ಸೊರಬ: ಬಸವರಾಜ ಬೊಮ್ಮಾಯಿ ಅವರ ನೂತನ ಸಚಿವ ಸಂಪುಟದಲ್ಲಿ ಶಾಸಕ ಕುಮಾರ್ ಬಂಗಾರಪ್ಪರವರಿಗೆ ಸಚಿವ ಸ್ಥಾನ ದೊರೆಯಲಿ ಎಂದು ಪ್ರಾರ್ಥಿಸಿ ಅವರ ಅಭಿಮಾನಿಗಳು ಶುಕ್ರವಾರ ತಾಲ್ಲೂಕಿನ ಸುಕ್ಷೇತ್ರ ಶ್ರೀ ರೇಣುಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂಧರ್ಭದಲ್ಲಿ ಮಾತನಾಡಿದ ಪುರಸಭೆ ಅಧ್ಯಕ್ಷ ಎಂ ಡಿ ಉಮೇಶ್ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪರವರ ಗರಡಿಯಲ್ಲಿ ಬೆಳೆದು ರಾಜಕೀಯ ಪ್ರವೇಶ ಪಡೆದ ಶಾಸಕ ಕುಮಾರ್ ಬಂಗಾರಪ್ಪ ಅವರು ಸೊರಬ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ರಾಜ್ಯ ಸಚಿವ ಸಂಪುಟದಲ್ಲಿ ಸಣ್ಣ ನೀರಾವರಿ ಮತ್ತು ಪೌರಾಡಳಿತ ಖಾತೆಯನ್ನು ಸಮರ್ಥವಾಗಿ ನಿಭಾಯಿಸಿದ ಅನುಭವ ಹೊಂದಿದ್ದಾರೆ. ಅವರ ರಾಜಕೀಯ ಜೀವನದಲ್ಲಿ ಯಾವುದೇ ಭ್ರಷ್ಟಾಚಾರಗಳಿಗೆ ಆಸ್ಪದ ನೀಡದಂತೆ ಧಕ್ಷ ಆಡಳಿತ ನಡೆಸಿದ್ದಾರೆ. ತಮ್ಮ ಅಧಿಕಾರ ಅವಧಿಗಳಲ್ಲಿ ತಾಲ್ಲೂಕಿಗೆ ನೀರಾವರಿ ಯೋಜನೆಗಳು ಸೇರಿದಂತೆ ಸಾವಿರ ಕೋಟಿ ರೂ. ಅನುದಾನದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಮೂಲಕ ಜನ ಮನ್ನಣೆಗೆ ಪಾತ್ರರಾಗಿರುವ ಕುಮಾರ್ ಬಂಗಾರಪ್ಪರವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.
ಬಗರ್ ಹುಕುಂ ಸಮಿತಿ ಸದಸ್ಯ ದೇವೇಂದ್ರಪ್ಪ ಚನ್ನಾಪುರ ಮಾತನಾಡಿ ಕುಮಾರ್ ಬಂಗಾರಪ್ಪ ಅವರಿಗೆ ಜಿಲ್ಲೆ ಸೇರಿದಂತೆ ನೆರೆಯ ಜಿಲ್ಲೆಗಳಲ್ಲೂ ಅವರದ್ದೇ ಆದ ಮತದಾರರು ಹಾಗೂ ಅಭಿಮಾನಿಗಳಿದ್ದಾರೆ. ಈ ನಿಟ್ಟಿನಲ್ಲಿ ಸಚಿವ ಸ್ಥಾನ ನೀಡುವುದರಿಂದ ಪಕ್ಷದ ಸಂಘಟನೆಗೂ ಸಹ ಅನುಕೂಲವಾಗಲಿದೆ. ಅವರ ರಾಜಕೀಯ ಅನುಭವದಿಂದ ಸಂಪುಟದಲ್ಲಿ ಯಾವುದೇ ಖಾತೆ ನೀಡಿದರೂ ನಿರ್ವಹಿಸುವ ಶಕ್ತಿಯನ್ನು ಹೊಂದಿದ್ದಾರೆ ಇದನ್ನು ಅರಿತು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಪಕ್ಷದ ರಾಜ್ಯಾದ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಪಕ್ಷದ ವರಿಷ್ಠರು ಸಚಿವ ಸ್ಥಾನ ನೀಡುವ ವಿಶ್ವಾಸವಿದೆ ಎಂದರು.
ಈ ಸಂಧರ್ಭದಲ್ಲಿ ಮುಖಂಡರಾದ ಭೊಗೇಶ್ ಶಿಗ್ಗಾ,ಶಿವಕುಮಾರ್ ಕಡಸೂರು,ಈಶ್ವರ ಚನ್ನಪಟ್ಟಣ,ಕೊಟ್ರೇಶ್ ಗೌಡ,ಪರಮೇಶ್ವರ ಮಣ್ಣತ್ತಿ,ರಾಜು ಕೆಂಚಿಕೊಪ್ಪ,ಮಲ್ಲಿಕಾರ್ಜುನ ವೃತ್ತಿಕೊಪ್ಪ,ಕೇಶವ ರಾಯ್ಕರ್,ಅಮಿತ್ ಗೌಡ,ಪ್ರಭು ಮೇಸ್ತ್ರಿ,ಶಿವನ ಗೌಡ ದ್ವಾರಳ್ಳಿ,ಚನ್ನಬಸಪ್ಪ ಗೌಡ ಕೋಟಿಪುರ,ಮಂಜುನಾಥ ಗುಡುವಿ,ಕನಕದಾಸ್ ಕಲ್ಲಂಬಿ,ಪ್ರಸನ್ನ ಶೇಟ್,ಪಕ್ಕೀರಪ್ಪ ಚಂದ್ರಗುತ್ತಿ,ನಾಗರಾಜ ಕಲ್ಲಕೊಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ವರದಿ : ವೆಂಕಟೇಶ್ ಚಂದ್ರಗುತ್ತಿ ಸೊರಬ
ಪೋಸ್ಟ್ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್