ಆಂಬುಲೆನ್ಸ್ ಮೂಲಕ ಸಾಗಿಸಲಾಗಿದೆ.
ವರದಿ: ರಾಮನಾಥ್