“ಉಳ್ಳವರಿಗೆ ಬೆಣ್ಣೆಯೂಟ; ಹಸಿದವರಿಗೆ ಬಣ್ಣದ ಮಾತು”. ಕೇಂದ್ರ ಸರಕಾರದ ಧ್ವಿಮುಖ ನೀತಿ: ಪಿ ಚಿದಂಬರಂ
ನವದೆಹಲಿ: ಒಂದು ನೇರಾನೇರ ಸಂವಾದದ ತಿರುಳು ಇದು. ಇಂದು (೧೩ಜುಲೈ) ರಾತ್ರಿ ‘ಇಂಡಿಯಾ ಟುಡೇʼ ಎಂಬ ಇಂಗ್ಲಿಷ್ ಚಾನೆಲ್ಲಿನಲ್ಲಿ ರಾಜದೀಪ್ ಸರ್ದೇಸಾಯಿ ಮತ್ತು ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ನಡುವೆ ನಡೆದ ಸಂವಾದ ಇಲ್ಲಿದೆ. ನಮ್ಮ ಕನ್ನಡ ಚಾನೆಲ್‌ಗಳಲ್ಲಾಗಲೀ ಪತ್ರಿಕೆಗಳಲ್ಲಾಗಲೀ ಕಾಣಸಿಗದ ಸ್ಪಷ್ಟ ಚಿತ್ರಣವನ್ನು ಇಲ್ಲಿ ಕಾಣಬಹುದು. ನಾವು ಮಧ್ಯಮವರ್ಗದವರು ಎಂಥ ಇಕ್ಕಟ್ಟಿನಲ್ಲಿ ಸಿಲುಕಿದ್ದೇವೆ! ರಾಜದೀಪ್ ಸರ್ದೇಸಾಯಿ: ಅಲ್ಲಾರೀ, ಕೇಂದ್ರ ಸರಕಾರ ಹೇಳುತ್ತೆ, ಪೆಟ್ರೋಲ್ ಬೆಲೆ ಏರಿಕೆಗೆ ತಾನೊಬ್ಬನೇ ಕಾರಣ ಅಲ್ಲ; ರಾಜ್ಯ ಸರಕಾರಗಳೂ ತೆರಿಗೆ ಹಾಕುತ್ತಿವೆ….