ಸೊರಬ: ಕುಮಾರ್ ಬಂಗಾರಪ್ಪರವರಿಗೆ ಸಚಿವ ಸ್ಥಾನ ಸಿಗಲೆಂದು ತಾಲೂಕ್ ಬಿಜೆಪಿ ಮುಖಂಡರಿಂದ ಚಂದ್ರಗುತ್ತಿ ಶ್ರೀ ರೇಣುಕಾ ದೇವಿಗೆ ವಿಶೇಷ ಪೂಜೆ:
ಸೊರಬ: ಬಸವರಾಜ ಬೊಮ್ಮಾಯಿ ಅವರ ನೂತನ ಸಚಿವ ಸಂಪುಟದಲ್ಲಿ ಶಾಸಕ ಕುಮಾರ್ ಬಂಗಾರಪ್ಪರವರಿಗೆ ಸಚಿವ ಸ್ಥಾನ ದೊರೆಯಲಿ ಎಂದು ಪ್ರಾರ್ಥಿಸಿ ಅವರ ಅಭಿಮಾನಿಗಳು ಶುಕ್ರವಾರ ತಾಲ್ಲೂಕಿನ ಸುಕ್ಷೇತ್ರ ಶ್ರೀ ರೇಣುಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಪುರಸಭೆ ಅಧ್ಯಕ್ಷ ಎಂ ಡಿ ಉಮೇಶ್ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪರವರ ಗರಡಿಯಲ್ಲಿ ಬೆಳೆದು ರಾಜಕೀಯ ಪ್ರವೇಶ ಪಡೆದ ಶಾಸಕ ಕುಮಾರ್ ಬಂಗಾರಪ್ಪ ಅವರು ಸೊರಬ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ರಾಜ್ಯ ಸಚಿವ ಸಂಪುಟದಲ್ಲಿ…