ಸೊರಬ: ಇಲ್ಲಿನ ಪಟ್ಟಣ ಪಂಚಾಯತ್ ಪುರಸಭೆಯಾದ ನಂತರ ಮೊದಲ ಮುಖ್ಯಾಧಿಕಾರಿಗಳಾಗಿ ಶ್ರೀ ಮಹೇಂದ್ರ ಬಿ ರವರು ಅಧಿಕಾರ ಸ್ವೀಕರಿಸಿದರು.
ಈ ಸಂಧರ್ಭದಲ್ಲಿ ನಿಯೋಜನೆಗೆ ಅವಕಾಶ ಮಾಡಿ ಕೊಟ್ಟಂತಹ ಸೊರಬ ಶಾಸಕರಾದ ಶ್ರೀಯುತ ಕುಮಾರ್ ಬಂಗಾರಪ್ಪನವರಿಗೆ ತುಂಬು ಹೃದಯದಿಂದ ಸ್ವಾಗತ ಹಾಗೂ ಅಭಿನಂದನೆಯನ್ನು ಅರ್ಪಿಸಲಾಯಿತು.
ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷರಾದ ಎಮ್ ಡಿ ಉಮೇಶ್,ಉಪಾಧ್ಯಕ್ಷರಾದ ಮಧುರಯ್ ಜಿ ಶೇಟ್,
ಸದಸ್ಯರಾದ ನಟರಾಜ ಉಪ್ಪಿನ, ಪ್ರೇಮಾ ಟೋಕಪ್ಪ,
ಜಯಲಕ್ಷ್ಮಿ ಪರಮೇಶ್ವರ್,ಪ್ರಭು ಮೇಸ್ತ್ರಿ,ಅನ್ಸರ್,
ಪ್ರಸನ್ನ ಶೇಟ್ ದೊಡ್ಮನೆ,ರಂಜನಿ,ಪ್ರವೀಣ್ ಕುಮಾರ್,ಸುಲ್ತಾನ್ ಬೇಗಂ,ಆಫ್ರಿನ್,ವೀರೇಶ್ ಮೇಸ್ತ್ರಿಮತ್ತು ಆಶ್ರಯ ಸಮಿತಿಯ ಪದಾದಿಕಾರಿಗಳಾದ ಪ್ರಭು,ಆಟೋ ಶಿವು,ಸುಂದರ್ ಹಾಗೂ ಎಲ್ಲಾ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.
ವರದಿ: ವೆಂಕಟೇಶ್ ಚಂದ್ರಗುತ್ತಿ ಸೊರಬ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್