Categories: Blog

ಸೇವಾ ನಿವೃತ್ತಿ ಹೊಂದಿದ ಆರ್. ಉಮೇಶ್ ರವರ ಸೇವೆ ಎಲ್ಲರಿಗೂ ಪ್ರೇರಣೆ : ಜೇನಿ ಗ್ರಾ.ಪಂ ಅಧ್ಯಕ್ಷೆ ಶಾರದಾ

ರಿಪ್ಪನ್ ಪೇಟೆ : ಇಲ್ಲಿನ ಚಿಕ್ಕಜೇನಿ ಪ್ರೌಢಶಾಲೆ ಮುಖ್ಯಶಿಕ್ಷಕರಾಗಿ ಉತ್ತಮ ಕರ್ತವ್ಯ ನಿರ್ವಹಿಸಿ, ವಯೋನಿವೃತ್ತಿ  ಹೊಂದಿದ
ಆರ್ ಉಮೇಶ ರವರ ಸೇವೆ ಪ್ರಶಂಸನೀಯ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ  ಶಾರದಾ ರವರು ಹೇಳಿದರು.

ಅವರು ಶುಕ್ರವಾರ ಇಲ್ಲಿಗೆ ಸಮೀಪದ ಚಿಕ್ಕಜೇನಿ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಸೇವೆಸಲ್ಲಿಸಿ ನಿವೃತ್ತರಾದ ಆರ್. ಉಮೇಶ್ ರವರಿಗೆ ಸನ್ಮಾನಿಸಿ ನೀಡಿದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಾ ಹೇಳಿದರು.  ತಾಲ್ಲೂಕಿನಲ್ಲಿಯೇ ಪ್ರೌಢಶಾಲೆಗೆ ಒಳ್ಳೆಯ ಹೆಸರು ತರುವಲ್ಲಿ ಉಮೇಶ್ ಅವರ ಪಾತ್ರ ಮಹತ್ವದ್ದು ಎಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ವೀರಭದ್ರಪ್ಪನವರು ಮಾತನಾಡಿ ಸುಮಾರು ಎಂಟು ವರ್ಷಗಳ ಕಾಲ ಚಿಕ್ಕಜೇನಿ ಪ್ರೌಢಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಅವಿರತವಾಗಿ ಶ್ರಮವಹಿಸಿ ಹಾಗೂ ಶಾಲೆಯ ವಿದ್ಯಾರ್ಥಿಗಳು ಸಾಧನೆಗೈಯುವಲ್ಲಿ ಪ್ರಮುಖ ಪಾತ್ರವಹಿಸಿದ ಹಾಗೂ ಬಹುಮುಖ ಪ್ರತಿಭೆ ಹೊಂದಿರುವ  ಆರ್ .ಉಮೇಶ್ ರವರ ಸಾಧನೆಯಲ್ಲಿ ಬೋಧನಾ ಕ್ರಮ ,ಕರ್ತವ್ಯನಿಷ್ಠೆ,ದಕ್ಷತೆ, ಸಹ ಶಿಕ್ಷಕರ ಜೊತೆ ಪರಸ್ಪರ ಪ್ರೀತಿ-ವಿಶ್ವಾಸದಿಂದ ಕೆಲಸ ಮಾಡಿಸಿಕೊಳ್ಳುವ ಕ್ಷಮತೆ ಅವರಲ್ಲಿ ಕಂಡಿದ್ದೇನೆ ಎಂದು  ಪ್ರಶಂಸಿಸಿದರು.

ಬೀಳ್ಕೊಡುಗೆ ಸಮಾರಂಭದಲ್ಲಿ ಆರ್. ಉಮೇಶ್ ದಂಪತಿ ಗಳನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಪರೀಕ್ಷೆಗೆ ಅಣಿಯಾಗುತ್ತಿರುವ 10ನೇ ತರಗತಿ ಮಕ್ಕಳನ್ನು ಬೀಳ್ಕೊಡುಗೆ ಮಾಡಲಾಯಿತು.

ಸನ್ಮಾನಿತರಾದ ಆರ್. ಉಮೇಶ್ ಮಾತನಾಡಿ ಎಲ್ಲರ ಸಹಕಾರದಿಂದ ಸಾಧನೆ ಮಾಡಲು ಸಾಧ್ಯವಾಯಿತು ಎಂದರು. ಸೇವೆಯಲ್ಲಿ  ಸಹಕಾರ ನೀಡಿದವರಿಗೆ ಕೃತಜ್ಞತೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ  ದೈಹಿಕ ಶಿಕ್ಷಣ ಪರಿವೀಕ್ಷಕರಾದ ಚಂದ್ರಬಾಬು ಮತ್ತು ಬಿ ಆರ್ ಸಿ ಮುಖ್ಯಸ್ಥ ನಾಗರಾಜ್ ಹಾಗೂ  ಗ್ರಾಮ ಪಂಚಾಯತಿ ಸದಸ್ಯರಾದ ವೆಂಕಟಾಚಲ, ಅಣ್ಣಪ್ಪಶೆಟ್ಟಿ, ಶ್ರೀಮತಿ ನಳಿನ ಮತ್ತು ಶಾಲಾಭಿವೃದ್ಧಿ ಸಮಿತಿ ಸದಸ್ಯರುಗಳಾದ ಮೇಘರಾಜ್, ಕೃಷ್ಣಮೂರ್ತಿ, ಲಿಂಗರಾಜ್, ವಿಎಲ್ ಮಧು, ಶ್ರೀಮತಿ ಆಶಾ ನರಸಿಂಹ, ಶ್ರೀಮತಿ ಜಯಶೀಲ, ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ವಿಜಯಕುಮಾರಿ, ಸಹ ಶಿಕ್ಷಕರಾದ ಎನ.ಡಿ.ಹೆಗಡೆ, ಶೇಖರಪ್ಪ ,ವೀರನಗೌಡ, ಶ್ರೀಮತಿ ಸವಿತಾ, ಶ್ರೀಮತಿ ನಿರ್ಮಲ, ಶಿಕ್ಷಕರಾದ ಗುರುಶಾಂತಪ್ಪ, ನಾಗರಾಜ್, ಶ್ರೀಮತಿ ಅನಿತಾ, ಪ್ರಮುಖರಾದ ಗವಟೂರು ಗಣಪತಿ, ಪತ್ರಕರ್ತ ತ.ಮ. ನರಸಿಂಹ ಉಪಸ್ಥಿತರಿದ್ದರು.

