ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ
ಬೆಂಗಳೂರು: ಇಂದು ಇಲ್ಲಿ ನಗರದ ಕ್ಯಾಪಿಟಲ್ ಹೊಟೇಲ್ ನಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ರವರನ್ನು ಆಯ್ಕೆ ಮಾಡಲಾಗಿದೆ. ಉತ್ತರ ಕರ್ನಾಟಕ ಮೂಲದ ಲಿಂಗಾಯತ ಸಮುದಾಯಕ್ಕೆ ಸೇರಿದ ಬೊಮ್ಮಾಯಿಯವರ ಆಯ್ಕೆಯಿಂದ ಎಲ್ಲಾ ಲೆಕ್ಕಾಚಾರ ತಲೆಕೆಳಗಾಗಿದೆ.ನಿರಾಣಿ,ಬೆಲ್ಲದ್,ಸಂತೋಷ್ ಹಾಗೂ ಜೋಶಿ ಯವರ ಹೆಸರು ಕೇಳಿ ಬಂದಿತ್ತು.