Categories: Blog

ಸ್ವಯಂಘೋಷಿತ ಆಸ್ತಿ ತೆರಿಗೆ ಹೆಚ್ಚಳ ಅವೈಜ್ಞಾನಿಕ: ಶಿವಮೊಗ್ಗದಲ್ಲಿ ಪ್ರತಿಭಟನೆ

ಶಿವಮೊಗ್ಗ: ಇಲ್ಲಿನ ಗೋಪಿ ಸರ್ಕಲ್ ನಲ್ಲಿ ನಾಗರಿಕ ಹಿತಾಸಕ್ತಿಯ ರಕ್ಷಣಾ ಒಕ್ಕೂಟ ಸ್ವಯಂಘೋಷಿತ ಆಸ್ತಿ ತೆರಿಗೆ ಹೆಚ್ಚಳ ಖಂಡಿಸಿ ಪೋಸ್ಟ್ ಕಾರ್ಡ್ ಚಳುವಳಿಯನ್ನು ನಡೆಸಿತು.

ಕೋವಿಡ್ ಸಂಕಷ್ಟ ಕಾಲದಲ್ಲಿ ಲಾಕ್ಡೌನ್ ನಿಂದ ಆರ್ಥಿಕ ಪರಿಸ್ಥಿತಿ ಹದಗೆಟ್ಟು ಇರುವಂತಹ ಇಂತಹ ಸಂದರ್ಭದಲ್ಲಿ, ಗಾಯದ ಮೇಲೆ ಬರೆ ಎಳೆಯುವಂತೆ 2021- 22 ನೇ ಸಾಲಿನ ಆಸ್ತಿ ತೆರಿಗೆಯನ್ನು ಕಾನೂನು ತಿದ್ದುಪಡಿ ಮಾಡುವ ಮೂಲಕ ಅವೈಜ್ಞಾನಿಕವಾಗಿ ಹೆಚ್ಚಿಸಿದೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ. ಎಸ್ಸಾರ್ ದರ ಆಧರಿಸಿ ವಾಸದ ಮನೆ, ವಾಣಿಜ್ಯ ಕಟ್ಟಡಗಳು, ಕೈಗಾರಿಕೆಗಳು ಹಾಗೂ ಖಾಲಿ ನಿವೇಶನಗಳ ಮೇಲೆ  ಹಿಂದಿನ ವಾರ್ಷಿಕ ತೆರಿಗೆ ಗಿಂತ ಹಲವು ಪಟ್ಟು ಹೆಚ್ಚು ತೆರಿಗೆ ವಿಧಿಸಿರುವುದು ತೆರಿಗೆದಾರರ ಮೇಲಿನ ಗದಾಪ್ರಹಾರ ವಾಗಿದೆ ಎಂದು ಪ್ರತಿಭಟನಾಕಾರರು ಬೇಸರಿಸಿದರು.

ಹಲವು ರಾಜ್ಯಗಳಲ್ಲಿ ಆಸ್ತಿತೆರಿಗೆ ಮೇಲೆ ಶೇಕಡ 50 ರಷ್ಟು ವಿನಾಯಿತಿ ಇದೆ ಆದರೆ ಕರ್ನಾಟಕದಲ್ಲಿ ಏಕೆ ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿದರು.
ಅವೈಜ್ಞಾನಿಕವಾದ ಎಸ್ಸಾರ್ ಕಾಯ್ದೆ ಹಿಂಪಡೆಯಬೇಕು, ಶೇಕಡಾ 50ರಷ್ಟು ವಿನಾಯಿತಿಯನ್ನು ಸ್ವಯಂಘೋಷಿತ ಆಸ್ತಿ ತೆರಿಗೆ ಮೇಲೆ ನೀಡಬೇಕು, ಆಸ್ತಿ ತೆರಿಗೆ ತಿದ್ದುಪಡೆಯ ಮಸೂದೆಯನ್ನು
ತಕ್ಷಣವೇ ಹಿಂದಕ್ಕೆ ಪಡೆಯಬೇಕು ಎಂದು ಪೋಸ್ಟ್ ಕಾರ್ಡ್ ಚಳುವಳಿಯಲ್ಲಿ ತಿಳಿಸಿದರು.



ವರದಿ: ರಾಮನಾಥ್
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…

60 minutes ago

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…

1 hour ago

ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆ ಮೇಲೆ ಹಲ್ಲೆ; ಬಂಗಾರದ ಸರ ಕಿತ್ತುಕೊಂಡು ದುಷ್ಕರ್ಮಿ ಪರಾರಿ

ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆ ಮೇಲೆ ಹಲ್ಲೆ; ಬಂಗಾರದ ಸರ ಕಿತ್ತುಕೊಂಡು ದುಷ್ಕರ್ಮಿ ಪರಾರಿ A woman was allegedly…

1 hour ago

30 ವರ್ಷ 8 ತಿಂಗಳ ಸಾರ್ಥಕ ಸೇವೆಗೆ ವಿರಾಮ: ಬರುವೆ ಶಾಲೆಯ ಶಿಕ್ಷಕಿ ಅಂಬಿಕಾ ಸಿ. ಅವರಿಗೆ ಆತ್ಮೀಯ ಬೀಳ್ಕೊಡುಗೆ

30 ವರ್ಷ 8 ತಿಂಗಳ ಸಾರ್ಥಕ ಸೇವೆಗೆ ವಿರಾಮ: ಶಿಕ್ಷಕಿ ಅಂಬಿಕಾ ಸಿ. ಅವರಿಗೆ ಆತ್ಮೀಯ ಬೀಳ್ಕೊಡುಗೆ Teacher Ambika…

13 hours ago

ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ

ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ Ramesh H.B. has been appointed as the…

14 hours ago

ರಿಪ್ಪನ್‌ಪೇಟೆ, ಹರತಾಳು, ಗರ್ತಿಕೆರೆಯಲ್ಲಿ ರಾಯರ 355ನೇ ಆರಾಧನೆ; ಹರಿದು ಬಂದ ಭಕ್ತ ಸಾಗರ

ರಿಪ್ಪನ್‌ಪೇಟೆ, ಹರತಾಳು, ಗರ್ತಿಕೆರೆಯಲ್ಲಿ ರಾಯರ 355ನೇ ಆರಾಧನೆ; ಹರಿದು ಬಂದ ಭಕ್ತ ಸಾಗರ Thousands of devotees participated in…

14 hours ago