ಸಭೆಯ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶ್ರೀಕಾಂತ್ ಐತಾಳ್ ವಹಿಸಿದ್ದರು. ಸರ್ವರನ್ನು ಶೇಖರಪ್ಪ ಸ್ವಾಗತಿಸಿದರು. ಕಾರ್ಯಕ್ರಮವನ್ನು ಎನ.ಡಿ ಹೆಗಡೆ ನಿರೂಪಿಸಿದರು ಕೊನೆಯಲ್ಲಿ ವೀರನಗೌಡ ವಂದಿಸಿದರು.


ವರದಿ: ರಾಮನಾಥ್


ಪೋಸ್ಟ್‌ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

30 ವರ್ಷ 8 ತಿಂಗಳ ಸಾರ್ಥಕ ಸೇವೆಗೆ ವಿರಾಮ: ಬರುವೆ ಶಾಲೆಯ ಶಿಕ್ಷಕಿ ಅಂಬಿಕಾ ಸಿ. ಅವರಿಗೆ ಆತ್ಮೀಯ ಬೀಳ್ಕೊಡುಗೆ

30 ವರ್ಷ 8 ತಿಂಗಳ ಸಾರ್ಥಕ ಸೇವೆಗೆ ವಿರಾಮ: ಶಿಕ್ಷಕಿ ಅಂಬಿಕಾ ಸಿ. ಅವರಿಗೆ ಆತ್ಮೀಯ ಬೀಳ್ಕೊಡುಗೆ Teacher Ambika…

3 hours ago

ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ

ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ Ramesh H.B. has been appointed as the…

4 hours ago

ರಿಪ್ಪನ್‌ಪೇಟೆ, ಹರತಾಳು, ಗರ್ತಿಕೆರೆಯಲ್ಲಿ ರಾಯರ 355ನೇ ಆರಾಧನೆ; ಹರಿದು ಬಂದ ಭಕ್ತ ಸಾಗರ

ರಿಪ್ಪನ್‌ಪೇಟೆ, ಹರತಾಳು, ಗರ್ತಿಕೆರೆಯಲ್ಲಿ ರಾಯರ 355ನೇ ಆರಾಧನೆ; ಹರಿದು ಬಂದ ಭಕ್ತ ಸಾಗರ Thousands of devotees participated in…

4 hours ago

ಹೊಸನಗರ ಪಿಎಸ್‌ಐ ಶಂಕರ್ ಗೌಡ ಪಾಟೀಲ್ ವರ್ಗಾವಣೆ; ನೂತನ ಪಿಎಸ್‌ಐ ಆಗಿ ಸಂತೋಷ್ ಬಾಗೋಜಿ ಅಧಿಕಾರ ಸ್ವೀಕಾರ

ಹೊಸನಗರ ಪಿಎಸ್‌ಐ ಶಂಕರ್ ಗೌಡ ಪಾಟೀಲ್ ವರ್ಗಾವಣೆ; ನೂತನ ಪಿಎಸ್‌ಐ ಆಗಿ ಸಂತೋಷ್ ಬಾಗೋಜಿ ಅಧಿಕಾರ ಸ್ವೀಕಾರ Hosanagara PSI…

6 hours ago

ದೇವಸ್ಥಾನಕ್ಕೆ ತೆರಳಿದ್ದ ಪೋಷಕರು ವಾಪಸ್ ಬರುವಷ್ಟರಲ್ಲಿ ಸಂಭವಿಸಿತ್ತು ದುರಂತ – 9ನೇ ತರಗತಿ ವಿದ್ಯಾರ್ಥಿನಿ ಸಾವು

ದೇವಸ್ಥಾನಕ್ಕೆ ತೆರಳಿದ್ದ ಪೋಷಕರು ವಾಪಸ್ ಬರುವಷ್ಟರಲ್ಲಿ ಸಂಭವಿಸಿತ್ತು ದುರಂತ - 9ನೇ ತರಗತಿ ವಿದ್ಯಾರ್ಥಿನಿ ಸಾವು A tragic incident…

7 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿಜೆ ನಿಯಮ ಉಲ್ಲಂಘನೆ; ಶಿವಮೊಗ್ಗದಲ್ಲಿ ಒಟ್ಟು 5 ಪ್ರಕರಣ ದಾಖಲು

ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿಜೆ ನಿಯಮ ಉಲ್ಲಂಘನೆ; ಶಿವಮೊಗ್ಗದಲ್ಲಿ ಒಟ್ಟು 5 ಪ್ರಕರಣ ದಾಖಲು Shivamogga police have registered…

7 hours ago